'ಸಿದ್ಧರಾಮಯ್ಯ ವಿಪಕ್ಷ ನಾಯಕನಾದ್ರೆ ರಾಜ್ಯದ ಸಮಸ್ಯೆ ಪರಿಹಾರ'
ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕ ಆದರೆ ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯ ಎಂದು ಮಾಜಿ ಸಚಿವ ಎನ್. ಚಲುವರಾಯ ಸ್ವಾಮಿ ಹೇಳಿದ್ದಾರೆ. ಅವರಿಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಶಕ್ತಿ ಮತ್ತು ಎದೆಗಾರಿಕೆ ಇದೆ. ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದಿದ್ದಾರೆ.
ಮಂಡ್ಯ(ಅ.07): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದಲ್ಲಿ ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಸಾಧ್ಯ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಭಾನುವಾರ ಮದ್ದೂರಿನಲ್ಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರು ಸಿದ್ದರಾಮಯ್ಯ ಅವರಿಗೆ ಸಾಮೂಹಿಕ ನಾಯಕತ್ವದ ಜವಾಬ್ದಾರಿ ನೀಡಬೇಕು. ಅವರಿಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಶಕ್ತಿ ಮತ್ತು ಎದೆಗಾರಿಕೆ ಇದೆ. ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದಿದ್ದಾರೆ.
ದಸರಾ ಉದ್ಯೋಗ ಮೇಳದಲ್ಲಿ 49 ಜನಕ್ಕೆ ಕೆಲಸ
ಪ್ರಸ್ತುತ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಅನಿವಾರ್ಯ. ಅವರು ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗುವುದರಿಂದ ರಾಜ್ಯದ ರೈತರು ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದನದಲ್ಲಿ ಹೋರಾಟ ನಡೆಸಲಿದ್ದಾರೆ ಎಂದು ಅಭಿಪ್ರಾಯಪಟ್ಟರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರುಗಳು ಒಂದೆಡೆ ಕಲೆತು ಸಣ್ಣ ಪುಟ್ಟಭಿನ್ನಾಭಿಪ್ರಾಯಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದಿದ್ದಾರೆ.
ಅನುಕಂಪ ಗಿಟ್ಟಿಸೋದು ಇನ್ನಾದ್ರು ಬಿಡಿ: ಎಚ್‌ಡಿಕೆ ನಡೆಗೆ ಚೆಲುವರಾಯಸ್ವಾಮಿ ಕಿಡಿ
ಈ ಬಗ್ಗೆ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಸಾಮೂಹಿಕ ನಾಯಕತ್ವದಲ್ಲಿ ಹೋಗುವಂತೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು. ಮುಂದಿನ ದಿನಗಳಲ್ಲಿ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ಎದುರಾಗಲಿರುವ ಸಾಧ್ಯತೆ ಇದೆ. ಸಿದ್ದರಾಮಯ್ಯರಿಗೆ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವುದು ಸೂಕ್ತ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು.
ಮಂಡ್ಯ: 'ಮೋದಿ- ಬಿಎಸ್‌ವೈ ಸಂಬಂಧ ಹಳಸಿದೆ'..!