ಹೊಸಕೋಟೆ-ಚಿಂತಾಮಣಿ ರಾಜ್ಯ ಹೆದ್ದಾರಿ ಮೇಲ್ದರ್ಜೆಗೆ ಪ್ರಸ್ತಾವನೆ: ಸಂಸದ ಬಿ.ಎನ್.ಬಚ್ಚೇಗೌಡ

ಹೊಸಕೋಟೆಯಿಂದ ಚಿಂತಾಮಣಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ-85ನ್ನು ನಾಲ್ಕು ಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು. 

Proposal for Hosakote Chintamani State Highway Upgrading Says MP BN Bache Gowda gvd

ಹೊಸಕೋಟೆ (ಜ.26): ಹೊಸಕೋಟೆಯಿಂದ ಚಿಂತಾಮಣಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ-85ನ್ನು ನಾಲ್ಕು ಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು. ನಗರದ ಸಂತೆ ಗೇಟ್ ಬಳಿ ಹೊಸಕೋಟೆಯಿಂದ ಚಿಂತಾಮಣಿಗೆ ಸಂಪರ್ಕ ಕಲ್ಪಿಸುವ 20 ಕಿ.ಮೀ. ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಹೊಸಕೋಟೆ ಪಟ್ಟಣದಲ್ಲಿ ದಿನೇದಿನೇ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೊಸಕೋಟೆಯಿಂದ ಚಿಂತಾಮಣಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯನ್ನು ನಾಲ್ಕು ಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಬೆಂಗಳೂರಿನಿಂದ ಹೊಸಕೋಟೆ ಮಾರ್ಗವಾಗಿ ಆಂಧ್ರದ ಕಡಪ, ಅಮರಾವತಿಗೆ ಸಂಪರ್ಕ ಕಲ್ಪಿಸಲು ಚತುಷ್ಪಥ ರಸ್ತೆ ಅನುಕೂಲವಾಗಲಿದೆ. ಮೊದಲ ಹಂತದಲ್ಲಿ ಮರು ಡಾಂಬರೀಕರಣ ಮಾಡಲಾಗುವುದು ಎಂದರು.

ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ವಿಜಯಪುರದಿಂದ ಹೊಸಕೋಟೆ ಮಾರ್ಗವಾಗಿ ಮಾಲೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿಪಡಿಸಲು ಹಾಗೂ ಹೊಸಕೋಟೆಯಿಂದ ಮಾಲೂರಿಗೆ ನಾಲ್ಕು ಪಥದ ಹೈವೇಯನ್ನು 60 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಸೇರಿದ ಜಗದೀಶ್‌ ಶೆಟ್ಟರ್‌ಗೆ ಒಳ್ಳೆಯದಾಗಲಿ: ಸಚಿವ ಸತೀಶ್‌ ಜಾರಕಿಹೊಳಿ

ರಾಜ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಬಿಎನ್.ಗೋಪಾಲ್ ಗೌಡ, ಮುಖಂಡರಾದ ಬಿ.ವಿ.ಬೈರೇಗೌಡ, ಬಿ.ಜಿ. ನಾರಾಯಣಗೌಡ, ಹಾಪ್ ಕಾಮ್ಸ್ ನಿರ್ದೇಶಕ ವೆಂಕಟೇಶಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಬಾಬುರೆಡ್ಡಿ, ಮಾತಂಗ ಫೌಂಡೇಶನ್ ಉಪಾಧ್ಯಕ್ಷ ಡಾಕ್ಟರ್ ಎಚ್.ಎಂ.ಸುಬ್ಬರಾಜು, ನಗರಸಭೆ ಸದಸ್ಯ ಕೇಶವಮೂರ್ತಿ, ಗೌತಮ್, ಬಮೂಲ್ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್, ಮುಖಂಡರಾದ ವಿಜಯಕುಮಾರ್ ಡಾ.ಡಿ.ಟಿ.ವೆಂಕಟೇಶ್, ರಾಜಗೋಪಾಲ್, ಪಿಲ್ಲಗುಂಪೆ ವಿಶ್ವನಾಥ್ ಹಾಜರಿದ್ದರು.

Latest Videos
Follow Us:
Download App:
  • android
  • ios