Asianet Suvarna News Asianet Suvarna News

ಕೊಡಗು : ಅನಾರೋಗ್ಯದಿಂದ ನರಳುತ್ತಿರುವ ಕಾಡಾನೆ ಬಗ್ಗೆ ಅರಣ್ಯ ಇಲಾಖೆ ನಿರ್ಲಕ್ಷ್ಯ

ಅನಾರೋಗ್ಯದಿಂದ ನರಳುತ್ತಿರುವ ಕಾಡಾನೆ ಬಗ್ಗೆ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದ್ದು ಈ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. 

publics Condemned For Negligence Of Forest Officers Over Sick Elephant
Author
Bengaluru, First Published Sep 4, 2019, 12:53 PM IST

ಕೊಡಗು [ಸೆ.04] :   ಸಾವು ಬದುಕಿನ ನಡುವೆ ನರಳುತ್ತಿರುವ ಕಾಡಾನೆಗೆ ಚಿಕಿತ್ಸೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಹಿಂದೇಟು ಹಾಕಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಬಿಟಿಸಿ ಸಂಸ್ಥೆಯ ತೋಟದಲ್ಲಿ ಬಿದ್ದು ಕಾಡಾನೆ ನರಳುತ್ತಿದೆ.

ಅನಾರೋಗ್ಯ ಹಾಗೂ ಬಲಗಾಲಿಗೆ ಗಂಭೀರ ಗಾಯವಾಗಿ ಬಿದ್ದಿದ್ದ ಆನೆ ಕಂಡು ಇಲ್ಲಿನ ತೋಟದ ಕಾರ್ಮಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿದರೂ ಕೂಡ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಆಗಮಿಸದೇ ನಿರ್ಲಕ್ಷ್ಯ ತೋರಿದರು.  

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸ್ಥಳೀಯರು ಹಾಗೂ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಆನೆಯ ಸ್ಥಿತಿಗತಿಯ ಬಗ್ಗೆ ಪರಿಶೀಲಿಸಿ ಚಿಕಿತ್ಸೆ ನಿಡುವ ಬಗ್ಗೆ ಚಿಂತನೆ ನಡೆಸಿದ್ದಾರೆ.

Follow Us:
Download App:
  • android
  • ios