ರಾಯಚೂರು: ಮತ್ತೆ ರಾಯರ ಮಠಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ
* ಕಳೆದ 3 ತಿಂಗಳಿಂದ ಶ್ರೀಮಠ ಬಂದ್
* ಪ್ರತಿ ನಿತ್ಯ ಬೆಳಗ್ಗೆ 6ರಿಂದ ಮಧ್ಯಾಹ್ನ 2ರ ವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 9ರ ವರೆಗೆ ದರ್ಶನ
* ಕೋವಿಡ್ ನಿಯಮ ಪಾಲಿಸಿ ಭಕ್ತರು ಗುರುರಾಯರ ದರ್ಶನ ಪಡೆಯಬಹುದು
ರಾಯಚೂರು(ಜೂ.18): ಕೊರೋನಾ 2ನೇ ಅಲೆಯ ಅಬ್ಬರವು ತಗ್ಗಿದ ಹಿನ್ನೆಲೆಯಲ್ಲಿ ಭಕ್ತರಿಗೆ ಜೂ.22ರಿಂದ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನದ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ
ಇಲಾಖೆಯ ಮಾರ್ಗಸೂಚನೆ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಿ ಭಕ್ತರು ಗುರುರಾಯರ ದರ್ಶನವನ್ನು ಪಡೆಯಬಹುದಾಗಿದೆ. ಪ್ರತಿ ನಿತ್ಯ ಬೆಳಗ್ಗೆ 6ರಿಂದ ಮಧ್ಯಾಹ್ನ 2ರ ವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 9ರ ವರೆಗೆ ಭಕ್ತರಿಗೆ ರಾಯರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ರಾಯಚೂರು ವಿಮಾನ ನಿಲ್ದಾಣಕ್ಕೆ ರಾಯರ ಹೆಸರಿಡಲು ತೀರ್ಮಾನ
ಮಹಾಮಾರಿ ಕೊರೋನಾ ಎರಡನೇ ಅಲೆ ತೀವ್ರ ಸ್ವರೂಪ ಪಡೆದ ಕಾರಣಕ್ಕೆ ಲಾಕ್‌ಡೌನ್ ಜಾರಿಗೊಳಿಸಿದ ಕಾರಣ ದೇವಸ್ಥಾನಗಳು, ಧಾರ್ಮಿಕ ಕೇಂದ್ರಗಳಿಗೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು. ಮಂತ್ರಾಲಯದಲ್ಲೂ ಕಳೆದ 3 ತಿಂಗಳಿಂದ ಶ್ರೀಮಠವನ್ನು ಬಂದ್ ಮಾಡಲಾಗಿತ್ತು. ಮಠದಲ್ಲಿ ನಡೆಯುತ್ತಿದ್ದಂತಹ ಧಾರ್ಮಿಕ, ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆನ್‌ಲೈನ್‌ನಲ್ಲಿ ಶ್ರೀಮಠವು ಬಿತ್ತರಿಸುತ್ತಿತ್ತು.
ಇದೀಗ ಶ್ರೀರಾಯರ ಮೂಲ ಬೃಂದಾನವನದ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ಶ್ರೀಮಠದ ವ್ಯವಸ್ಥಾಪಕ ವೆಂಕಟೇಶ ಜೋಶಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.