ಸಾಧಾರಣ ಮಳೆಯಾಗುವ ಸಂಭವ : ಹವಾಮಾನ ಇಲಾಖೆ
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ತುಮಕೂರು ಜಿಲ್ಲೆಯಾದ್ಯಂತ ನ. 26ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಗಾಳಿಯು ಗಂಟೆಗೆ ಸರಾಸರಿ ವೇಗದಲ್ಲಿ ಬೀಸಲಿದ್ದು ಮುಂದಿನ ೫ ದಿನಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ
ತಿಪಟೂರು: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ತುಮಕೂರು ಜಿಲ್ಲೆಯಾದ್ಯಂತ ನ. 26ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಗಾಳಿಯು ಗಂಟೆಗೆ ಸರಾಸರಿ ವೇಗದಲ್ಲಿ ಬೀಸಲಿದ್ದು ಮುಂದಿನ ೫ ದಿನಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ
ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಕಟಾವು ಮತ್ತು ಒಕ್ಕಣೆ ಮಾಡುವುದನ್ನು ಮುಂದೂಡಬೇಕೆಂದು ತಾಲೂಕಿನ ಕೊನೇಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿರುವ ಜಿಲ್ಲಾ ಕೃಷಿ ಹವಾಮಾನ ಘಟಕದ ನೋಡಲ್ ಅಧಿಕಾರಿಗಳು ಹಾಗೂ ಮುಖ್ಯಸ್ಥರಾದ ಡಾ. ವಿ. ಗೋವಿಂದಗೌಡ ಮಾಹಿತಿ ನೀಡಿರುತ್ತಾರೆ.
5 ದಿನ ನಿರಂತರ ಮಳೆ
ಬೆಂಗಳೂರು (ನ.21): ಬಂಗಾಳ ಕೊಲ್ಲಿಯ ತೀರ ಪ್ರದೇಶ ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸುಳಿಗಾಳಿ ಎದ್ದಿದೆ. ಇದರ ಪರಿಣಾಮವಾಗಿ ಇಂದಿನಿಂದ ಮೂರು ದಿನಗಳ ಕಾಲ (ನ.21ರಿಂದ ನ.25ರವರೆಗೆ) ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಆದರೆ, ಈಗ ಕೆಲವು ರೈತರು ನೀರಾವರಿ ಆಶ್ರಯದಲ್ಲೊ ಬೆಳೆದ ಬೆಳೆಗಳನ್ನು ಕಟಾವು ಮಾಡುತ್ತಿದ್ದು, ರೈತರ ಬೆಳೆ ಕಟಾವಿಗೆ ಕಂಟಕವಾಗುವುದೇ ಎಂಬ ಆತಂಕ ಎದುರಾಗಿದೆ.
ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿದ್ದರೂ ಅದರ ಪರಿಣಾಮ ಕರ್ನಾಟಕದ ಮೇಲೆ ಹೆಚ್ಚಾಗಿ ಬೀರುವುದಿಲ್ಲ. ಆದರೆ, ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಮಳೆ ಕೊರತೆ ಉಂಟಾಗಿದ್ದು, 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ದಕ್ಷಿಣ ಒಳನಾಡಿನಲ್ಲಿ ಶೇ.31ರಷ್ಟು, ಉತ್ತರ ಒಳನಾಡಿನಲ್ಲಿ ಶೇ.74 ಹಾಗೂ ಮಲೆನಾಡಿನಲ್ಲಿ ಶೇ.17ರಷ್ಟು ಮಳೆ ಕೊರತೆ ಉಂಟಾಗಿದೆ. ಸದ್ಯಕ್ಕೆ ಮಳೆ ಬಿಡುವು ಕೊಟ್ಟಿರುವುದರಿಂದ ಮುಂಗಾರು ಹಂಗಾಮಿನ ಕೊಯ್ಲು ಮಾಡುವಂತಹ ಭತ್ತ, ರಾಗಿ, ಶೇಂಗಾ ಮೊದಲಾದ ಬೆಳೆಗಳಿಗೆ ಅನುಕೂಲವಾಗಿದೆ.
ಅನ್ನಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದ ಕೊಡುಗೆ ಶೂನ್ಯ: ಪಡಿತರ ಬಿಲ್‌ನಲ್ಲಿ ಬಯಲಾಯ್ತು ಗ್ಯಾರಂಟಿ ನಾಟಕ!
ಆದರೆ, ಈಗ ಬಂಗಾಳಕೊಲ್ಲಿಯಲ್ಲಿ ಉಂಟಾದ ಮೇಲ್ಮೈ ಸುಳಿಗಾಳಿಯಿಂದ ಕರ್ನಾಟದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಇದರಿಂದ ರೈತರ ಮುಂಗಾರು ಹಂಗಾಮಿನ ಬೆಳೆಗಳ ಕಟಾವಿಗೆ ಸಮಸ್ಯೆ ಆಗುವ ಸಾಧ್ಯತೆಯಿದೆ. ರಾಗಿ, ಭತ್ತ, ಮೆಕ್ಕೆಜೋಳ ಹಾಗೂ ಇತರೆ ಬೆಳೆಗಳ ಕಟಾವಿಗೆ ರೈತರು ಸಮಸ್ಯೆ ಎದುರಿಸಬಹುದು. ಇನ್ನು ತರಕಾರಿ ಬೆಳೆಗಳಾದ ಈರುಳ್ಳಿ, ಒಣ ಮೆಣಸಿನಕಾಯಿ ಹಾಗೂ ಇತರೆ ಬೆಳೆಗಳ ಕಟಾವಿಗೆ ಕೊಂಚ ಸಮಸ್ಯೆ ಆಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ನ.22ರವರೆಗೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಭಾಗದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಮಾತ್ರ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.