ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ತಲುಪಿಸಿ : DC KV Rajendra
ಗರ್ಭಿಣಿಯರಿಗೆ ಮತ್ತು ಕಿಶೋರಿಯರಿಗೆ ಸಿಗಬೇಕಾದ ಪೌಷ್ಟಿಕ ಆಹಾರಗಳು ಸೂಕ್ತ ಸಮಯಲ್ಲಿ ತಲುಪಿಸುವುದರ ಜೊತೆಗೆ ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾದುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಜೇಂದ್ರ ಹೇಳಿದರು.
ರಾವಂದೂರು (ಡಿ.19): ಗರ್ಭಿಣಿಯರಿಗೆ ಮತ್ತು ಕಿಶೋರಿಯರಿಗೆ ಸಿಗಬೇಕಾದ ಪೌಷ್ಟಿಕ ಆಹಾರಗಳು ಸೂಕ್ತ ಸಮಯಲ್ಲಿ ತಲುಪಿಸುವುದರ ಜೊತೆಗೆ ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾದುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಜೇಂದ್ರ ಹೇಳಿದರು.
ಪಿರಿಯಾಪಟ್ಟಣ ತಾಲೂಕು ಮಾಕೋಡು ಗ್ರಾಮದಲ್ಲಿ ಜಿಲ್ಲಾಧಿಕಾರಿಯ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ಅವರು ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಕಿಶೋರಿಯರಿಗೆ ಮತ್ತು ಗರ್ಭಿಣಿಯರಿಗೆ (Pregnant) ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳು ನಿಗದಿತ ಸಮಯಕ್ಕೆ ತಲುಪಿಸುವುದರ ಜೊತೆಗೆ ಗರ್ಭಿಣಿ ಸ್ತ್ರೀಯರ ಮಗುವಿನ ಜನನದ ಸಂದರ್ಭದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಪಂ ಸ್ಥಳೀಯ ಜನಪ್ರತಿನಿಧಿಗಳು ಮಾಹಿತಿ ನೀಡುವುದರ ಜೊತೆಗೆ ಮಗುವಿನ ಮರಣದ ಪ್ರಮಾಣವನ್ನು ಕಡಿಮೆ ಮಾಡುವುದರ ಜೊತೆಗೆ ಗರ್ಭಿಣಿಯರಿಗೆ ಸಿಗಬೇಕಾದ ಸೌಲಭ್ಯಗಳನ್ನು ಸೂಕ್ತವಾಗಿ ಒದಗಿಸಿದಾಗ ಮಾತ್ರ ತಾಯಿ ಮತ್ತು ಮಗು ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಎಂದರು.
ಗ್ರಾಮ ಮಟ್ಟದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆಸ್ಥಳೀಯ ಮೇಲ್ವಿಚಾರಕರು ಮತಪಟ್ಟಿಯ ಲೋಪದೋಷಗಳು ಮತ್ತು ಹೊಸ ಮತದಾರರನ್ನು ಸೂಕ್ತ ಸಮಯದಲ್ಲಿ ಸರಿಪಡಿಸುವುದರ ಜೊತೆಗೆ ಇದರ ಬಗ್ಗೆ ಬೂತ್ ಮಟ್ಟದ ವಿವಿಧ ಪಕ್ಷದ ಮೇಲ್ವಿಚಾರಕರಿಗೆ ಮಾಹಿತಿ ನೀಡಿ ಯಾವುದೇ ರೀತಿ ಲೋಪ ಎಸಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆಧ್ಯ ಕರ್ತವ್ಯದ ಜೊತೆಗೆ ಸರ್ಕಾರ ನಿಗದಿಪಡಿಸಿದ ಸಮಯದೊಳಗೆ ಮೇಲ್ವಿಚಾರಕರು ಮತದಾರರ ಪಟ್ಟಿಯನ್ನು ಸರಿಪಡಿಸಬೇಕು ಎಂದು ತಿಳಿಸಿದರು.
ಗ್ರಾಮದ ಬಸವೇಶ್ವರ ದೇವಸ್ಥಾನ, ಚೆನ್ನಕೇಶ್ವರ ದೇವಸ್ಥಾನ ಮತ್ತು ಜೈನ ಬಸದಿಗಳನ್ನು ಹಾಗೂ ಗ್ರಾಪಂಗಳಿಗೆ ಭೇಟಿ ನೀಡಿ ಗ್ರಾಮದ ಅಭಿವೃದ್ಧಿಗೆ ಬೇಕಾಗುವ ಮಾಹಿತಿಗಳನ್ನು ಜಿಲ್ಲಾಧಿಕಾರಿಗಳು ಕಲೆ ಹಾಕುವುದರ ಜೊತೆಗೆ ಸರ್ಕಾರದ ಜಾಗಗಳನ್ನು ಒತ್ತುವರಿ ತೆರವುಗೊಳಿಸುವುದು ಹಾಗೂ ಸರ್ಕಾರಿ ಗೋಮಾಳದ 83 ಎಕರೆ ಒತ್ತುವರಿಯಾಗಿದ್ದು, ಇದರ ತೆರವಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಬೇಟಿ ನೀಡಿದ ಸಂಧರ್ಭಲ್ಲಿ ಇಲಾಖೆಯು ಗರ್ಭಿಣಿ ಮತ್ತು ಕಿಶೂರಿಯರಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಕಲೆಹಾಕಿದಾಗ ತಬ್ಬಿಬ್ಬಾದ ಅಧಿಕಾರಿಗಳನ್ನು ನೋಡಿದ ಜಿಲ್ಲಾಧಿಕಾರಿಗಳು ಇನ್ನು ಮುಂದೆ ನಾವು ಭೇಟಿ ನೀಡುವ ಸಂದರ್ಭದಲ್ಲಿ ಸೂಕ್ತ ಮಾಹಿತಿಗಳು ಲಭ್ಯವಿರಬೇಕು ಎಂದು ಡಿಡಿ ಬಸವರಾಜು ಅವರಿಗೆ ಸೂಚಿಸಿದರು. ಹಾಗೂ ಇಲಾಖೆಯು ನೀಡುತ್ತಿರುವ ಆಹಾರಗಳನ್ನು ಸಹ ಪರಿಶೀಲಿಸಿದರು.
ಜಿಪಂ ಉಪ ಕಾರ್ಯದರ್ಶಿ ಪ್ರೇಮ್‌ಕುಮಾರ್, ಉಪ ವಿಭಾಗಾಧಿಕಾರಿ ರುಚಿ ಜಿಂದಾಲ್, ತಹಸೀಲ್ದಾರ್ ಚಂದ್ರಮೌಳಿ, ತಾಪಂ ಇಒ ಕೃಷ್ಣಕುಮಾರ್, ಸಿಡಿಪಿಒ ಮಮತ, ಉಪತಹಸೀಲ್ದಾರ್ ಕೆ. ಶುಭ, ಆರ್‌ಐ ಶ್ರೀಧರ್ ಇದ್ದರು.
ಸ್ತ್ರೀಯರ ಆರೋಗ್ಯ ಸುಧಾರಣೆಗೆ ಸಖಿ ಯೋಜನೆ
ಗ್ರಾಮೀಣ ಭಾಗದ ಮಹಿಳೆಯರು ಹಾಗೂ ಹದಿಹರೆಯದ ಹೆಣ್ಣು ಮಕ್ಕಳು ವೈಯಕ್ತಿಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿ ಸ್ವಸ್ಥ ಮಹಿಳಾ ಸಮಾಜ ನಿರ್ಮಾಣಕ್ಕಾಗಿ ನಮ್ಮ ಆರೋಗ್ಯ ಕೇಂದ್ರ ಎಂಬ ವಿನೂತನ, ವಿಶಿಷ್ಟಯೋಜನೆಗೆ ಚಾಲನೆ ನೀಡಲಾಗುತ್ತಿದ್ದು ಮಹಿಳೆಯರು ಇದರ ಸದ್ವಿನಿಯೋಗಪಡಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ಸಿ.ಬಿ. ಶಶಿಧರ್ ತಿಳಿಸಿದರು.
ನಗರದ ಕೌಸ್ತುಭ ಹೋಟೆಲ್‌ನಲ್ಲಿ (Hotel) ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮಮತಾ ಉಮಾ ಮಹೇಶ್ ಮಾತನಾಡಿ,ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ತಮಗಾಗುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಕುಟುಂಬ (Family) ದೊಂದಿಗೆ ಹೇಳಿಕೊಳ್ಳಲು ಸಂಕೋಚ ಪಡುತ್ತಾರೆ. ಅವರೊಂದಿಗೆ ನಮ್ಮ ಸಖಿಯರು ಆಪ್ತಸಮಾಲೋಚನೆ ನಡೆಸಿ ಆರೋಗ್ಯಕ್ಕೆ ಸಂಬಂಧಿಸಿದ ವೈಯಕ್ತಿಕ ಸಮಸ್ಯೆಗಳನ್ನು ಆಲಿಸಿ ವೈದ್ಯರನ್ನು ಸಂಪರ್ಕಿಸಿ ಪರಿ ಹರಿಸುವ ಕೆಲಸ ಮಾಡಲಾಗುವುದು ಎಂದರು.
ಸಾರ್ಥವಳ್ಳಿ ಗ್ರಾಪಂ ಸದಸ್ಯೆ ಭವ್ಯ ನವೀನ್ ಮಾತನಾಡಿ, ಮಹಿಳೆಯರಿಂದ ಮಹಿಳೆಯರಿಗಾಗಿ ಈ ಕಾರ್ಯಕ್ರಮವನ್ನು ತರಲಾಗುತ್ತಿದ್ದು ಹಣಕ್ಕಿಂತ ಆರೋಗ್ಯ ಮುಖ್ಯವಾಗಿದ್ದು ಎಷ್ಟೋ ಹೆಣ್ಣು ಮಕ್ಕಳು ತಮ್ಮ ಆರೋಗ್ಯ ಸಮಸ್ಯೆಗಳನ್ನು ಮುಚ್ಚಿಡುತ್ತಾರೆ. ಇದರಿಂದ ಮುಂದೆ ತೊಂದರೆಯಾಗಲಿದ್ದು ನಮ್ಮ ಸಖಿಯರು ನಿಮ್ಮ ಮನೆ ಬಾಗಿಲಿಗೆ ಬಂದಾಗ ಮುಕ್ತವಾಗಿ ಸಮಸ್ಯೆ ಹೇಳಿಕೊಂಡು ಪರಿಹಾರ ಪಡೆಯಿರಿ ಎಂದರು.