ಗ್ಯಾಸ್ ಬೆಲೆ ಏರಿಕೆ: ಕಾಂಗ್ರೆಸ್ ಮುಖಂಡರ ಮನೆಯ ಮುಂಭಾಗದಲ್ಲಿ ವಿನೂತನ ಪ್ರತಿಭಟನೆ!
ದಿನದಿಂದ ದಿನಕ್ಕೆ ಕಚ್ಚಾ ತೈಲಗಳ ಬೆಲೆ ಏರಿಕೆ ಆಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ವಿನೂತನವಾಗಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಚಿಕ್ಕಮಗಳೂರು (ಮಾ.31): ದಿನದಿಂದ ದಿನಕ್ಕೆ ಕಚ್ಚಾ ತೈಲಗಳ ಬೆಲೆ ಏರಿಕೆ ಆಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು (Congess Leaders) ವಿನೂತನವಾಗಿ ಚಿಕ್ಕಮಗಳೂರಿನಲ್ಲಿ (Chikkamagaluru) ಪ್ರತಿಭಟನೆ (Protest) ನಡೆಸಿದ್ದಾರೆ. ಬೆಲೆ ಏರಿಕೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶವನ್ನು ಹೊರಹಾಕಿದ್ದಾರೆ. ಚಿಕ್ಕಮಗಳೂರು ನಗರದ ಮಧುವನ ಲೇಔಟ್‌ನಲ್ಲಿರುವ ಕಾಂಗ್ರೆಸ್ ಮುಖಂಡರ ಮನೆಯ ಮುಂಭಾಗದಲ್ಲಿ ವಿನೂತನವಾಗಿ ಚಳವಳಿ ನಡೆಸಿ ಆಕ್ರೋಶವನ್ನು ಹೊರಹಾಕಿದ್ದಾರೆ.
ಗ್ಯಾಸ್ ಸಿಲಿಂಡರ್‌ಗೆ ಹೂವಿನ ಹಾರ ಹಾಕಿ ಸರ್ಕಾರದ ವಿರುದ್ದ ಪ್ರತಿಭಟನೆ: ನಗರದ ಮಧುವನ ಲೇಔಟ್ ನಲ್ಲಿರುವ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ ಎಂ ಸಂದೇಶ್ ಮನೆಯ ಮುಂಭಾಗದಲ್ಲಿ ಕೆಲ ಕಾಂಗ್ರೆಸ್ ಮುಖಂಡರು ಖಾಲಿ ಗ್ಯಾಸ್ ಸಿಲಿಂಡರ್ ಇಟ್ಟು ಅದಕ್ಕೆ ಹೂವಿನ ಹಾರವನ್ನು ಹಾಕಿದ್ದಾರೆ. ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರ್ ನ ಬೆಲೆ ಏರಿಕೆಯಾಗುತ್ತಿದೆ ಇದನ್ನು ನಿಯಂತ್ರಣ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
Chikkamagaluru: ವಿದ್ಯುತ್ ಕಣ್ಣಾಮುಚ್ಚಾಲೆ: ಗ್ರಾಮಸ್ಥರ ಪರದಾಟ
ಸಿಲಿಂಡರ್ ಬೆಲೆ ಏರಿಕೆಯನ್ನು ವಿರೋಧಿಸಿ ಸಿಲಿಂಡರ್‌ಗೆ ಹಾರ ಹಾಕಿ ಅಚ್ಚೇ ದಿನ್ ಕಾಹಾ ಅಗಾಯ ಎಂದು ಘೋಷಣೆಯನ್ನು ಕೂಗಿದ್ದಾರೆ. ನೆರೆ, ಅತಿವೃಷ್ಟಿ, ಕೋವಿಡ್ ಹಾಗೂ ಲಾಕ್‌ಡೌನ್ ನಿರ್ವಹಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದೆ ಎಂದು ಮುಖಂಡರು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ದಿನದಿಂದ ದಿನಕ್ಕೆ ಏರಿಸುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂಧರ್ಭದಲ್ಲಿ ಜಿಲ್ಲಾ ಸೋಷಿಯಲ್ ಮೀಡಿಯಾ ಕಾರ್ಯಾಧ್ಯಕ್ಷರಾದ ಜಿ ಕಾರ್ತಿಕ್ ಚೆಟ್ಟಿಯಾರ್ ಹಾಗೂ ಭರತ್ ಹಾಜರಿದ್ದರು.
ಅಕ್ಟೋಬರ್ 2021ರ ಬಳಿಕ ಮೊದಲ ಬಾರಿಗೆ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ: ಅಂತಾರಾಷ್ಟ್ರೀಯ ಇಂಧನ ಬೆಲೆಗಳ ಏರಿಕೆಗೆ ಅನುಗುಣವಾಗಿ ದೇಶೀಯ ಅಡುಗೆ ಅನಿಲ (LPG) ದರವನ್ನು ಮಂಗಳವಾರ ಪ್ರತಿ ಸಿಲಿಂಡರ್‌ಗೆ ₹50 ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 14.2-ಕೆಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ದೆಹಲಿಯಲ್ಲಿ (Delhi) ₹949.50 ಆಗಲಿದ್ದು, ಅಕ್ಟೋಬರ್ ಆರಂಭದ ನಂತರ ಎಲ್‌ಪಿಜಿ ದರದಲ್ಲಿ ಮೊದಲ ಹೆಚ್ಚಳವಾಗಿದೆ.ಕಚ್ಚಾ ವಸ್ತುಗಳ ಬೆಲೆ ಏರಿಕೆಯ ಹೊರತಾಗಿಯೂ ಅಕ್ಟೋಬರ್ ಆರಂಭದಿಂದಲೂ ಬೆಲೆಗಳು ಬದಲಾಗದೆ ಉಳಿದಿದ್ದವು.
5 ಕಿಲೋಗ್ರಾಂ (ಕೆಜಿ) ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಈಗ ₹349 ಆಗಿದ್ದರೆ, 10 ಕೆಜಿ ಕಾಂಪೋಸಿಟ್ ಬಾಟಲ್ ₹669 ಕ್ಕೆ ಬರಲಿದೆ ಎಂದು ಮೂಲಗಳು ತಿಳಿಸಿವೆ. 19 ಕೆಜಿಯ ವಾಣಿಜ್ಯ ಸಿಲಿಂಡರ್ ಈಗ ₹2003.50 ಬೆಲೆಯಲ್ಲಿ ಲಭ್ಯವಿದೆ. ಇನ್ನು ಇನ್ನು ಸೋಮವಾರ ಬೆಳಗ್ಗೆ 6 ಗಂಟೆಯಿಂದ ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಬೆಲೆಯು ತಲಾ 80 ಪೈಸೆಗಳಷ್ಟು ಹೆಚ್ಚಾಗಿದೆ, ಇದು ಡಿಸೆಂಬರ್ 1 2021 ರಿಂದ ಮೊದಲ ಪರಿಷ್ಕರಣೆಯಾಗಿದೆ. ಇನ್ನು ಉಕ್ರೇನ್ ಮೇಲೆ ರಷ್ಯಾ ದಾಳಿ ಆರಂಭಿಸಿರುವ ಕಾರಣ ವಿಶ್ವಾದ್ಯಂತ ದೂರಗಾಮಿ ಪರಿಣಾಮ ಬೀರಿದೆ.
Hassan: ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ: ನ್ಯಾಯಕ್ಕೆ ಮಹಿಳೆ ಕಣ್ಣೀರ ಮನವಿ
ಇದಕ್ಕೆ ಭಾರತ ಕೂಡ ಹೊರತಲ್ಲ. ದೇಶದಲ್ಲಿ ಪೆಟ್ರೋಲ್ ಹಾಗೂ ಅಗತ್ಯವಸ್ತುಗಳ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಕೊರೋನಾ ಹೊಡೆತದಿಂದ ನಲುಗುತ್ತಿರುವ ವಿವಿಧ ದೇಶಗಳಲ್ಲಿ ಯುದ್ಧದ ಪರಿಣಾಮವಾಗಿ ಹಣದುಬ್ಬರ ಏರಿಕೆಯಾಗುವುದು, ಮಾರುಕಟ್ಟೆಯಲ್ಲಿ ಏರಿಳಿತವಾಗುವುದು, ಯುರೋಪ್‌ನಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುವುದು, ಚೀನಾದಲ್ಲಿ ರಿಯಲ್ ಎಸ್ಟೇಟ್ ಕ್ಷೇತ್ರ ಮುಳುಗುವುದು, ಆಫ್ರಿಕಾದಲ್ಲಿ ಆಹಾರ ವಸ್ತುಗಳು ದುಬಾರಿಯಾಗುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಆರ್ಥಿಕ ತಜ್ಞರು ಭವಿಷ್ಯ ನುಡಿದಿದ್ದಾರೆ.