ಶಿಕ್ಷಣದಿಂದ ಹೆಣ್ಣು ಮಕ್ಕಳ ಪ್ರಗತಿ: ಸಚಿವ ಮುನಿಯಪ್ಪ
ತಾಲೂಕಿನ ಬಾಲಕಿಯರು ಶೈಕ್ಷಣಿಕ ಪ್ರಗತಿ ಸಾಧಿಸಬೇಕೆಂಬ ದೃಷ್ಟಿಯಿಂದ ಪುರಸಭೆ ವ್ಯಾಪ್ತಿಗೆ ಸೇರಿದ ನೀಲೇರಿ ಗ್ರಾಮದ ಬಳಿ ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ದೇವನಹಳ್ಳಿ (ಅ.29): ತಾಲೂಕಿನ ಬಾಲಕಿಯರು ಶೈಕ್ಷಣಿಕ ಪ್ರಗತಿ ಸಾಧಿಸಬೇಕೆಂಬ ದೃಷ್ಟಿಯಿಂದ ಪುರಸಭೆ ವ್ಯಾಪ್ತಿಗೆ ಸೇರಿದ ನೀಲೇರಿ ಗ್ರಾಮದ ಬಳಿ ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಇಲ್ಲಿನ ಡಾ. ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಪ್ರತಿಭೆ ತೋರಿಸಿ ಸಾಧನೆ ಮಾಡುತ್ತಿದ್ದಾರೆ.
ತಾಲೂಕಿನ ಹೆಣ್ಣುಮಕ್ಕಳು ಶಿಕ್ಷಣದಲ್ಲಿ ಪ್ರಗತಿ ಸಾಧಿಸಿದರೆ ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ಎಲ್ಲ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಎಲ್ಲ ವರ್ಗದ ಜನರನ್ನು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸಮವಾಗಿ ಕಾಣುವಂತ ದಿನಗಳು ಕಾಣಬೇಕಿದೆ ಎಂದು ಹೇಳಿದರು. ರಾಜ್ಯ ಹಣಕಾಸು ಆಯೋಗ ಅಧ್ಯಕ್ಷ ಹಾಗು ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುವ ಹಣದ ಬಗ್ಗೆ ಸಾರ್ವಜನಿಕರು ಸಲಹೆ ನೀಡಬಹುದು. ಈಗಿನ ಸರ್ಕಾರ ನನ್ನ ಮೇಲೆ ಮಹತ್ತರವಾದ ಜವಾಬ್ದಾರಿ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.
ಅರ್ಕಾವತಿ ಎಡ-ಬಲ ದಂಡೆಯಲ್ಲಿ ವಾಕ್ಪಾತ್ ನಿರ್ಮಾಣ: ರಾಜ್ಯ ಸರ್ಕಾರದಿಂದ 126 ಕೋಟಿ!
ಗೋಖರೆ ಗ್ರಾಮದ ಬಳಿ ನಿರ್ಮಾಣವಾಗಿರುವ ಮಹರ್ಷಿ ವಾಲ್ಮೀಕಿ ಭವನವನ್ನು ಕೆಲವೇ ದಿನಗಳಲ್ಲಿ ಸಂಬಂಧಿಸಿದ ಸಚಿವರಿಂದ ಉದ್ಘಾಟನೆ ಮಾಡಿಸಲಾಗುವುದು ಎಂದು ಹೇಳಿದರು. ಸಮಾರಂಭದಲ್ಲಿ ತಾಲೂಕು ವಾಲ್ಮೀಕಿ ನಾಯಕ ಸಮಾಜ ಅಧ್ಯಕ್ಷ ಎನ್.ನಾಗೇಶಬಾಬು ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಎಂ. ಬಸವರಾಜು ಮಹರ್ಷಿ ವಾಲ್ಮೀಕಿ ಚರಿತ್ರೆಯ ಬಗ್ಗೆ ಉಪನ್ಯಾಸ ನೀಡಿದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತಿ ಉಪ ನಿರ್ದೇಶಕ ರಮೇಶ್, ತಹಸೀಲ್ದಾರ್ ಶಿವರಾಜ್, ತಾಪಂ ಇಒ ಸಿ.ಎಸ್. ಶ್ರೀನಾಥಗೌಡ, ಪುರಸಭಾ ಮುಖ್ಯಾಧಿಕಾರಿ ದೊಡ್ಡಮಲವಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಎಂ. ಎಲ್. ನಳಿನಾಕ್ಷಿ , ಜಿಪಂ ಮಾಜಿ ಅಧ್ಯಕ್ಷ ಬಿ.ರಾಜಣ್ಣ, ಪುರಸಭಾ ಮಾಜಿ ಅಧ್ಯಕ್ಷ ಎಂ. ನಾರಾಯಣಸ್ವಾಮಿ, ಲೋಕೇಶ್, ರಾಮಚಂದ್ರಪ್ಪ, ಡಾ. ನರಸಿಂಹಮೂರ್ತಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ನಾಯಕ ಸಮಾಜದ ಸಾಧಕರನ್ನು ಗೌರವಿಸಲಾಯಿತು.
ಬೆಂಗಳೂರಿಗೆ ರಾಮನಗರವನ್ನು ಸೇರಿಸಿದರೆ ರೈತರ ಕೃಷಿಭೂಮಿಗೆ ಸಂಚಕಾರ: ಅಶ್ವತ್ಥ ನಾರಾಯಣ
ಲೋಕ ಕಲ್ಯಾಣಾರ್ಥ ರಾಮಕೋಟಿ ಬರೆವೆ: ಶ್ರೀರಾಮ ನನ್ನಿಷ್ಟ ದೇವರು ಹಾಗೂ ಮಹಾಪುರುಷರು. ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷ ನಾನು ರಾಮಕೋಟಿ ಬರೆಯುತ್ತೇನೆ. ಶ್ರೀರಾಮರ ಬಗ್ಗೆ ಪಠಣ ಮಾಡುತ್ತೇನೆ. ಏಕೆಂದರೆ ಮಳೆ ಬೆಳೆ ಸಮೃದ್ಧವಾಗಿ ಆಗಲಿ. ನಾಡಿನ ಜನತೆ ಸುಖ ಸಂತೋಷ, ಆರೋಗ್ಯವಂತರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.