ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಕಿಂಗ್‌ಪಿನ್‌  ಕೋವಿಡ್‌ಗೆ ಬಲಿ ಕೋವಿಡ್‌ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ  ತೀವ್ರ ಉಸಿರಾಟದ ತೊಂದರೆ ಕಾರಣ ಮಂಗಳವಾರ ನಿಧನ

ತುಮಕೂರು (ಮೇ.19): ಎಸ್‌ಎಸ್‌ಎಲ್‌ಸಿ, ಪಿಯುಸಿ, ಪೊಲೀಸ್‌ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಕಿಂಗ್‌ಪಿನ್‌ ಶಿವಕುಮಾರ್‌(65) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 

ಕೋವಿಡ್‌ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 

ಲಸಿಕೆ ಹಾಕಿದರೆ ಮಾಸ್ಕ್, ಅಂತರ ಅಗತ್ಯವಿಲ್ಲ; ಅಮೆರಿಕ CDC ಪ್ರಕಟಣೆಯಿಂದ ಜನ ನಿರಾಳ! ...

ಆದರೆ ತೀವ್ರ ಉಸಿರಾಟದ ತೊಂದರೆ ಕಾರಣ ಮಂಗಳವಾರ ನಿಧನರಾಗಿದ್ದಾರೆ. ಶಿವಕುಮಾರ್‌ ಉಪನ್ಯಾಸಕ ವೃತ್ತಿಗೆ ರಾಜೀನಾಮೆ ಕೊಟ್ಟು ಟ್ಯುಟೋರಿಯಲ್‌ ನಡೆಸುತ್ತಿದ್ದರು.

 ಜೊತೆಗೆ ಕೆಲ ಅಧಿಕಾರಿಗಳ ಸಹಕಾರದೊಂದಿಗೆ ಪ್ರಮುಖ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಮಾಡುವುದನ್ನೇ ದಂಧೆ ಮಾಡಿಕೊಂಡಿದ್ದರು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪೊಲೀಸ್‌ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ವಿಚಾರಣೆಯನ್ನೂ ಎದುರಿಸುತ್ತಿದ್ದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona