ಕೋಲಾರ ವಿದ್ಯಾರ್ಥಿನಿ ಕೊಲೆಗೆ ಖಂಡನೆ

ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ನಡೆದ 9 ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಘಟನೆ ಖಂಡಿಸಿ ಆಲ್ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಒ), ಆಲ್ ಇಂಡಿಯಾ ಡೆಮಾಕ್ರಟಿಕ್ ಯೂಥ್ ಆರ್ಗನೈಜೇಷನ್ (ಎಐಡಿವೈಒ) ಹಾಗೂ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ಜಿಲ್ಲಾ ಸಮಿತಿಗಳು ಶನಿವಾರ ಪ್ರತಿಭಟನೆ ನಡೆಸಿದವು.

Protest by students for murder in Raichur

ಸ್ಥಳೀಯ ತಹಸೀಲ್ದಾರ್ ಕಚೇರಿ ಮುಂದೆ ಸೇರಿದ ಸಮಿತಿಗಳ ಸಂಘಟನೆಯಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ವಿದ್ಯಾರ್ಥಿಗಳು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಎಐಎಂಎಸ್‌ಎಸ್‌ನ ರಾಜ್ಯಾಧ್ಯಕ್ಷೆ ಅಪರ್ಣ ಬಿ.ಆರ್ ಅವರು, ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟ ಮುಗಿಸಿ ವಿದ್ಯಾರ್ಥಿನಿ ರಕ್ಷಿತಾ ಸ್ನೇಹಿತೆಯ ಜೊತೆಗೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಖಂಡನೀಯ ಎಂದು ದೂರಿದರು.

ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಿ: ಚಿಕ್ಕಮಕ್ಕಳು ಮತ್ತು ಮಹಿಳೆಯರ ಮೇಲೆ ಅತ್ಯಾಚಾರವೆಸಗುವ ಇಂಥ ಕಾಮಕರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಇಂಥ ಅತ್ಯಾಚಾರಿಗಳ ಸೃಷ್ಟಿಗೆ ಕುಮ್ಮಕ್ಕು ನೀಡುತ್ತಿರುವ ಅಂತ ರ್ಜಾಲತಾಣಗಳು, ಸಿನಿಮಾ, ವಿಡಿಯೋಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಎಐಡಿಎಸ್‌ಒ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಚೀಕಲಪರ್ವಿ ಮಾತನಾಡಿ, ವರದಿಯೊಂದರ ಪ್ರಕಾರ ಮಹಿಳೆಯರಿಗೆ ಅಸುರಕ್ಷಿತ ದೇಶಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ದಿನೇದಿನೇ ಅತ್ಯಾಚಾರ ಪ್ರಕರಣಗಳು ತೀವ್ರವಾಗುತ್ತಿದ್ದು, ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಘಟನೆಯೊಂದರಲ್ಲಿ ಸರ್ಕಾರಿ ಆಶ್ರಯತಾಣದಲ್ಲಿದ್ದ ೩೧ ಬಾಲಕಿಯರನ್ನು ಅಲ್ಲಿನ ಸಿಬ್ಬಂದಿ, ರಾಜಕಾರಣಿ, ಅಧಿಕಾರಿಗಳು ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೆಣ್ಣುಮಕ್ಕಳಿಗೆ ಭದ್ರತೆ ಖಾತ್ರಿಪಡಿಸುವುದು ಸರ್ಕಾರಗಳ ಮುಖ್ಯ ಆದ್ಯತೆಯಾಗಬೇಕು. ಈ ನಿಟ್ಟಿನಲ್ಲಿ, ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಬಂದ ಜಸ್ಟಿಸ್ ವರ್ಮಾ ಸಮಿತಿಯ ಶಿಫಾರಸ್ಸನ್ನು ಜಾರಿಗೊಳಿಸಬೇಕು ಎಂದು ಹೇಳಿದರು.

ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಚನ್ನಬಸವ ಜಾನೇಕಲ್ ಮಾತನಾಡಿ, ಹೆಣ್ಣು ಮಕ್ಕಳನ್ನು ಭೋಗದ ವಸ್ತುವೆಂದು ನೋಡುವ ಮನೋಭಾವ ತೊಲಗಬೇಕು. ಅದಕ್ಕಾಗಿ ಉನ್ನತ ನೀತಿ ಸಂಸ್ಕೃತಿಯನ್ನು ಸಮಾಜದಲ್ಲಿ ಹರಿಬಿಡಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಎಐಎಂಎಸ್‌ಎಸ್ ಜಿಲ್ಲಾ ಅಧ್ಯಕ್ಷರಾದ ಚೇತನಾ ಬನಾರೆ, ಸಂಘಟನೆಗಳ ಸದಸ್ಯರಾದ ಸಲೀಂ ಯೂಸೂಫ್, ಮಲ್ಲನಗೌಡ, ಆಂಜನೇಯ ಬಿ.ಗಣೇಕಲ್, ಶಿವಪ್ಪ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಇದ್ದರು.

Latest Videos
Follow Us:
Download App:
  • android
  • ios