Asianet Suvarna News Asianet Suvarna News

ಸರ್ಕಾರದ ವಿರುದ್ಧದ ಎಲ್ಲ ಆರೋಪಗಳನ್ನೂ ಸಾಬೀತುಪಡಿಸಲಿ- ಸಂತೋಷ್ ಲಾಡ್

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಆರೋಪ ಮಾಡುತ್ತಿದ್ದಾರೆ. ಒಂದಾದರೂ ಸಾಬೀತುಪಡಿಸಲು, ಯಾಕೇ ಸಾಧ್ಯವಾಗಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದರು.

Prove the Allegation On Govt Says Santhosh Lad snr
Author
First Published Oct 21, 2023, 10:13 AM IST | Last Updated Oct 21, 2023, 11:07 AM IST

 ಮೈಸೂರು :  ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಆರೋಪ ಮಾಡುತ್ತಿದ್ದಾರೆ. ಒಂದಾದರೂ ಸಾಬೀತುಪಡಿಸಲು, ಯಾಕೇ ಸಾಧ್ಯವಾಗಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದರು.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ತನಿಖಾ ಸಂಸ್ಥೆಗಳು ಕೇಂದ್ರದ ಬಿಜೆಪಿ ಸರ್ಕಾರದ ಅಧೀನದಲ್ಲಿವೆ. ತನಿಖೆ ಮಾಡಿಸಲಿವೆ ಎಂದು ಸವಾಲು ಹಾಕಿದರು.

ಕಳೆದ 10 ವರ್ಷಗಳಿಂದ ಎಷ್ಟು ಭ್ರಷ್ಟಾಚಾರ ತಾಂಡವಾಡುತ್ತಿದೆ, ಎಷ್ಟು ರಾಜಕಾರಣಿಗಳ ಮೇಲೆ ದಾಳಿ ಮಾಡಲಾಯಿತು, ಇವರಲ್ಲಿ ಒಬ್ಬರಾದರೂ ಬಿಜೆಪಿ ರಾಜಕಾರಣಿಗಳು ಇಲ್ಲ. ಬೆಂಗಳೂರಿನಲ್ಲಿ ಸಿಕ್ಕ ಹಣದ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ಕೊಡಬೇಕು ಎಂದು ಅವರು ಆಗ್ರಹಿಸಿದರು.

ಕಾರ್ಮಿಕರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಪ್ರಕ್ರಿಯೆಗಳು ಜಾರಿಯಲ್ಲಿವೆ. ಪರಿಶೀಲನೆ ನಡೆಸಿ ಕ್ರಮ ವಹಿಸುತ್ತೇವೆ ಎಂದು ಅವರು ಪ್ರತಿಕ್ರಿಯಿಸಿದರು.

ಡಿ.ಕೆ. ಶಿವಕುಮಾರ್ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹೊರ ಹಾಕಿದ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ. ಅದನ್ನು ಹೈಕಮಾಂಡ್ ಸರಿಪಡಿಸುತ್ತದೆ ಎಂದರು.

ಸಚಿವ ಸಂಪುಟ ಬದಲಾಗುತ್ತದೆ ಎಂಬ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 2.5 ವರ್ಷಗಳ ಬಳಿಕ ಸಂಪುಟ ಬದಲಾಗುತ್ತದೆ ಎಂದು ಹೇಳಿದ್ದಾರೆ. ಅಭಿಪ್ರಾಯ ಹೇಳಲು ಅವರು ಸ್ವತಂತ್ರರು ಎಂದರು.

ಸಿಎಂ ಬದಲಾಗುವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಯಾವ ಕಾರಣಕ್ಕೆ ಬದಲಾಗುತ್ತಾರೆ? ಅದೆಲ್ಲಾ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.

ಸಂವಿಧಾನ ಉಳಿಯಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು

  ಮೈಸೂರು :  ಸಂವಿಧಾನ ಉಳಿಯಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಬರಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.

ಮೈಸೂರಿನ ಕಾಂಗ್ರೆಸ್ ಭವನದಲ್ಲಿ ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಂವಿಧಾನವನ್ನು ಉಳಿಸಬೇಕಾದ ಜವಾಬ್ದಾರಿ ನಮೆಲ್ಲರ ಮೇಲಿದೆ ಎಂದರು.

ಮಹಿಳೆಯರಿಗೆ ಆಸ್ತಿಯಲ್ಲಿ ಸಮಪಾಲು ಮತ್ತು ಹಲವು ಹಕ್ಕುಗಳನ್ನು ಕೊಡುವ ಹಿಂದೂ ಕೋಡ್ ಬಿಲ್ ಬಗ್ಗೆ ಹೆಚ್ಚು ಮಾತನಾಡಬೇಕಿದೆ. ಎಲ್ಲಾ ವರ್ಗಗಳ ಮಹಿಳೆಯರು ಜವಾಹರ್ ಲಾಲ್ ನೆಹರು, ಡಾ. ಅಂಬೇಡ್ಕರ್ ಅವರನ್ನು ಸ್ಮರಿಸಬೇಕು. ಮಹಿಳೆಯರಿಗೆ ಅಲ್ಪಸ್ವಲ್ಪ ಭೂಮಿ ದೊರೆತಿದ್ದರೇ ಅದಕ್ಕೆ ಡಾ. ಅಂಬೇಡ್ಕರ್ ಕಾರಣ ಎಂದರು.

ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲರೂ ಸಂಘಟಿತರಾಗಬೇಕು. ಹೆಚ್ಚಿನ ಸೀಟು ಗೆಲ್ಲಿಸಲು ಶ್ರಮಿಸಬೇಕು.

ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾರ್ಷಿಕ 56 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟು ಬಡ ಜನರಿಗೆ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಇದು ಇತರೆ ರಾಜ್ಯಗಳಿಗೆ ಮಾದರಿಯಾಗಿವೆ. ಗುಜರಾತ್ ಸರ್ಕಾರ ರೈತರಿಗೆ ಬಡ್ಡಿ ರಹಿತ 3 ಲಕ್ಷ ರೂ. ಸಾಲ ನೀಡಲು ಮುಂದಾಗಿದೆ. ಅದಕ್ಕೆ ಸಿದ್ದರಾಮಯ್ಯ ಪ್ರೇರಣೆಯಾಗಿದ್ದಾರೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ಮಾಜಿ ಮೇಯರ್ ಗಳಾದ ನಾರಾಯಣ, ಅನಂತು, ಟಿ.ಬಿ. ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ಮುಖಂಡರಾದ ಶೌಕತ್ ಪಾಷ, ನಾಗೇಶ್, ಈಶ್ವರ್ ಚಕ್ಕಡಿ, ಗಿರೀಶ್, ಕೆ. ಮಹೇಶ್, ಲೋಕೇಶ್, ವೆಂಕಟೇಶ್ ಮೊದಲಾದವರು ಇದ್ದರು.

Latest Videos
Follow Us:
Download App:
  • android
  • ios