Asianet Suvarna News Asianet Suvarna News

Davanagere: ಹೊರಗುತ್ತಿಗೆ ಪದ್ಧತಿ ರದ್ದುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ, ಹಾಸ್ಟೆಲ್ ಕಾರ್ಮಿಕರನ್ನು ಖಾಯಂಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಸಂಯೋಜಿತ ಜಿಲ್ಲಾ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

Protest demanding abolition of outsourcing system in Davanagere gow
Author
First Published Jan 31, 2023, 6:09 PM IST

ವರದಿ : ವರದರಾಜ್, ಏಷ್ಯಾನೆಟ್ ಸುವರ್ಣನ್ಯೂಸ್

ದಾವಣಗೆರೆ (ಜ.31): ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ, ಹಾಸ್ಟೆಲ್ ಕಾರ್ಮಿಕರನ್ನು ಖಾಯಂಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಸಂಯೋಜಿತ ಜಿಲ್ಲಾ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಹಾಸ್ಟೆಲ್ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಿ, ಅಲ್ಲಿವರೆಗೂ ಅಥವಾ ನಿವೃತ್ತಿವರೆಗೂ ಅವರನ್ನು ಮುಂದುವರಿಸಬೇಕು. ವಸತಿನಿಲಯ, ವಸತಿಶಾಲೆ, ಕಾಲೇಜು, ಆಶ್ರಮ ಶಾಲೆಗಳಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಡಿ ಗ್ರೂಪ್‌ನ ಅಡುಗೆಯವರು, ಅಡುಗೆ ಸಹಾಯಕರು, ಕಾವಲುಗಾರರನ್ನು ಖಾಯಂಗೊಳಿಸಬೇಕು. ಗುತ್ತಿಗೆ-ಹೊರಗುತ್ತಿಗೆ ಪದ್ದತಿಯನ್ನು ರದ್ದು ಮಾಡಬೇಕು.

ವಸತಿನಿಲಯಗಳ ಹೊರಗುತ್ತಿಗೆ ಕಾರ್ಮಿಕರಿಗೆ ನೀಡುತ್ತಿರುವ ಕನಿಷ್ಠ ವೇತನವನ್ನು ಮಾಸಿಕ ರೂ. 35,950 ಕ್ಕೆ ಹೆಚ್ಚಿಸಬೇಕು ಮತ್ತು ತುಟ್ಟಿ ಭತ್ಯೆಯನ್ನು ಬೆಲೆ ಏರಿಕೆ, ಹಣದುಬ್ಬರಗಳನ್ನು ಪರಿಗಣಿಸಿ ವೈಜ್ಞಾನಿಕವಾಗಿ ಕನಿಷ್ಠ ವೇತನವನ್ನು ನಿಗದಿ ಮಾಡಬೇಕು. ಕಾನೂನು ಬದ್ಧವಾಗಿ ನೀಡಲೇಬೇಕಾದ ವಾರದ ರಜೆ, ರಾಷ್ಟ್ರೀಯ ಹಬ್ಬಗಳ ರಜೆ, ಸಾಂಧರ್ಭಿಕ ರಜೆಗಳನ್ನು ನೀಡಬೇಕು. ದಿನಕ್ಕೆ 8 ಗಂಟೆಗಳ ಅವಧಿ ಮಾತ್ರ ದುಡಿಸಿಕೊಳ್ಳಬೇಕು. ಲಾಕ್ ಡೌನ್ ಅವಧಿಯ ವೇತನವನ್ನು ತಕ್ಷಣವೇ ಪಾವತಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಅಣಬೇರು , ಮಂಜುಳಮ್ಮ, ಹನುಮಂತಪ್ಪ, ಈಶ್ವರ್ ಹರಿಹರ, ಅಶೋಕ್ ದೇವರಹಳ್ಳಿ, ರಂಗಮ್ಮ ಹೊನ್ನಾಳಿ, ಜ್ಯೋತಿ, ಪ್ರಸನ್ನ, ಸುಮಲತಾ, ರತ್ನಮ್ಮ, ಮಹೇಶ್, ಸರೋಜಮ್ಮ, ಮಂಗಳಮ್ಮ, ಇನ್ನಿತರರು ಭಾಗವಹಿಸಿದ್ದರು.

ಕೇವಲ 5 ನಿಮಿಷದ ವಿಡಿಯೋಗೆ 4.5 ಕೋಟಿ ತೆತ್ತ ಕರ್ನಾಟಕ ಸರ್ಕಾರ..!

ಫೆ.1ರಿಂದ ಹೊರಗುತ್ತಿಗೆ ನೌಕರರ ಕಾಯಂಗೆ ಆಗ್ರಹಿಸಿ ಅನಿರ್ದಿಷ್ಕ ಧರಣಿ
ಮಂಗಳೂರು: ನಗರದ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿಗೊಳಪಡಿಸಿ ಹಂತ ಹಂತವಾಗಿ ಕಾಯಂಗೊಳಿಸುವಂತೆ ಆಗ್ರಹಿಸಿ ಕಸ ಸಾಗಿಸುವ ವಾಹನಗಳ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್‌, ಕ್ಲೀನರ್ಸ್‌, ಹೆಲ್ಪ​ರ್‍ಸ್, ಒಳಚರಂಡಿ ಕಾರ್ಮಿಕರು ಫೆ.1ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಕರಾವಳಿ ವಿಭಾಗದ ಸಂಚಾಲಕ ಬಿ.ಕೆ.ಅಣ್ಣಪ್ಪ ಕಾರೆಕ್ಕಾಡು, ರಾಜ್ಯದಲ್ಲಿ ಸುಮಾರು 15 ಸಾವಿರಕ್ಕೂ ಅಧಿಕ ಹೊರಗುತ್ತಿಗೆ ಕಾರ್ಮಿಕರಿದ್ದಾರೆ. ರಾಜ್ಯದ 330 ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರೂ ಈ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆ.1ರಿಂದ ಕುಡಿಯುವ ನೀರು ಸರಬರಾಜು ಮತ್ತು ಸ್ವಚ್ಛತಾ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು. ಜಿಲ್ಲೆಯಲ್ಲಿಯೂ ಸುಮಾರು 900ಕ್ಕೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಮಂಗಳೂರಿನಲ್ಲಿ ಜಾಥಾ ಹಾಗೂ ಧರಣಿ ನಡೆಸಲಾಗುವುದು ಎಂದರು.

 

Chitradurga: ಶಾಸಕ ತಿಪ್ಪಾರೆಡ್ಡಿ ವಿರುದ್ದ ಮತ್ತೆ ಗುಡುಗಿದ ಗುತ್ತಿಗೆದಾರ ಮಂಜುನಾಥ್

ಪೌರ ಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರು ನಗರ ಸ್ವಚ್ಛತೆಗೆ ಹಾಗೂ ಕುಡಿಯುವ ನೀರು ಪೂರೈಕೆಗೆ ಪೂರಕವಾಗಿ ದುಡಿಯುವವರು. ಮುಷ್ಕರದಿಂದ ಕಸ ವಿಲೇವಾರಿ ಮತ್ತು ಕುಡಿಯುವ ನೀರು ಪೂರೈಕೆಯಲ್ಲಿ ಅನನುಕೂಲ ಆದರೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿದರು. ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿಇದ್ದರು.

Follow Us:
Download App:
  • android
  • ios