ತೀರ್ಥಹಳ್ಳಿ: ತೀರ್ಥಹಳ್ಳಿ ಪೊಲೀಸ್ ಠಾಣೆ ಮುಂದೆ ಕಿಮ್ಮನೆ ನೇತೃತ್ವದಲ್ಲಿ ಅಹೋ ರಾತ್ರಿ ಧರಣಿ
ಕಾಂಗ್ರೆಸ್ ಕಾರ್ಯಕರ್ತರ ಮೇಲಿನ ಹಲ್ಲೆ ಸಂಬಂಧಿಸಿದಂತೆ ದುರುದ್ದೇಶವಾಗಿ ಅಮಾಯಕ ಕಾಂಗ್ರೆಸ್ ಕಾರ್ಯಕರ್ತರ ಹೆಸರನ್ನು ದೂರಿನಲ್ಲಿ ಸೇರಿಸಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು.
ಶಿವಮೊಗ್ಗ(ಜ.26): ಪೋಲಿಸ್ ಇಲಾಖೆ ದೌರ್ಜನ್ಯ ಖಂಡಿಸಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣೆ ಮುಂದೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಅಹೋ ರಾತ್ರಿ ಧರಣಿ ನಡೆದಿದೆ.
ಪೋಲಿಸ್ ಇಲಾಖೆ ದೌರ್ಜನ್ಯ ಖಂಡಿಸಿ ನ್ಯಾಯಕ್ಕಾಗಿ ಧರಣಿ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರ ಮೇಲಿನ ಹಲ್ಲೆ ಸಂಬಂಧಿಸಿದಂತೆ ದುರುದ್ದೇಶವಾಗಿ ಅಮಾಯಕ ಕಾಂಗ್ರೆಸ್ ಕಾರ್ಯಕರ್ತರ ಹೆಸರನ್ನು ದೂರಿನಲ್ಲಿ ಸೇರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಶಿವಮೊಗ್ಗ: ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿರುವ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಹಲ್ಲೆ ಪ್ರಕರಣ
ಪೋಲಿಸ್ ಇಲಾಖೆಯ ದೌರ್ಜನ್ಯದ ವಿರುದ್ಧ ಹಾಗೂ ನ್ಯಾಯಕ್ಕಾಗಿ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ರಾತ್ರಿ ತೀರ್ಥಹಳ್ಳಿ ಡಿವೈಎಸ್‌ಪಿ ಕಚೇರಿ ಮುಂಭಾಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮಾಜಿ ಸಚಿವ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಡಿವೈಎಸ್‌ಪಿ ಗಜಾನನ ಸುತಾರ ಅವರ ಮನವೊಲಿಕೆ ಬಳಿಕ ಕಿಮ್ಮನೆ ರತ್ನಾಕರ್ ಪ್ರತಿಭಟನೆಯನ್ನ ಹಿಂಪಡೆದಿದ್ದಾರೆ.