ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿ ಸರ್ಕಾರ: ಆರ್.ಧ್ರುವನಾರಾಯಣ್ ಆರೋಪ
ಬಿಜೆಪಿ ಸರ್ಕಾರ ಬಡವರ ಪರ ಯಾವ ಯೋಜನೆಯನ್ನೂ ಜಾರಿಗೆ ತಂದಿಲ್ಲ, ಅಗತ್ಯ ವಸ್ತುಗಳ ಬೆಲೆ ಏರಿಸಿ ಭ್ರಷ್ಟಾಚಾರದಲ್ಲಿ ತೊಡಗಿ ಲೂಟಿಯಲ್ಲಿ ತೊಡಗಿದ್ದೇ ಅವರ ದೊಡ್ಡ ಸಾಧನೆಯಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಹೇಳಿದರು.
ನಂಜನಗೂಡು (ನ.03): ಬಿಜೆಪಿ ಸರ್ಕಾರ ಬಡವರ ಪರ ಯಾವ ಯೋಜನೆಯನ್ನೂ ಜಾರಿಗೆ ತಂದಿಲ್ಲ, ಅಗತ್ಯ ವಸ್ತುಗಳ ಬೆಲೆ ಏರಿಸಿ ಭ್ರಷ್ಟಾಚಾರದಲ್ಲಿ ತೊಡಗಿ ಲೂಟಿಯಲ್ಲಿ ತೊಡಗಿದ್ದೇ ಅವರ ದೊಡ್ಡ ಸಾಧನೆಯಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಹೇಳಿದರು. ತಾಲೂಕಿನ ದೇವನೂರು, ದೊಡ್ಡಕವಲಂದೆ, ಕೂಡ್ಲಾಪುರ, ನೇರಳೆ, ಗ್ರಾಪಂ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆ ನಡೆಸುವ ವೇಳೆ ಗಟ್ಟವಾಡಿಪುರ ಗ್ರಾಮದಲ್ಲಿ ಮಾತನಾಡಿದರು.
ದೊಡ್ಡಕವಲಂದೆ ಭಾಗದಲ್ಲಿ ಬರಗಾಲ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿತ್ತು. ಸಮಸ್ಯೆ ಪರಿಹರಿಸುವ ಸಲುವಾಗಿ ಇಡೀ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಕವಲಂದೆ ಭಾಗದ 56 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ನದಿ ಮೂಲದಿಂದ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಕೆಲಸವನ್ನು ಮಾಡಿದೆ. ನಂತರ ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಭಾಗದ ಎಲ್ಲಾ ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದರಿಂದಾಗಿ ಅಂತರ್ಜಲ ಹೆಚ್ಚಾಗಿ ಕೃಷಿಗೂ ನೀರು ದೊರಕುವಂತಾಗಿದೆ ಎಂದರು.
ಪಂಚರತ್ನ ಯೋಜನೆಯಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿ: ನಿಖಿಲ್ ಕುಮಾರಸ್ವಾಮಿ
ಸಿದ್ದರಾಮಯ್ಯ ಅವಧಿಯಲ್ಲಿ 150 ಭರವಸೆಗಳಲ್ಲಿ 150 ಭರವಸೆಗಳನ್ನು ಈಡೇರಿಸಲಾಗಿದೆ. ಅಲ್ಲದೆ ಅನ್ನಭಾಗ್ಯ ಯೋಜನೆಯಿಂದ ಕೊರೋನಾ ಕಾಲದಲ್ಲೂ ಬಡವರು ಬದುಕುವಂತಾಯಿತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದು 3 ವರ್ಷ ಕಳೆದರೂ ಸಹ ಬಡವರ ಪರವಾಗಿ ಯಾವ ಯೋಜನೆಯನ್ನೂ ಜಾರಿಗೆ ತಂದಿಲ್ಲ. ಅಭಿವೃದ್ದಿ ಕೆಲಸಗಳನ್ನು ಮಾಡದೆ ಇರುವುದರಿಂದ ಅಭಿವೃದ್ದಿ ವಿಷಯ ಮಾತನಾಡದೆ ಧರ್ಮ, ಜಾತಿಗಳನ್ನು ಆಧಾರವಾಗಿಟ್ಟುಕೊಂಡು ಮತ ಕೇಳುತ್ತಿದ್ದಾರೆ. ಅಲ್ಲದೆ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಕಣ್ಣೀರು ಬರಿಸಿದ ಬಿಜೆಪಿಗರು ಈಗ ಅವರದೇ ನಾಯಕತ್ವವೆಂದು ನಾಟವಾಡುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ಅತಿ ಹೆಚ್ಚಾಗಿ ಬೆಂಬಲಿಸುವ ಮೂಲಕ ಅವಕಾಶವಾದಿ ಬಿಜೆಪಿ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಅವರು ಕರೆ ನೀಡಿದರು.
ಈ ವೇಳೆ ಹರಗಿನಪುರದ ಗ್ರಾಪಂ ಸದಸ್ಯ ಸಿದ್ದಲಿಂಗಪ್ಪ, ನಾಗೇಶ್, ಬಸವಣ್ಣ, ಬಸವರಾಜು, ಜಗದೀಶ, ದೊರೆಸ್ವಾಮಿ, ಮಹೇಶ್, ರವಿ, ಗಟ್ಟವಾಡಿಪುರದ ವೀರಶೈವ ಮುಖಂಡರಾದ ಗೌಡಿಕೆ ಮಹದೇವಪ್ಪ, ಸದಾಶಿವಪ್ಪ, ಸೋಮಶೇಖರಪ್ಪ, ರಾಜಶೇಖರಪ್ಪ, ಕೆ.ಪಿ. ಶಿವಪ್ಪ, ಕೂಸಪ್ಪ, ಬಸವಣ್ಣ, ರಂಗಸ್ವಾಮಿ, ಮಂಜುನಾಥ್, ಪ್ರಸಾದ್, ನಾರಾಯಣ ನಾಯಕ, ನಾಗರಾಜಶೆಟ್ಟಿ, ಮುದ್ದಶೆಟ್ಟಿ, ಮಾದಣ್ಣ, ಸೇರಿದಂತೆ 30 ಜನ ಕಾರ್ಯಕರ್ತರು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಕಾಂಗ್ರೆಸ್‌ಗೆ ಅಧಿಕಾರ ದೊರೆಯುವ ಮುನ್ಸೂಚನೆ: ಮಯೂರ್ ಜಯಕುಮಾರ್
ಸಮಾರಂಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿಮಹೇಶ್, ಜಿಪಂ ಮಾಜಿ ಸದಸ್ಯರಾದ ಕೆ. ಮಾರುತಿ, ಲತಾಸಿದ್ದಶೆಟ್ಟಿ, ಮುಖಂಡರಾದ ಶಿವಪ್ಪದೇವರು, ಕುಳ್ಳಯ್ಯ, ರಾಜೇಶ್, ಉಪ್ಪಿನಹಳ್ಳಿ ಶಿವಣ್ಣ, ಗ್ರಾಪಂ ಅಧ್ಯಕ್ಷ ಶಂಕರ್ ನಾಯಕ, ಸದಸ್ಯರಾದ ಗುರುಪಾದ, ಶಂಕರ್, ಬಸವಣ್ಣ, ತಾಪಂ ಮಾಜಿ ಅಧ್ಯಕ್ಷ ಬಿ.ಎಂ. ನಾಗೇಶ್‌ರಾಜ್, ಮಾಜಿ ಸದಸ್ಯ ಪದ್ಮನಾಭ ಮೊದಲಾದವರು ಇದ್ದರು.