ತುಮಕೂರು: ಮಹಾತ್ಮ ಗಾಂಧೀಜಿ ಹಂತಕ ನಾಥೂರಾಮ್‌ ಗೋಡ್ಸೆ ಅಪ್ಪಟ ದೇಶಭಕ್ತ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದ ತುಮಕೂರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಟಿ.ಎಚ್‌.ಹನುಮಂತರಾಜು ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಹನುಮಂತರಾಜು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ನಾಥೂರಾಮ್‌ ಗೋಡ್ಸೆ ಒಬ್ಬ ಅಪ್ರತಿಮ ದೇಶಭಕ್ತ, ಆತ ತನ್ನ ಅಸ್ಥಿಯನ್ನು ಸಿಂಧೂ ನದಿಯಲ್ಲಿ ವಿಸರ್ಜಿಸಬೇಕೆಂದು ಬಯಸಿದ್ದರು. ಆದರೆ, ಇಂದಿಗೂ ಅಸ್ಥಿ ವಿಸರ್ಜಿಸದೇ ಹಾಗೇ ಇಟ್ಟಿದ್ದಾರೆ ಎಂದು ಪೋಸ್ಟ್‌ ಮಾಡಿದ್ದರು.

ಹನುಮಂತರಾಜು ಪೋಸ್ಟ್‌ಗೆ ಸಾಕಷ್ಟುವಿರೋಧ ವ್ಯಕ್ತವಾಗಿತ್ತು. ಆದರೆ, ಹನುಮಂತರಾಜು ತಮಮ್ಮ ಪೋಸ್ಟ್‌ ಅನ್ನು ಸಮರ್ಥಿಸಿಕೊಂಡಿದ್ದರು. ಇದು ರಾಜ್ಯದಲ್ಲಿ ಬಿಜೆಪಿಗೆ ಮುಜುಗರ ತಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಹನುಮಂತರಾಜು ಅವರನ್ನು ಪಕ್ಷದಿಂದ ಉಚ್ಚಾಟಿಸಿ, ಆದೇಶ ಹೊರಡಿಸಿದ್ದಾರೆ

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.