ಮುಂಬರುವ ವಿಧಾನ ಪರಿಷತ್‌ ಚುನಾವಣೆಗೆ ಚಾಮರಾಜನಗರ-ಮೈಸೂರು ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಕಾಂಕ್ಷೆ ಪಕ್ಷದ ವರಿಷ್ಠರು ಅವಕಾಶ ಮಾಡಿಕೊಡುವ ವಿಶ್ವಾಸ ಹೊಂದಿರುವುದಾಗಿ  ಹೇಳಿದ ಮುಖಂಡ

ಟಿ. ನರಸೀಪುರ (ಸೆ.17): ಮುಂಬರುವ ವಿಧಾನ ಪರಿಷತ್‌ ಚುನಾವಣೆಗೆ ಚಾಮರಾಜನಗರ-ಮೈಸೂರು ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದು, ಪಕ್ಷದ ವರಿಷ್ಠರು ಅವಕಾಶ ಮಾಡಿಕೊಡುವ ವಿಶ್ವಾಸ ಹೊಂದಿರುವುದಾಗಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್‌. ರಘು ಕೌಟಿಲ್ಯ ಹೇಳಿದರು.

ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಗಂಗಾ ಕಲ್ಯಾಣ ಯೋಜನೆಯ ಅನುಷ್ಠಾನದ ಪರಿಶೀಲನೆ ನಡೆಸಿ ಗ್ರಾಮದ ಫಲಾನುಭವಿಗಳೊಂದಿಗೆ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

2023ಕ್ಕೆ ನಮ್ಮ ಮನೆ ಬಾಗಿಲಿಗೆ ಕಾಂಗ್ರೆಸ್‌, ಬಿಜೆಪಿ: ದೇವೇಗೌಡ

ಬಿಜೆಪಿ ವರಿಷ್ಠರು ಕಳೆದ ಬಾರಿ ವಿಧಾನ ಪರಿಷತ್‌ ಚುನಾವಣೆಗೆ ಅವಕಾಶ ಕಲ್ಪಿಸಿಕೊಟ್ಟಂತೆ ಈ ಬಾರಿಯೂ ನನ್ನ ಮೇಲೆ ವಿಶ್ವಾಸವಿರಿಸಿ ಅವಕಾಶ ಮಾಡಿಕೊಟ್ಟಲ್ಲಿ ಚುನಾವಣೆಗೆ ಸ್ಪರ್ಧಿಸಲು ಉತ್ಸುಕನಾಗಿದ್ದೇನೆ. ಈಗಾಗಲೇ ಮತದಾರರು ಮತ್ತು ಸ್ಥಳೀಯ ಸಂಸ್ಥೆ ಪ್ರತಿನಿಧಿಗಳನ್ನು ಸಂಪರ್ಕಿಸಿ ಮಾತುಕತೆ ನಡೆಸುತ್ತಿದ್ದು, ವರಿಷ್ಠರು ನನ್ನ ಉಮೇದುವಾರಿಕೆಯನ್ನು ಮಾನ್ಯ ಮಾಡುವರೆಂಬ ವಿಶ್ವಾಸ ಹೊಂದಿದ್ದು, ಟಿ. ನರಸೀಪುರದಿಂದಲೇ ಚುನಾವಣೆಗೆ ಮುನ್ನುಡಿ ಬರೆಯಲಿದ್ದೇನೆ ಎಂದರು.