ನಗರದ ಸ್ವಾತ್ರಂತ್ರ್ಯ ಉದ್ಯಾನದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ಹಿನ್ನೆಲೆಯಲ್ಲಿ ಆ ಪ್ರದೇಶ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಪೊಲೀಸರು ಬದಲಾವಣೆ ಮಾಡಿದ್ದಾರೆ.

ಬೆಂಗಳೂರು : ನಗರದ ಸ್ವಾತ್ರಂತ್ರ್ಯ ಉದ್ಯಾನದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ಹಿನ್ನೆಲೆಯಲ್ಲಿ ಆ ಪ್ರದೇಶ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಪೊಲೀಸರು ಬದಲಾವಣೆ ಮಾಡಿದ್ದಾರೆ.

ಫ್ರೀಡಂ ಪಾರ್ಕ್‌ ಮಾರ್ಗದ ಶೇಷಾದ್ರಿ ರಸ್ತೆ ವ್ಯಾಪ್ತಿಯಲ್ಲಿ ಸಂಚರಿಸುವ ನಾಗರಿಕರಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದ್ದು, ಸಂಚಾರ ಬದಲಾವಣೆಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಸಂಚಾರ ವಿಭಾಗದ ಪೊಲೀಸರು ಕೋರಿದ್ದಾರೆ.

ಸಂಚಾರ ನಿರ್ಬಂಧಿ ರಸ್ತೆ:

1.ಶಾಂತಲಾ ಜಂಕ್ಷನ್ ಮತ್ತು ಖೋಡೆ ಸರ್ಕಲ್ ನಿಂದ ಆನಂದ ರಾವ್ ಮೇಲ್ಸೇತುವೆ, ಹಳೇ ಜೆಡಿಎಸ್‌ ಕ್ರಾಸ್‌, ಶೇಷಾದ್ರಿ ರಸ್ತೆಯಿಂದ ಫ್ರೀಡಂ ಪಾರ್ಕ್ ಸಾಗುವ ರಸ್ತೆ.

2.ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆ.

3.ಚಾಲುಕ್ಯ ಸರ್ಕಲ್ ನಿಂದ ಮೈಸೂರು ಬ್ಯಾಂಕ್ ಕಡೆಗೆ.

4.ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು.

5.ಮೌರ್ಯ/ಸುಬ್ಬಣ್ಣ ಜಂಕ್ಷನ್‌ನಿಂದ ಫ್ರೀಡಂ ಪಾರ್ಕ್ ಕಡೆ.

ಪರ್ಯಾಯ ಮಾರ್ಗ:

1.ಸುಬ್ಬಣ್ಣ ಜಂಕ್ಷನ್‌ನಿಂದ ಬಲತಿರುವು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದು.

2.ಲುಲು ಮಾಲ್‌, ಕೆಎಫ್‌ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿಮಾಲ್‌, ಸ್ವಸ್ತಿಕ್‌ ಸರ್ಕಲ್, ಶೇಷಾದ್ರಿಪುರ, ನೆಹರು ಸರ್ಕಲ್, ರೇಸ್ ಕೋರ್ಸ್ ಮೇಲ್ಸೇತುವೆ, ರೇಸ್ ಕೋರ್ಸ್ ರಸ್ತೆ ಮೂಲಕ ಸಂಚರಿಸುವುದು.

3.ಕೆ.ಜಿ.ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆ.ಎಫ್.ಎಂ. ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರು ಸರ್ಕಲ್, ರೇಸ್ ಕೋರ್ಸ್ ಮೇಲ್ಸೇತುವೆ ರಸ್ತೆ ಮೂಲಕ ಸಾಗಬೇಕು.

4.ಚಾಲುಕ್ಯ ಸರ್ಕಲ್, ಎಲ್‌ಆರ್‌ಡಿ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್ ನಿಂದ ತೆರಳುವುದು.

5.ಕನಕದಾಸ ಜಂಕ್ಷನ್ ಬಲ ತಿರುವು ಪಡೆದು ಸಾಗರ ಜಂಕ್ಷನ್ ಕಡೆಗೆ ಸಂಚರಿಸಬಹುದು.