ಕೋಲಾರ(ನ.27): ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸೆದ ಕಾಮುಕನಿಗೆ ಸಾರ್ವಜನಿಕರೇ ಥಳಿಸಿದ ಘಟನೆ ನೆರೆಯ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಕಲ್ಲಕೇರಿ ಬಳಿ ಘಟನೆ ಇಂದು(ಬುಧವಾರ) ನಡೆದಿದೆ. ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಆರೋಪಿಯನ್ನ ಕರ್ನಾಟಕದ ಚಿಕ್ಕಮಗಳೂರು ಮೂಲದ ವೀರಭದ್ರಪ್ಪ ಎಂದು ಗುರುತಿಸಲಾಗಿದೆ. ಈತ ಆಂಧ್ರದ ಕಲ್ಲಕೇರಿಯಲ್ಲಿರುವ ಅಜ್ಜಿ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದನು ಎಂದು ತಿಳಿದುಬಂದಿದೆ. 

ಆರೋಪಿ ಬಾಲಕಿಗೆ ತಿಂಡಿ ಆಸೆ ತೋರಿಸಿ ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಬಾಲಕಿ ಅರೆ ಪ್ರಜ್ಞಾವಸ್ಥೆಯಲ್ಲಿದಳು. ಬಾಲಕಿನ್ನು ಕಂಡ ಸ್ಥಳೀಯರು  ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವಿಷಯ ಗೊತ್ತಾಗುತ್ತಿದಂತೆ ಆರೋಪಿ ವೀರಭದ್ರಪ್ಪ ಎಸ್ಕೇಪ್ ಆಗಲು ಮುಂದಾಗಿದ್ದ, ಈ ವೇಳೆ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಪೊಲೀಸರಿಗೆ ಚಳ್ಳೆಹಣ್ಣು ತಿನಿಸಿ ಠಾಣೆಯಿಂದ ಎಸ್ಕೇಪ್ ಆಗಿದ್ದ, ಆದರೆ, ಸ್ಥಳೀಯರು ಮತ್ತೆ ಆರೋಪಿಯನ್ನ ಬೆನ್ನಟ್ಟಿ ಹಿಡಿಯುವ ಮೂಲಕ ಮತ್ತೆ ಪೊಲೀಸರಿಗೆ ಒಪ್ಪಿಸಿದ್ದಾರೆ. 

ಆರೋಪಿ ಸಿಗುತ್ತಿದಂತೆ ಪೊಲೀಸರು ಆರೋಪಿಯ ಪಾದಗಳಿಗೆ ಮನಬಂದಂತೆ ಥಳಿಸಿದ್ದಾರೆ. ಪೊಲೀಸರು ಆರೋಪಿಗೆ  ಥಳಿಸುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.  ಸಧ್ಯ ಪೋಲಿಸರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಸಂಬಂಧ ಕಲ್ಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.