ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ಸಿನ ವ್ಯವಸ್ಥೆ ಕಲ್ಪಿಸಿ

ನಗರದ ಶಾಲಾ-ಕಾಲೇಜುಗಳಿಗೆ ಬಂದು ಹೋಗುವ ತಾಲೂಕಿನ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡುವಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ತಾಲೂಕು ಘಟಕದ ವತಿಯಿಂದ ಗ್ರೇಡ್‌-2 ತಹಸೀಲ್ದಾರ್‌ ಜಗನ್ನಾಥ್‌ಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

Provide   bus Facility  for rural students snr

 ತಿಪಟೂರು: ನಗರದ ಶಾಲಾ-ಕಾಲೇಜುಗಳಿಗೆ ಬಂದು ಹೋಗುವ ತಾಲೂಕಿನ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡುವಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ತಾಲೂಕು ಘಟಕದ ವತಿಯಿಂದ ಗ್ರೇಡ್‌-2 ತಹಸೀಲ್ದಾರ್‌ ಜಗನ್ನಾಥ್‌ಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಈ ವೇಳೆ ಎಬಿವಿಪಿ ಜಿಲ್ಲಾ ಸಂಚಾಲಕ ಗಣೇಶ್‌ ಮಾತನಾಡಿ, ಜೂನ್‌ ತಿಂಗಳಿನಿಂದ ಶಾಲಾ-ಕಾಲೇಜುಗಳು ಪ್ರಾರಂಭವಾಗಿದೆ. ಆದರೆ ವಿದ್ಯಾರ್ಥಿಗಳಿಗೆ ಸರಿಯಾದ ಬಸ್‌ ವ್ಯವಸ್ಥೆ ಇಲ್ಲದೆ ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ಬಂದು ಹೋಗಲಾಗುತ್ತಿಲ್ಲ. ಹಳ್ಳಿಗಳಿಂದ ಶೈಕ್ಷಣಿಕ ನಗರಿ ತಿಪಟೂರಿಗೆ ಸಾವಿರಾರು ವಿದ್ಯಾರ್ಥಿಗಳು ಬರುತ್ತಿದ್ದು, ಬಸ್ಸಿನ ಸಮಸ್ಯೆಯಿಂದ ಪರದಾಡುವಂತಾಗಿದೆ. ರಾಜ್ಯ ಸರ್ಕಾರ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಸರಿಯಾಗಿ ತರಗತಿಗಳಲ್ಲಿ ಭಾಗವಹಿಸಲಾಗದೆ ಪರೀಕ್ಷೆಗಳಿಗೆ ಹಾಜರಾಗಲು ಕಷ್ಟಕರವಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬಸ್ಸಿನ ಸಂಖ್ಯೆ ತೀರಾ ಕಡಿಮೆ ಇದೆ. ಆದ್ದರಿಂದ ಬೆಳಗ್ಗೆ ಮತ್ತು ಸಂಜೆ ಸಮರ್ಪಕ ಬಸ್ಸಿನ ಸೌಲಭ್ಯ ಕಲ್ಪಿಸಿಕೊಡಬೇಕು. ವಿದ್ಯಾರ್ಥಿನಿಯರಿಗೆ ಉಚಿತ ಬಸ್ಸಿನ ಪ್ರಯಾಣವನ್ನು ಒದಗಿಸಿರುವ ಹಾಗೆ ವಿದ್ಯಾರ್ಥಿಗಳಿಗೂ ಉಚಿತ ಬಸ್ಸಿನ ಪ್ರಯಾಣವನ್ನು ಒದಗಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಬಿವಿಪಿ ತಾಲೂಕು ಸಂಚಾಲಕ ಭರತ್‌ಗೌಡ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿದ್ದರು.

 

Latest Videos
Follow Us:
Download App:
  • android
  • ios