ಪ್ರಚೋದನಾತ್ಮಕ ಪೋಸ್ಟ್‌: ದಕ್ಷಿಣ ಕನ್ನಡದಲ್ಲಿ 5 ಪ್ರಕರಣ ದಾಖಲು

ದ.ಕ. ಜಿಲ್ಲೆಯಲ್ಲಿ ಕೋಮು ಭಾವನೆಗೆ ಧಕ್ಕೆ ತರುವ ದುರುದ್ದೇಶದೊಂದಿಗೆ ಪ್ರಚೋದನಾತ್ಮಕ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಗರ ಸೈಬರ್‌ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿವೆ.

Provocative posts on social media 5 cases registered in  Dakshina Kannada gow

ಮಂಗಳೂರು (ಜು.1) : ಸರಣಿ ಹತ್ಯೆ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಭಾವನೆಗೆ ಧಕ್ಕೆ ತರಲು ಪ್ರಚೋದನಾತ್ಮಕ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲು ಆರಂಭಿಸಿದ್ದಾರೆ. ಈ ಕುರಿತು ಶನಿವಾರವಷ್ಟೇ ಎಚ್ಚರಿಕೆ ನೀಡಿದ್ದ ಪೊಲೀಸರು, ಭಾನುವಾರ ಒಂದೇ ದಿನ 5 ಪ್ರಕರಣಗಳನ್ನು ದಾಖಲಿಸಿದ್ದಾರೆ. ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್‌ ಮತ್ತು ಸುರತ್ಕಲ್‌ನಲ್ಲಿ ಫಾಝಿಲ್‌ ಹತ್ಯೆ ಬಳಿಕ ಕೆಲವು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್‌, ಕಾಮೆಂಟ್‌ಗಳನ್ನು ಮಾಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ‘ಕೋಮು ಸಂಘರ್ಷ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬುದಾಗಿ ರಾಜ್ಯ ಗುಪ್ತಚರ ದಳದ ಮಾಹಿತಿ ಇದೆ’ ಎಂಬುದಾಗಿ ಸುಳ್ಳು ಸಂದೇಶ ಹರಡಲಾಗಿತ್ತು. ಪ್ರವೀಣ್‌ ಕೊಲೆಗೆ ಪ್ರತೀಕಾರವಾಗಿ ಕೊಲೆಗೆ ಕರೆ ನೀಡಿರುವ ಪೋಸ್ಟ್‌ ಇತ್ತು. ಫಾಝಿಲ್‌ ಕೊಲೆಗೆ ಪ್ರತೀಕಾರವಾಗಿ ಕೊಲೆ ಸಂದೇಶ, ನಿರ್ದಿಷ್ಟಜಾತಿ ಮತ್ತು ಸಮುದಾಯವನ್ನು ಗುರಿಯಾಗಿಸಿಕೊಂಡು ಹತ್ಯೆಗೆ ಕರೆ ನೀಡುವ ಮೆಸೇಜ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಬಗ್ಗೆ ಐದು ಪ್ರಕರಣ ದಾಖಲಾಗಿದೆ. ಸಮಗ್ರ ತನಿಖೆ ನಡೆಸಿ ಆಕ್ಷೇಪಾರ್ಹ ಪೋಸ್ಟ್‌ ಮಾಡಿದವರ ವಿರುದ್ಧ ಕ್ರಮಕ್ಕೆ ಪೊಲೀಸ್‌ ಇಲಾಖೆ ನಿರ್ಧರಿಸಿದೆ.

ದಕ್ಷಿಣ ಕನ್ನಡ: ಫಾಝಿಲ್ ಹತ್ಯೆ ಪ್ರಕರಣದಲ್ಲಿ ಮೊದಲ ಆರೋಪಿ ಬಂಧನ

ಕೋರ್ಟ್ ಅಲೆಯಬೇಕಾಗುತ್ತೆ: ಮಂಗಳೂರಿನಲ್ಲಿ ನಡೆದ ಅಹಿತಕರ ಘಟನೆಗಳ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್‌ ಮಾಡುವವರು ಮುಂದೆ ಕೋರ್ಟ್ ಕಚೇರಿ ಅಲೆಯಬೇಕಾಗುತ್ತದೆ ಎಂದು ಕಮಿಷನರ್‌ ಶಶಿಕುಮಾರ್‌ ಎಚ್ಚರಿಸಿದ್ದಾರೆ. ಘಟನೆಗೆ ಸಂಬಂಧಿಸಿ ಸೈಬರ್‌ ಕ್ರೈಂ ಠಾಣೆಯಲ್ಲಿ ಈಗಾಗಲೇ ಒಟ್ಟು 5 ಪ್ರಕರಣ ದಾಖಲಿಸಲಾಗಿದೆ. ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡುವವರ ವಿರುದ್ಧ ಸೂಕ್ತ ಕ್ರಮ ಮುಂದುವರಿಯಲಿದೆ. ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್‌ ಹಾಕುವ, ಅದನ್ನು ಶೇರ್‌ ಮಾಡುವ, ಕಮೆಂಟ್‌ ಮಾಡುವವರ ಮೇಲೆ ಕಣ್ಣಿಡಲಾಗಿದೆ ಎಂದು ಕಮಿಷನರ್‌ ತಿಳಿಸಿದ್ದಾರೆ.

ಮನೆಗೆ ಬಂದ ಕಾಂಗ್ರೆಸ್‌ ನಾಯಕರಿಗೆ ಪ್ರವೀಣ್‌ ಬಂಧುಗಳಿಂದ ತರಾಟೆ

ಮಂಗಳೂರಿನಲ್ಲಿ ನಡೆದ ಅಹಿತಕರ ಘಟನೆಗಳ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್‌ ಮಾಡುವವರು ಮುಂದೆ ಕೋರ್ಟ್ ಕಚೇರಿ ಅಲೆಯಬೇಕಾಗುತ್ತದೆ. ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಾಕುವವರ ವಿರುದ್ಧ ಸೂಕ್ತ ಕ್ರಮ ಮುಂದುವರಿಯುತ್ತದೆ.

- ಶಶಿಕುಮಾರ್‌, ಮಂಗಳೂರು ಪೊಲೀಸ್‌ ಕಮಿಷನರ್‌ 

ಪ್ರವೀಣ್‌ ನೆಟ್ಟಾರು ಹತ್ಯೆ ಬಗ್ಗೆ ಎನ್‌ಐಎ ಪ್ರಾಥಮಿಕ ತನಿಖೆ

ಆಕ್ಷೇಪಾರ್ಹ ಬರಹಗಳು: ಸಾಮಾಜಿಕ ಜಾಲತಾಣದಲ್ಲಿ ‘ಕೋಮು ಸಂಘರ್ಷ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬುದಾಗಿ ರಾಜ್ಯ ಗುಪ್ತಚರ ದಳ ಮಾಹಿತಿ’ ಎಂಬುದಾಗಿ ಸುಳ್ಳು ಸಂದೇಶ, ಪ್ರವೀಣ್‌ ಕೊಲೆಗೆ ಪ್ರತೀಕಾರವಾಗಿ ಕೊಲೆಗೆ ಕರೆ ನೀಡಿರುವ ಪೋಸ್ಟ್‌. ಫಾಝಿಲ್‌ ಕೊಲೆಗೆ ಪ್ರತೀಕಾರವಾಗಿ ಕೊಲೆ ಸಂದೇಶ, ನಿರ್ದಿಷ್ಟಜಾತಿ ಮತ್ತು ಸಮುದಾಯವನ್ನು ಗುರಿಯಾಗಿಸಿಕೊಂಡು ಹತ್ಯೆಗೆ ಕರೆ ನೀಡುವ ಮೆಸೇಜ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಬಗ್ಗೆ ಐದು ಪ್ರಕರಣ ದಾಖಲಾಗಿದೆ. ಸಮಗ್ರ ತನಿಖೆ ನಡೆಸಿ ಆಕ್ಷೇಪಾರ್ಹ ಪೋಸ್ಟ್‌ ಮಾಡಿದವರ ವಿರುದ್ಧ ಕ್ರಮಕ್ಕೆ ಪೊಲೀಸ್‌ ಇಲಾಖೆ ನಿರ್ಧರಿಸಿದೆ.

Latest Videos
Follow Us:
Download App:
  • android
  • ios