ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ

 ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಹೆಚ್ಚುವರಿ ಬಸ್ಸು ಓಡಿಸವ ಮೂಲಕ ಗ್ರಾಮೀಣ ಭಾಗದಿಂದ ನಗರ ಪ್ರದೇಶದ ಶಾಲಾ ಕಾಲೇಜುಗಳಿಗೆ ಬರುವ ವಿಧ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ನಿವಾರಿಸುವಂತೆ ಒತ್ತಾಯಿಸಿ ಕರುನಾಡ ವಿಜಯಸೇನೆ ವಿಧ್ಯಾರ್ಥಿ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

  Problem for students due to Shakti Yojana snr

  ತುಮಕೂರು : ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಹೆಚ್ಚುವರಿ ಬಸ್ಸು ಓಡಿಸವ ಮೂಲಕ ಗ್ರಾಮೀಣ ಭಾಗದಿಂದ ನಗರ ಪ್ರದೇಶದ ಶಾಲಾ ಕಾಲೇಜುಗಳಿಗೆ ಬರುವ ವಿಧ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ನಿವಾರಿಸುವಂತೆ ಒತ್ತಾಯಿಸಿ ಕರುನಾಡ ವಿಜಯಸೇನೆ ವಿಧ್ಯಾರ್ಥಿ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಪವನ್ ಯಾದವ್, ಶಕ್ತಿಯೋಜನೆಯ ಉಪಯೋಗ ಪಡೆಯುವ ಮಹಿಳೆಯರೇ ಹೆಚ್ಚು ತುಂಬಿರುತ್ತಾರೆ. ಇದರಿಂದ ಚಾಲಕ ಮತ್ತು ನಿರ್ವಾಹಕರು ಬಸ್‌ ತುಂಬಿದ ನಂತರ ವಿದ್ಯಾರ್ಥಿಗಳನ್ನು ಹತ್ತಿಸದೇ ಹಾಗೇ ಹೋಗುತ್ತಾರೆ. ಇದರಿಂದ ವಿದ್ಯಾರ್ಥಿಗಳಿಗೆ ಬಸ್‌ ಇಲ್ಲದೇ ಪರದಾಡುವ ಸ್ಥಿತಿ ಬಂದೊದಗಿದೆ ಎಂದರು.

ವಿದ್ಯಾರ್ಥಿಗಳು ರಿಯಾಯಿತಿ ದರದ ಪಾಸ್ ಗಾಗಿ ಒಂದು ವರ್ಷ ಮುಂಚಿತ ಹಣ ಪಾವತಿಸಿ ಪಾಸ್ ಪಡೆದಿರುತ್ತೇವೆ. ಸೆಮಿಸ್ಟರ್ ಪದ್ದತಿ ಇರುವುದರಿಂದ ವಿಧ್ಯಾಭ್ಯಾಸ ಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ಸರಕಾರ ಬೆಳಗ್ಗೆ ಮತ್ತು ಸಂಜೆ ವೇಳೆಗೆ ಹೆಚ್ಚುವರಿ ಬಸ್ಸು ಓಡಿಸಿ ಅನುಕೂಲ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ಕರುನಾಡ ವಿಜಯಸೇನೆ ನೇತೃತ್ವದಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಸುವುದಾಗಿ ಪವನ್ ಯಾದವ್ ನುಡಿದರು.

ಜಿಲ್ಲಾಧ್ಯಕ್ಷ ಅರುಣ್ ಕೃಷ್ಣ ಯ್ಯ ಮಾತನಾಡಿ, ಎಲ್ಲಾ ಹಳ್ಳಿಗಳಿಗೂ ಸೂಕ್ತ ಸಮಯಕ್ಕೆ ಬಸ್‌ ಒದಗಿಸುವ ಹೆಚ್ಚುವರಿ ಬಸ್‌ ಬಿಟ್ಟು ಸರಕಾರ ವಿದ್ಯಾರ್ಥಿಗಳ ಜೊತೆ ಇದೆ ಎಂದು ತೋರಿಸಿಕೊಡಬೇಕಾಗಿದೆ, ಇಲ್ಲವಾದಲ್ಲಿ ವಿದ್ಯಾರ್ಥಿಗಳೊಂದಿಗೆ ಉಗ್ರ ಹೋರಾಟ ನಡೆಸಲಾಗತ್ತದೆ ಎಂದರು.

ವಿಧ್ಯಾರ್ಥಿ ಘಟಕದ ಪ್ರಧಾನ ಕಾರ್ಯದರ್ಶಿ ಪುನಿತ್, ಹರೀಶ್ ಉಪಾಧ್ಯಕ್ಷರಾದ ಹೇಮಂತ್, ಮನ್ಸೂರ್, ಯುವರಾಜ್, ಪವನಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹರೀಶ್ ಸಿ.ಎಂ ಪಾಲ್ಗೊಂಡಿದ್ದರು.

100 ಕೋಟಿ ಸನಿಹಕ್ಕೆ ಶಕ್ತಿ ಯೋಜನೆ ಪ್ರಯಾಣಿಕರು

ಬೆಂಗಳೂರು(ನ.11):  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಅಡಿಯಲ್ಲಿ 92 ಕೋಟಿ ಮಹಿಳಾ ಪ್ರಯಾಣಿಕರು ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ್ದು, ಪ್ರತಿದಿನದ ಪ್ರಯಾಣಿಕರ ಆಧಾರದಲ್ಲಿ ಈ ತಿಂಗಳ ಅಂತ್ಯದೊಳಗೆ ಆ ಸಂಖ್ಯೆ 100 ಕೋಟಿ ದಾಟುವ ಕುರಿತು ಸಾರಿಗೆ ನಿಗಮಗಳು ಅಂದಾಜಿಸಿವೆ.

ದಿನದಿಂದ ದಿನಕ್ಕೆ ಶಕ್ತಿ ಯೋಜನೆ ಅಡಿಯಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಪ್ರತಿದಿನ ಸರಾಸರಿ 60ರಿಂದ 65 ಲಕ್ಷ ಮಹಿಳೆಯರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಸಾಮಾನ್ಯ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಕಳೆದ ಜೂನ್‌ 11ರಂದು ಆರಂಭವಾದ ಶಕ್ತಿ ಯೋಜನೆ ಅಡಿಯಲ್ಲಿ ಈವರೆಗೆ 92.75 ಕೋಟಿ ಮಹಿಳಾ ಪ್ರಯಾಣಿಕರು ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ. ಪ್ರತಿದಿನದ ಪ್ರಯಾಣಿಕರನ್ನು ಗಮನಿಸಿದರೆ ಮುಂದಿನ 12ರಿಂದ 13 ದಿನಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ 100 ಕೋಟಿ ದಾಟುವ ಸಾಧ್ಯತೆಗಳಿವೆ. ಅಲ್ಲದೆ, ನ. 9ಕ್ಕೆ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್‌ ಮೌಲ್ಯ 2,200 ಕೋಟಿ ರು. ದಾಟಿದೆ.

ಶಕ್ತಿ ಯೋಜನೆ ಬೆನ್ನಲ್ಲೇ ಸಾರಿಗೆ ನೌಕರರಿಗೆ ಸಿಹಿಸುದ್ದಿ ಕೊಟ್ಟ ಕೆಎಸ್‌ಆರ್‌ಟಿಸಿ

ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿರೋಧ ಪಕ್ಷಗಳ ಟೀಕೆಯ ನಡುವೆ ಹಾಗೂ ಹಲವು ಸವಾಲುಗಳ ನಡುವೆ ಶಕ್ತಿ ಯೋಜನೆ ಯಶಸ್ವಿಗೊಂಡಿದೆ. ಶೀಘ್ರದಲ್ಲಿ 100 ಕೋಟಿ ಮಹಿಳೆಯರು ಉಚಿತ ಬಸ್‌ ಪ್ರಯಾಣದ ಸೇವೆ ಪಡೆಯುತ್ತಾರೆ. ಹೀಗಾಗಿ ನ. 17ರಂದು ವಿಶೇಷ ಕಾರ್ಯಕ್ರಮ ಆಯೋಜಿಸುವ ಚಿಂತನೆ ಮಾಡಲಾಗಿದೆ ಎಂದಿದ್ದಾರೆ.

Latest Videos
Follow Us:
Download App:
  • android
  • ios