ವಿಜಯಪುರ(ಮಾ.04): ಇಂದು(ಬುಧವಾರ) ರಾಜ್ಯಾದ್ಯಂತ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಆರಂಭದ ದಿನವೇ ದ್ವಿತೀಯ ವರ್ಷದ ಪ್ರಶ್ನೆಪತ್ರಿಕೆ ಸೋರಿಕೆಯಾದ ಘಟನೆ ಇಂಡಿ ಪಟ್ಟಣದ ಶಾಂತೇಶ್ವರ ಪಿಯು ಕಾಲೇಜಿನಲ್ಲಿ ನಡೆದಿದೆ.ಮೊದಲ ದಿನವಾದ ಇಂದು ಪರೀಕ್ಷೆ ಆರಂಭವಾಗಿ ಒಂದೇ ಗಂಟೆಯಲ್ಲಿ ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಬಹಿರಂಗವಾಗಿದೆ. 

ಪ್ರಶ್ನೆ ಪತ್ರಿಕೆ ನೀಡಿದ ಬೆನ್ನಲ್ಲೇ ಮೊಬೈಲ್‌ ನಲ್ಲಿ ಫೋಟೋ ಲೀಕ್ ಆಗಿದೆ. ಪರೀಕ್ಷಾ ಕೊಠಡಿಯಲ್ಲಿ ಕುಳಿತ ಪರೀಕ್ಷಾರ್ಥಿಯ ಕೈನಲ್ಲಿನ ಪ್ರಶ್ನೆ ಪತ್ರಿಕೆಯನ್ನ ಕಿಡಿಗೇಡಿಗಳು ಕ್ಲಿಕ್ಕಿಸಿಕೊಂಡಿದ್ದಾರೆ. ಕಾಲೇಜಿನ ಸಿಬ್ಬಂದಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. 

ಪರೀಕ್ಷೆ ದಿನವೇ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಪರೀಕ್ಷಾ ಕೇಂದ್ರ ಸುತ್ತ ಬಿಗಿ ಭದ್ರತೆ ಇದ್ರೂ ಕೂಡ ಪ್ರಶ್ನೆ ಪತ್ರಿಕೆ ಹೇಗೆ ಸೋರಿಯಾಗಿದೆ ಎಂದು ಹಲವರ ಪ್ರಶ್ನೆಯಾಗಿದೆ.