ಬೆಂಗಳೂರು(ಡಿ.18): ರಸ್ತೆ ಮಧ್ಯೆ ಬಿದ್ದಿದ್ದ ಗುಂಡಿಗೆ ಮಣ್ಣು ಹಾಕುವ ಮೂಲಕ ಟ್ರಾಫಿಕ್ ಪೊಲೀಸರೊಬ್ಬರು ಕರ್ತವ್ಯ ನಿಷ್ಠೆ ಮೆರೆದ ಘಟನೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇಂದು(ಬುಧವಾರ) ನಡೆದಿದೆ. ಟ್ರಾಫಿಕ್ ಪೊಲೀಸರ ಕಾರ್ಯದ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. 

ನಗರದ ಸದಾಶಿವನಗರದ ಮುಖ್ಯರಸ್ತೆಯ ಮಧ್ಯೆ ಗುಂಡಿ ಬಿದ್ದಿದ್ದು, ಅದರಲ್ಲಿ ನೀರು ನಿಂತುಕೊಂಡು ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು, ಇದನ್ನ ಮನಗಂಡ ಟ್ರಾಫಿಕ್ ಪೊಲೀಸ್ ಪೇದೆ ಬಿಬಿಎಂಪಿ ಗುಂಡಿ ಮುಚ್ಚುವ ಕಾರ್ಯ ಮಾಡಲಿ ಅಂತ ಕಾಯದೆ ತಾವೇ ಸ್ವತಃ ಗುಂಡಿಗೆ ಮಣ್ಣು ಹಾಕುವ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕರ್ತವ್ಯ ನಿಷ್ಠೆ ಮೆರೆದ ಟ್ರಾಫಿಕ್ ಪೊಲೀಸ್ ಪೇದೆಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಆದರೆ, ಇಂತಹ ಜನ ಮೆಚ್ಚುವ ಕೆಲಸ ಮಾಡಿದ ಪೊಲೀಸ್ ಪೇದೆಯ ಹೆಸರು ಮಾತ್ರ ತಿಳಿದು ಬಂದಿಲ್ಲ.