ರಾಯಚೂರು(ಫೆ.29): ಸೂಕ್ತ ಚಿಕಿತ್ಸೆ ಸಿಗದೇ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ನಗರದ ರಿಮ್ಸ್‌ ಆಸ್ಪತ್ರೆಯಲ್ಲಿ ಇಂದು(ಶನಿವಾರ) ನಡೆದಿದೆ. ಗುರುಸ್ವಾಮಿ (25) ಎಂಬಾತನೇ ಮೃತಪಟ್ಟ ಕಾರ್ಮಿಕನಾಗಿದ್ದಾನೆ.

ಗುರುಸ್ವಾಮಿ ಶುಕ್ರವಾರ ಕೆಲಸ ಮಾಡುವಾಗ ಮೂರು ಅಂತಸ್ತಿನ ಕಟ್ಟಡದಿಂದ ಕಾಲು ಜಾರಿ ಕೆಳಗೆ ಬಿದ್ದು ಗಾಯಗೊಂಡಿದ್ದ. ತಕ್ಷಣ ಗುರುಸ್ವಾಮಿಯನ್ನ ರಾಯಚೂರಿನ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಸಂಜೆ ಐಸಿಯುನಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಎರಡು ಗಂಟೆಗಳ ಬಳಿಕ ಕಾರ್ಮಿಕ ಗುರುಸ್ವಾಮಿನನ್ನ ಜನರಲ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ರಾತ್ರಿ ಹೊಟ್ಟೆ ನೋವು ಎಂದರೂ ವೈದ್ಯರು ಚಿಕಿತ್ಸೆ ನೀಡಿರಲಿಲ್ಲ. ಹೀಗಾಗಿ ವೈದ್ಯರ ನಿರ್ಲಕ್ಷ್ಯದಿಂದ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.