ತಿರುಪತಿ ಮಾದರಿಯಲ್ಲಿ ಧರ್ಮಸ್ಥಳದಲ್ಲೂ ಕ್ಯೂ ಸಿಸ್ಟಂ!

ಸರದಿಯಲ್ಲಿ ಜನರು ಸರದಿಯಲ್ಲಿ ನಿಂತು ಕಾಯಬೇಕಿಲ್ಲ. ವಿಶಾಲವಾದ ಭವನದಲ್ಲಿ ಕುರ್ಚಿಗಳ ಮೇಲೆ ಕುಳಿತು ಕ್ರಮೇಣವಾಗಿ ಮುಂದಿನ ಭವನಗಳಿಗೆ ಸ್ಥಳಾಂತರಗೊಳ್ಳಬಹುದು.
 

Queue system also in Dharmasthala on Tirupati Model grg

ಬೆಳ್ತಂಗಡಿ(ಜ.05): ನಾಡಿನ ಪುಣ್ಯ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿಯ ದರ್ಶನಕ್ಕೆ ಭಕ್ತರಿಗಾಗಿ ತಿರುಪತಿ ಮಾದರಿಯಲ್ಲಿ ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣ 'ಶ್ರೀ ಸಾನ್ನಿಧ್ಯ'ವನ್ನು ನಿರ್ಮಿಸಲಾಗಿದೆ. ರಾಜ್ಯದ ದೇಗುಲವೊಂದು ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರುತ್ತಿರುವುದು ಇದೇ ಮೊದಲು. 

ಜ.7ರಂದು ಉಪರಾಷ್ಟ್ರಪತಿ ಜಗದೀಪ್ ಧನಕ‌ರ್ ಅವರು ಈ ನೂತನ ಸಂಕಿರ್ಣವನ್ನು ಉದ್ಘಾಟಿಸಲಿದ್ದಾರೆ. ಡಾ.ಸುದೇಶ ಧನಕ‌ರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹೇಮಾವತಿ ವೀ. ಹೆಗ್ಗಡೆ, ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸುವರು.  ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. 

ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿ ಅಶುದ್ಧಕ್ಕೆ ಷಡ್ಯಂತ್ರ? ಗೋಹತ್ಯೆ ತಾಜ್ಯ ಎಸೆದ ಕಿಡಿಗೇಡಿಗಳು!

ಹೀಗಿರಲಿದೆ ಸರದಿ ವ್ಯವಸ್ಥೆ: 

ಸಕಲ ಸೌಲಭ್ಯಗಳನ್ನೊಳಗೊಂಡ ಸರತೆ ಸಾಲಿನ ಸಮುಚ್ಚಯ 2,75,177 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿದ್ದು, 2 ಅಂತಸ್ತು ಹೊಂದಿದೆ. ಸಂಕೀರ್ಣದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಭಕ್ತರಿಗೆ ಎಲ್ಲ ಸೌಲಭ್ಯ ಅಳವಡಿಸಲಾಗಿದೆ. 16 ವಿಶಾಲ ಭವನಗಳಿದ್ದು, ಸರತಿಸಾಲಿನಲ್ಲಿ ಬಂದ ಭಕ್ತರು ವಿಶ್ರಾಂತಿ ಪಡೆಯಬಹುದು. ಪ್ರತಿ ಭವನದಲ್ಲಿ 800 ಮಂದಿ ತಂಗಲು ಅವಕಾಶವಿದೆ. ಇದರರ್ಥ, ಸರದಿಯಲ್ಲಿ ಜನರು ಸರದಿಯಲ್ಲಿ ನಿಂತು ಕಾಯಬೇಕಿಲ್ಲ. ವಿಶಾಲವಾದ ಭವನದಲ್ಲಿ ಕುರ್ಚಿಗಳ ಮೇಲೆ ಕುಳಿತು ಕ್ರಮೇಣವಾಗಿ ಮುಂದಿನ ಭವನಗಳಿಗೆ ಸ್ಥಳಾಂತರಗೊಳ್ಳಬಹುದು.

ಭವನಗಳಲ್ಲಿ ಮಕ್ಕಳ ಆರೈಕೆ ಕೊಠಡಿ, ಶೌಚಗೃಹ, ಕ್ಯಾಂಟೀನ್‌ ಸೌಲಭ್ಯವಿದೆ. ಅಲ್ಲಲ್ಲಿ ಸೂಚನಾ ಫಲಕ ಹಾಗೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪ್ರವೇಶದ್ವಾರದ ಎದುರು ಧರ್ಮಸ್ಥಳದ ಇತಿಹಾಸ ಮತ್ತು ಪರಂಪರೆ ಬಿಂಬಿಸುವ ಆಕರ್ಷಕ ಕಲಾಕೃತಿಗಳನ್ನು ಅಳವಡಿಸಲಾಗಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ತಿರುಪತಿ ಮಾದರಿಯಲ್ಲಿ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣವನ್ನು ಧರ್ಮಸ್ಥಳದಲ್ಲಿ ನಿರ್ಮಿಸಲಾಗಿದೆ.

ಮಹಿಳೆಯರನ್ನು ಸಬಲರನ್ನಾಗಿ ಮಾಡುವುದು ನಮ್ಮ ಗುರಿ: ವೀರೇಂದ್ರ ಹೆಗ್ಗಡೆ

ಹೊಳಲ್ಕೆರೆ: ಮಹಿಳೆಯರು ಅರ್ಥಿಕವಾಗಿ ಸಬಲರನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ, ಇದನ್ನು ಮಾಡುವುದಕ್ಕಾಗಿ ಸಂಘಗಳನ್ನು ಸ್ಥಾಪನೆ ಮಾಡುವುದರ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು. 

ಧರ್ಮಸ್ಥಳ ಮಾದರಿ ಯೋಜನೆ ದೇಶವ್ಯಾಪಿ ಜಾರಿಗೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಡಿ.25 ರಂದು ಹೊಳಲ್ಕೆರೆ ನಗರದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನ ವಿಕಾಸ ಸೌಧ ಹಾಗೂ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಮಹಿಳೆಯರು ಅರ್ಥಿಕವಾಗಿ ಸ್ವಾವಲಂಬಿಗಳಾಗಲು ನಮ್ಮ ಸಂಸ್ಥೆ ನೆರವಾಗಿದೆ. ಅವರನ್ನು ಮನೆಯ ಆರ್ಥಿಕ ಮಂತ್ರಿಯನ್ನಾಗಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದರು. 

ಮಹಿಳೆಯರ ಮೇಲೆ ಆಪಾರವಾದ ನಂಬಿಕೆ ಇದೆ. ಅವರಿಗೆ ಸಾಲ ನೀಡಿದರೆ ವಾಪಾಸ್ಸು ಬರುತ್ತದೆ ಎಂಬ ನಂಬಿಕೆ ಇದೆ. ಅವರು ಪಡೆದ ಸಾಲವನ್ನು ಸರಿಯಾಗಿ ಉಪಯೋಗವನ್ನು ಮಾಡುತ್ತಾರೆ. ಅದೇ ರೀತಿ ವಾಪಸ್ಸು ಮಾಡುತ್ತಾರೆ ಇದರಿಂದ ನಾವು ಅಲ್ಲದೆ ಬ್ಯಾಂಕ್‌ಗಳು ಸಹಾ ಮಹಿಳೆಯರಿಗೆ ಸಾಲವನ್ನು ನೀಡಲು ಮುಂದಾಗಿದೆ ಎಂದು ತಿಳಿಸಿದರು. ನಮ್ಮಲ್ಲಿ ಸ್ವಸಹಾಯ ಸಂಘಗಳಲ್ಲಿ ಪ್ರತಿ ವರ್ಷ ರೇಟಿಂಗ್ ನೀಡಲಾಗುತ್ತದೆ. ಇದರಲ್ಲಿ ಉತ್ತಮವಾಗಿ ಕೆಲಸವನ್ನು ಮಾಡುವ ಸಂಘಗಳಿಗೆ ಲಾಭಾಂಶವನ್ನು ನೀಡಲಾಗುತ್ತದೆ ಹೊಳಲ್ಕೆರೆಯಲ್ಲಿ ಇರುವ ೪೦೦೦ ಸಂಘಗಳಲ್ಲಿ ೫೦ ಸಂಘಗಳು ಪ್ರಗತಿ ಕಡಿಮೆಯಾಗಿದೆ ಇದನ್ನು ಸರಿಪಡಿಸಬೇಕಿದೆ ಎಂದು ಕರೆ ನೀಡಿದ್ದರು. 

Latest Videos
Follow Us:
Download App:
  • android
  • ios