Corruption : ಪಂಚಾಯತಿ ಭ್ರಷ್ಟಾಚಾರದ ವಿರುದ್ಧ ಸಿಪಿಎಂ ಪ್ರತಿಭಟನೆ
ಸಿದ್ದಾಪುರ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಸಿಪಿಎಂ ಸೋಮವಾರ ಪ್ರತಿಭಟನೆ ನಡೆಸಿ ಪಂಚಾಯತಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು
ಸಿದ್ದಾಪುರ (ಆ.2) : ಸಿದ್ದಾಪುರ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಸಿಪಿಎಂ ಸೋಮವಾರ ಪ್ರತಿಭಟನೆ ನಡೆಸಿ ಪಂಚಾಯತಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು. ಪಕ್ಷದ ಕಚೇರಿಯಿಂದ ಗ್ರಾಮ ಪಂಚಾಯತಿ ಆವರಣದ ವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಗ್ರಾ.ಪಂ ವಿರುದ್ಧ ಘೋಷಣೆ ಕೂಗಿದರು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ಬಿ.ರಮೇಶ್ ಮಾತನಾಡಿ, ಸಿದ್ದಾಪುರ ಗ್ರಾ.ಪಂ ಯಲ್ಲಿ ಕಳೆದ ವರ್ಷದ ಹಿಂದೆ ಅಧಿಕಾರ ವಹಿಸಿಕೊಂಡಿರುವ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಕೆಲವು ಸದಸ್ಯರು ಭ್ರಷ್ಟಾಚಾರದಲ್ಲಿ ಮುಳುಗಿದ್ದು ಅಭಿವೃದ್ಧಿ ಕಾರ್ಯದ ಬಗ್ಗೆ ಆಸಕ್ತಿ ವಹಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ದೂರಿದರು.
ಕೆಲವು ಪಂಚಾಯಿತಿ ಸದಸ್ಯರು ಬೇನಾಮಿ ಹೆಸರಿನಲ್ಲಿ ಕಾಮಗಾರಿಗಳನ್ನು ಗುತ್ತಿಗೆಗೆ ಪಡೆದುಕೊಂಡು ಕೆಲಸ ನಿರ್ವಹಿಸುತ್ತಿದ್ದಾರೆ ಗ್ರಾಮ ಪಂಚಾಯಿತಿಯಲ್ಲಿ ಹಲವು ಭ್ರಷ್ಟಾಚಾರಗಳು ನಡೆಯುತ್ತಿದ್ದರೂ ಕೂಡ ವಿರಾಜಪೇಟೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಯಾವುದೇ ರೀತಿಯಲ್ಲಿ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ಪಕ್ಷದ ಮುಖಂಡ ಸಾಬು ಮಾತನಾಡಿ, ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ನಿವೇಶನ ರಹಿತರು ನಿವೇಶನಕ್ಕಾಗಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣ ನಿವೇಶನ ನೀಡಬೇಕು, ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸಮಸ್ಯೆಗಳನ್ನು ಕೂಡಲೇ ಸರಿಪಡಿಸುವಂತೆ ಆಗ್ರಹಿಸಿದರು.
ಮುಂದಿನ 15 ದಿನಗಳಲ್ಲಿ ಸಮಸ್ಯೆಗಳನ್ನು ಸರಿ ಪಡಿಸದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಯಿತು. 6 ಪ್ರಮುಖ ಅಂಶಗಳಿರುವ ಮನವಿ ಪತ್ರವನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸಲ್ಲಿಸಲಾಯಿತು. ಪಕ್ಷದ ಪ್ರಮುಖರದ ಎನ್.ಡಿ.ಕುಟ್ಟಪ್ಪನ್, ಅನಿಲ್ ಕುಟ್ಟಪ್ಪನ್ ಬೈಜು, ಸಾಲು ಮತ್ತಿತರರು ಪಾಲ್ಗೊಂಡಿದ್ದರು.
ರ್ಕಾರದ ಅಬಕಾರಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ದೆಹಲಿ LG ಶಿಫಾರಸು!
ಜಾತಿ ಆಧಾರದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ
ಸ್ವಜಾತಿ ಪ್ರೇಮದಿಂದ ಕೊಡಗಿನಲ್ಲಿ ಭ್ರಷ್ಟಾಚಾರಿಗಳಿಗೆ ಬೆಂಬಲ ನೀಡುವುದನ್ನು ಕೊಡವ ಮಕ್ಕಡ ಕೂಟ ಸಹಿಸುವುದಿಲ್ಲವೆಂದು ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಎಚ್ಚರಿಕೆ ನೀಡಿದ್ದಾರೆ. ಕೊಡಗಿನಲ್ಲಿ ಕೆಲವು ಭ್ರಷ್ಟಅಧಿಕಾರಿಗಳು ತಮ್ಮ ಮೇಲಿನ ಆರೋಪಗಳನ್ನು ಪ್ರಶ್ನೆ ಮಾಡದೆ ಇರಲು ಸ್ವಜಾತೀಯ ಸಂಘಟನೆಗಳನ್ನು ಬಳಸಿಕೊಳ್ಳುತ್ತಿರುವುದು ಕಂಡು ಬರುತ್ತಿದ್ದು ಇದನ್ನು ಕೊಡಗಿನ ಜನ ಸಹಿಸುವುದಿಲ್ಲ. ಕೊಡಗು ಜಿಲ್ಲೆಯಲ್ಲಿ ಪ್ರಾಮಾಣಿಕ ಅಧಿಕಾರಿಗಳು ಮಾತ್ರ ಕೆಲಸ ಮಾಡಲಿ. ಭ್ರಷ್ಟಾಚಾರ ಮಾಡಿ ಕಳಪೆ ಕಾಮಗಾರಿ ನಿರ್ವಹಿಸಿ ಸಾರ್ವಜನಿಕರ ತೆರಿಗೆ ಹಣವನ್ನು ಲೂಟಿ ಮಾಡುವ ಅಧಿಕಾರಿಗಳು ಮತ್ತು ಅವರನ್ನು ಪ್ರೋತ್ಸಾಹಿಸುವ ಇತರರ ವಿರುದ್ಧ ಹಮ್ಮಿಕೊಳ್ಳುವ ಎಲ್ಲಾ ಹೋರಾಟಗಳಿಗೂ ಕೊಡವ ಮಕ್ಕಡ ಕೂಟ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬೊಳ್ಳಜಿರ ಅಯ್ಯಪ್ಪ ಸ್ಪಷ್ಟಪಡಿಸಿದ್ದಾರೆ.