Mangaluru: ಗೋ ಹತ್ಯೆ ನಡೆಸುವವರ ವಿರುದ್ದ ಮಂಗಳೂರಿನಲ್ಲಿ ಆಸ್ತಿ ಮುಟ್ಟುಗೋಲು ಅಸ್ತ್ರ!

ಗೋ ಹತ್ಯೆ ನಡೆಸುವವರ ವಿರುದ್ದ ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಆಸ್ತಿ ಮುಟ್ಟುಗೋಲು ಅಸ್ತ್ರ ಪ್ರಯೋಗಕ್ಕೆ ಸಿದ್ದತೆ ನಡೆದಿದ್ದು, ಮಂಗಳೂರು ಪೊಲೀಸರು ‌ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪ್ರಕ್ರಿಯೆ ಶುರು ಮಾಡಿದ್ದಾರೆ.

property will be confiscated if cow is slaughtered illegally says mla bharath shetty in mangaluru gvd

ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ‌ಮಂಗಳೂರು

ಮಂಗಳೂರು (ಜು.08): ಗೋ ಹತ್ಯೆ ನಡೆಸುವವರ ವಿರುದ್ದ ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಆಸ್ತಿ ಮುಟ್ಟುಗೋಲು ಅಸ್ತ್ರ ಪ್ರಯೋಗಕ್ಕೆ ಸಿದ್ದತೆ ನಡೆದಿದ್ದು, ಮಂಗಳೂರು ಪೊಲೀಸರು ‌ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪ್ರಕ್ರಿಯೆ ಶುರು ಮಾಡಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಗೋ ಹತ್ಯೆ ಮತ್ತು ಗೋಮಾಂಸ ಮಾರಾಟ ಪ್ರಕರಣದಲ್ಲಿ ಈ ಪ್ರಕ್ರಿಯೆ ಶುರುವಾಗಿದೆ. ಕಳೆದ ಭಾನುವಾರ ಅರ್ಕುಳ ಎಂಬಲ್ಲಿ ದಾಳಿ ನಡೆಸಿ 95 ಕೆ.ಜಿ ಗೋ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಖಾಲಿದ್ ಎಂಬವರ ಶೆಡ್ ನಲ್ಲಿ ಬಾಶಿತ್ ಎಂಬಾತನಿಂದ ಗೋ ಹತ್ಯೆ ನಡೆಯುತ್ತಿತ್ತು.‌ 

ಸದ್ಯ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಸೂಚನೆ ಮೇರೆಗೆ ಕಂದಾಯ ಇಲಾಖೆಯಿಂದ ಆಸ್ತಿ ಮುಟ್ಟುಗೋಲು ಅಸ್ತ್ರ ಪ್ರಯೋಗಕ್ಕೆ ತಯಾರಿ ನಡೆದಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಾಂ 8 (5) ಅಡಿಯಲ್ಲಿ ಪ್ರಕ್ರಿಯೆ ಶುರುವಾಗಿದ್ದು, ಆರೋಪಿಗಳ ಸ್ವತ್ತು, ಅಕ್ರಮ ಕಸಾಯಿ ಖಾನೆಯ ಜಾಗ, ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನ ಮುಟ್ಟುಗೋಲು ಪ್ರಕ್ರಿಯೆ ನಡೆಯಲಿದೆ. ಜು.12 ರಂದು ಮಂಗಳೂರು ಎಸಿ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಲು ಆರೋಪಿಗಳಿಗೆ ನೋಟೀಸ್ ನೀಡಲಾಗಿದ್ದು ಗೋ ಹತ್ಯೆಗೆ ಬಳಸಿದ ಸೊತ್ತುಗಳು ಹಾಗೂ ಇಡೀ ಜಾಗ ಸರ್ಕಾರದ ವಶಕ್ಕೆ ಪಡೆಯಲು ಪ್ರಕ್ರಿಯೆ ಶುರು ಮಾಡಲಾಗಿದೆ.

ರಾಜ್ಯಸಭೆಗೆ ನಾಮನಿರ್ದೇಶನ: ವೀರೇಂದ್ರ ಹೆಗ್ಗಡೆ ತಂದೆ, ತಾತ ಕೂಡ ಶಾಸಕರಾಗಿದ್ದರು

ಕಾಯ್ದೆಯಲ್ಲಿ ಮುಟ್ಟುಗೋಲು ಅಧಿಕಾರ-ಶಾಸಕ ಭರತ್ ಶೆಟ್ಟಿ: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಾಂ 8 (5) ಅಡಿಯಲ್ಲಿ ಕಾಯ್ದೆಯನ್ನು ಉಲ್ಲಂಘಿಸಿ ಗೋಹತ್ಯೆ, ಅಕ್ರಮ ಗೋಸಾಗಾಟ, ಅಕ್ರಮ ಕಸಾಯಿ ಖಾನೆಯನ್ನು ನಡೆಸುತ್ತಿದ್ದ ಆರೋಪಿಗಳ ಸ್ವತ್ತುಗಳನ್ನು, ಅಕ್ರಮ ಕಸಾಯಿ ಖಾನೆ ಆಗುತ್ತಿದ್ದ ಜಾಗ, ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಮುಟ್ಟುಗೋಲು ಹಾಕಲು ಸಂಪೂರ್ಣ ಗೋಹತ್ಯಾ ನಿಷೇಧ ಕಾಯ್ದೆಯಲ್ಲಿ ಅಧಿಕಾರ ನೀಡಲಾಗಿದೆ. ಅರ್ಕುಳ ಗ್ರಾಮದ ಅರ್ಕುಳ ಕೋಟೆಯ ನಿವಾಸಿ ಎ.ಕೆ. ಖಾಲಿದ್ ತನ್ನ ಮನೆಗೆ ತಾಗಿಕೊಂಡಿದ್ದ ಶೆಡ್ ನಲ್ಲಿ ನಡೆಸುತ್ತಿದ್ದ ಅಕ್ರಮ ಕಸಾಯಿಖಾನೆ  ಮತ್ತು ಅಲ್ಲಿ ಗೋಹತ್ಯೆಗೆ ಬಳಸಿದ ಸ್ವತ್ತುಗಳನ್ನು ಮುಟ್ಟುಗೋಲು ಹಾಕುವ ಪ್ರಕ್ರಿಯೆಯನ್ನು ಪೊಲೀಸ್ ಅಧಿಕಾರಿಗಳು ಆರಂಭಿಸಿದ್ದಾರೆ. 

ವಾಯುಪಡೆ ಫ್ಲೈಯಿಂಗ್‌ ಬ್ರ್ಯಾಂಚ್‌ಗೆ ಮಂಗಳೂರಿನ ಮನಿಷಾ ಆಯ್ಕೆ

ನಮ್ಮ ರಾಜ್ಯ ಸರಕಾರ ಜಾರಿಗೆ ತಂದಿರುವ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಲ್ಲಿ ಅದರ ಉದ್ದೇಶ ಈಡೇರಿದಂತಾಗುತ್ತದೆ. ಆರೋಪಿಗಳ ಸ್ವತ್ತುಗಳನ್ನು ಮುಟ್ಟುಗೋಲು ಹಾಕಲು ಅಧಿಕಾರಿಗಳಿಗೆ ಕಾಯ್ದೆಯಲ್ಲಿಯೇ ಅಧಿಕಾರ ನೀಡಲಾಗಿದೆ. ಅದನ್ನು ಅಧಿಕಾರಿಗಳು ಖಡಕ್ಕಾಗಿ ಬಳಸುವ ಮೂಲಕ ಗೋಹಂತಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಗೋಹಂತಕರ ವಿರುದ್ಧ ನಿರ್ದಾಕ್ಷಿಣವಾಗಿ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದ್ದು, ಕಾಯ್ದೆಯಲ್ಲಿ ನೀಡಲಾಗಿರುವ ಅಧಿಕಾರವನ್ನು ಬಳಸಿ ಅರ್ಕುಳದ ಖಾಲಿದ್ ಸ್ವತ್ತನ್ನು ಮುಟ್ಟುಗೋಲು ಹಾಕುವ ಪ್ರಕ್ರಿಯೆ ಆರಂಭವಾಗಿದೆ ಎಂದಿದ್ದಾರೆ.

Latest Videos
Follow Us:
Download App:
  • android
  • ios