Asianet Suvarna News Asianet Suvarna News

ವರಸೆಯಲ್ಲಿ ತಂಗಿಯನ್ನೇ ವರಿಸಲು ಮುಂದಾದ ಬಿಜೆಪಿ ಮುಖಂಡ: ಹುಬ್ಬಳ್ಳಿ ನಲುಗಿಸಿದ ಭಂಡ!

ಹುಬ್ಬಳ್ಳಿ ಯುವತಿಯನ್ನ ಪ್ರೀತಿಸುತ್ತಿದ್ದ ಪಾಂಡಿಚೇರಿ ಮೂಲದ ಬಿಜೆಪಿ‌ ಯುವ ಮುಖಂಡ| ಯುವತಿಯನ್ನು ಮದುವೆ ಮಾಡಿಕೊಡದಿದ್ದಲ್ಲಿ ಯುವತಿ ಜತೆಗಿನ ಚಿತ್ರಗಳು, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಬಿಜೆಪಿ‌ ಯುವ ಮುಖಂಡ|

Puducherry Based BJP Leader Arrested in Hubballi for Blackmail
Author
Bengaluru, First Published Jan 11, 2020, 3:42 PM IST
  • Facebook
  • Twitter
  • Whatsapp

ಹುಬ್ಬಳ್ಳಿ(ಜ.11): ಪ್ರೀತಿಸುತ್ತಿದ್ದ ಯುವತಿಯನ್ನು ಮದುವೆ ಮಾಡಿಕೊಡದಿದ್ದಲ್ಲಿ ಯುವತಿ ಜತೆಗಿನ ಚಿತ್ರಗಳು, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪಾಂಡಿಚೇರಿ ಮೂಲದ ಬಿಜೆಪಿ‌ ಯುವ ಮುಖಂಡನನ್ನು ನಗರದ ಸೈಬರ್ ಕ್ರೈಂ ಪೊಲೀಸರು ಬಂದಿಸಿದ್ದಾರೆ. 

ರಾಕಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ರಾಕಿ ಪಾಂಡಿಚೇರಿಯಲ್ಲಿ ಯುವ ಬಿಜೆಪಿ ಮುಖಂಡನಾಗಿ ಗುರುತಿಸಿಕೊಂಡಿದ್ದಾನೆ. ಮದುವೆ ಮಾಡುವಂತೆ ಯುವತಿಯ ಕುಟುಂಬವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ಯುವತಿಯ ತಂದೆ ಇಲ್ಲಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಯುವತಿಯ ತಂದೆಯೂ ಸಹ ಪಾಂಡಿಚೇರಿ ಮೂಲದವರಾಗಿದ್ದು, ಕೆಲಸದ ನಿಮಿತ್ತ ಹುಬ್ಬಳ್ಳಿಗೆ ಬಂದುಳಿದಿದ್ದು, ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ವಾಸವಾಗಿದ್ದಾರೆ. ಯುವತಿಯ ತಾಯಿ ಕಡೆಯಿಂದ ದೂರದ ಸಂಬಂಧವೆಂಬ ಕಾರಣಕ್ಕೆ ರಾಕಿ ಯುವತಿ ಜತೆ ಹೆಚ್ಚು ಒಡನಾಟ ಹೊಂದಿದ್ದ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಸಲ್ಲಾಪಗಳಲ್ಲಿ ತೊಡಗಿದ್ದಾಗ ರಾಕಿ ಮೊಬೈಲ್ ನಲ್ಲಿ ಚಿತ್ರಿಕರಿಸಿ, ವಿಡಿಯೋ ಮಾಡಿಕೊಂಡಿದ್ದಾನೆ. ಯುವತಿಯನ್ನು ಮದುವೆ ಮಾಡಿಕೊಡುವಂತೆ ಅನೇಕ ಬಾರಿ ಒತ್ತಾಯಿಸಿದ್ದಾನೆ. ವಿವಾಹಕ್ಕೆ ಯುವತಿ ಮನೆಯವರು ನಿರಾಕರಿಸಿದ್ದರು. 

ಈ ಹಿನ್ನೆಲೆಯಲ್ಲಿ ರಾಕಿ ಮತ್ತು ಯುವತಿ ಅಣ್ಣ-ತಂಗಿ ಸಂಬಂಧವಾಗಿತ್ತು. ಹಾಗಾಗಿ ಯುವತಿ ಕುಟುಂಬಸ್ಥರು ಈ ಸಂಬಂಧವನ್ನು ಸಾರಾಸಗಟಾಗಿ ನಿರಾಕರಿಸಿದ್ದರು. ಮದುವೆಯಂತಾದರೆ, ಆಕೆಯನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದ ರಾಕಿ, ಈ ಹಿಂದೆ ಮಾಡಿಕೊಂಡಿದ್ದ ಯುವತಿಯ ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಲಾರಂಭಿಸಿದ್ದಾನೆ. ಅಲ್ಲದೇ, ಆ ವಿಡಿಯೋ ಮತ್ತು ಚಿತ್ರಗಳನ್ನು ಯುವತಿಯ ತಂದೆಯೇ ಮೊಬೈಲ್‌ಗೆ ಹರಿಬಿಟ್ಟಿದ್ದಾನೆ. ಅಲ್ಲದೇ, ಹಲವು ವ್ಯಾಟ್‌ಆ್ಯಪ್ ಗ್ರುಪ್‌ನಲ್ಲಿಯೂ ಹಾಕಿದ್ದಾನೆ. 

ಕೆಲ ಅಶ್ಲೀಲ ಪೋಟೋಗಳನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್ ಖಾತೆಗೂ ಹಾಕಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದರಿಂದ ತೀವ್ರವಾಗಿ ನೊಂದ ಕುಟುಂಬಸ್ಥರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅಲ್ಲದೇ, ಆತನ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಯುವತಿಯ ತಂದೆ ಮತ್ತು ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಜನವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Follow Us:
Download App:
  • android
  • ios