Tumakur : ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ
ಜಿಲ್ಲೆಯಲ್ಲಿ 2022-23ನೇ ಮುಂಗಾರು ಋುತುವಿನ ಅವಧಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿ. 15 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತುಮಕೂರು (ಡಿ.13): ಜಿಲ್ಲೆಯಲ್ಲಿ 2022-23ನೇ ಮುಂಗಾರು ಋುತುವಿನ ಅವಧಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿ. 15 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳ (DC) ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ಟಾಸ್‌್ಕ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ (Millet) ಖರೀದಿಸಲು ಡಿ. 15 ರಿಂದ ರೈತರ ನೋಂದಣಿಗೆ ಸೂಕ್ತ ಕ್ರಮ ಕೈಗೊಳ್ಳುವುದಲ್ಲದೆ, ವ್ಯವಸ್ಥಿತವಾಗಿ ನೋಂದಣಿ ಪ್ರಕ್ರಿಯೆಯನ್ನು ನಡೆಸಬೇಕೆಂದು ಸೂಚಿಸಿದರು.
ರೈತರು ನೋಂದಣಿಯನ್ನು ಆಯಾ ಖರೀದಿ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಮಾಡಿಕೊಳ್ಳಬೇಕಾಗುತ್ತದೆ. ಕೃಷಿ ಇಲಾಖೆ ನೀಡಿರುವ ಫä್ರಟ್ಸ್ ಐಡಿಯನ್ನು ಕಡ್ಡಾಯವಾಗಿ ಹಾಜರುಪಡಿಸಿ ನೋಂದಾಯಿಸಿಕೊಳ್ಳಬೇಕು. ಸರ್ಕಾರ ನಿಗಧಿಪಡಿಸಿರುವ ಮಾನದಂಡವನ್ನು ಅನುಸರಿಸಿ ಎಫ್.ಎ.ಕ್ಯೂ. ಗುಣಮಟ್ಟದ ರಾಗಿಯನ್ನು ಮಾತ್ರ ಖರೀದಿ ಮಾಡಬೇಕು. ಕಳಪೆ ಗುಣಮಟ್ಟದ ರಾಗಿ ಖರೀದಿಯಾದರೆ ಸಂಬಂಧಿಸಿದ ಖರೀದಿ ಅಧಿಕಾರಿ ಮತ್ತು ಕೃಷಿ ಇಲಾಖೆಯ ಗ್ರೇಡರ್‌ಗಳನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.
ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯನ್ನು ಜ.1 ರಿಂದ ಪ್ರಾರಂಭಿಸಬೇಕು. ಸರ್ಕಾರದಿಂದ ಪ್ರತಿ ಕ್ವಿಂಟಲ್ ರಾಗಿಗೆ 3578 ರು.ಗಳ ಖರೀದಿ ದರವನ್ನು ನಿಗಧಿಪಡಿಸಲಾಗಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ ಕನಿಷ್ಠ 10 ಕ್ವಿಂಟಲ್‌ನಂತೆ ಗರಿಷ್ಟ20 ಕ್ವಿಂಟಲ್‌ವರೆಗೆ ಮಾತ್ರ ರಾಗಿಯನ್ನು ಖರೀದಿಸಲಾಗುವುದು. ಸರ್ಕಾರ ನಿಗಧಿಪಡಿಸಿದ ಪ್ರಮಾಣವನ್ನು ಮೀರಿ ಹೆಚ್ಚುವರಿಯಾಗಿ ರಾಗಿಯನ್ನು ಖರೀದಿಸುವಂತಿಲ್ಲ ಎಂದರು.
ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಹಾಗೂ ನೋಂದಣಿ ಪ್ರಕ್ರಿಯೆಯಲ್ಲಿ ಬೋಗಸ್ ಗ್ರೇಡಿಂಗ್, ಮತ್ತಿತರ ಲೋಪವೆಸಗುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆಯಿಂದ ರಾಗಿ ಖರೀದಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ನಡೆಸಬೇಕೆಂದು ಸೂಚಿಸಿದರು.
ಜಿಲ್ಲೆಯಲ್ಲಿ ಕಳೆದ 2021-22ನೇ ಸಾಲಿನಲ್ಲಿ 49,634 ರೈತರಿಂದ 7,30,671 ಕ್ವಿಂಟಲ್ ರಾಗಿ ಖರೀದಿಯಾಗಿದ್ದು, ಕೃಷಿ ಇಲಾಖೆಯ ಮಾಹಿತಿಯನ್ವಯ ಈ ಸಾಲಿನಲ್ಲಿ 2.73ಲಕ್ಷ ಮೆ.ಟನ್ ರಾಗಿ ಖರೀದಿಗೆ ಬರಬಹುದೆಂದು ಅಂದಾಜಿಸಲಾಗಿದೆ. ಖರೀದಿ ಕೇಂದ್ರದಲ್ಲಿ ಖರೀದಿಸಿದ ದಾಸ್ತಾನು ಸಂಗ್ರಹ ಮಾಡಲು ಅಗತ್ಯ ಸರ್ಕಾರಿ ಗೋದಾಮುಗಳನ್ನು ಕಾಯ್ದಿರಿಸಬೇಕು. ರೈತರಿಂದ ಯಾವುದೇ ದೂರು ಬಂದರೆ ನಾನು ಸಹಿಸುವುದಿಲ್ಲವೆಂದು ಎಚ್ಚರಿಕೆ ನೀಡಿದರು.
ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡದೆ ರೈತರಿಂದ ನೇರವಾಗಿ ರಾಗಿ ಖರೀದಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಮಾತನಾಡಿ, ಸರ್ಕಾರವು ಪ್ರಸಕ್ತ ಸಾಲಿನಲ್ಲಿ ರಾಗಿ ಖರೀದಿಗೆ ಪ್ರತಿ ಕ್ವಿಂಟಲ್‌ಗೆ 3578 ರು.ಗಳ ದರವನ್ನು ನಿಗಧಿಪಡಿಸಿದೆ. ಇದರಿಂದ ಕಳೆದ ವರ್ಷಕ್ಕಿಂತ ಪ್ರಸಕ್ತ ವರ್ಷದ ರಾಗಿ ಖರೀದಿ ದರ 201 ರು.ಗಳಷ್ಟುಹೆಚ್ಚಳವಾದಂತಾಗಿದೆ. ರಾಗಿ ಖರೀದಿಗಾಗಿ ರೈತರ ನೋಂದಣಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ. ಅಜಯ್, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ರವೀಶ್ ಎನ್., ರಾಜ್ಯ ಉಗ್ರಾಣ ನಿಗಮ, ಎಪಿಎಂಸಿ, ಕೆಎಫ್‌ಸಿಎಸ್‌ಸಿ ಅಧಿಕಾರಿ/ಸಿಬ್ಬಂದಿ, ಎಲ್ಲ ತಹಸೀಲ್ದಾರರು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು
- ಜಿಲ್ಲೆಯಲ್ಲಿ 2022-23ನೇ ಮುಂಗಾರು ಋುತುವಿನ ಅವಧಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ
- ಡಿ. 15 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ