ಬೆಂಗಳೂರು(ಫೆ.26): ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಸಾಲಿನ ಶೈಕ್ಷಣಿಕ ಸಾಲಿನ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. 2019-20ನೇ ಸಾಲಿನ ಪ್ರಥಮ ಪಿಯುಸಿ ಫಲಿತಾಂಶವನ್ನು ಮಾ.27 ರಂದು ರಾಜ್ಯದ ಎಲ್ಲ ಜಿಲ್ಲಾ ಉಪನಿರ್ದೇಶಕರು ಪ್ರಕಟಿಸಿ ಮಾ.28 ರಿಂದ ಮೇ 17ರ ವರೆಗೆ ಬೇಸಿಗೆ ರಜೆ ನೀಡಬೇಕು. 

ಮೇ 18 ರಿಂದ 2020-21ನೇ ಸಾಲಿನ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಅಷ್ಟರಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದರೆ, ಅಂದೇ ಪ್ರಥಮ ಪಿಯುಸಿ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದು ಪಿಯು ಇಲಾಖೆ ಪ್ರಕಟಣೆ ತಿಳಿಸಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಹಿಂದೆ ಮಾ. 19ರಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಿಸಿ ಬೇಸಿಗೆ ರಜೆ ನೀಡಬೇಕು ಮತ್ತು ಮೇ 2ರಿಂದ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸುವಂತೆ ವೇಳಾಪಟ್ಟಿ ಪ್ರಕಟಿಸಿತ್ತು.