ರಾಯಚೂರು :  ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಯಚೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದ್ದಾರೆ. 

ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಹಸಿರು ಸೇನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿದರು. 

ರಾಯಚೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 167 ರಸ್ತೆ ಬಂದ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ರಸ್ತೆಯಲ್ಲಿ ಪ್ರತಿಭಟನೆಗೆ ಇಳಿದಿದ್ದರು.

2013 ರ ಭೂಸ್ವಾಧೀನ ಕಾಯ್ದೆ ಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದು ರೈತ ಸಮುದಾಯಕ್ಕೆ ತೊಂದರೆ  ಮಾಡುತ್ತಿದೆ ಎಂದು ಈ ವೇಳೆ ರೈತ ಸಂಘಟನೆ ಹಾಗೂ ಹಸಿರು ಸೇನೆ ಕಾರ್ಯಕರ್ತರು ಆರೋಪ ಮಾಡಿದರು.  

ಇದೇ ವೇಳೆ ರಾಜ್ಯ ಸರ್ಕಾರ ತಿದ್ದುಪಡಿ ಕಾಯ್ದೆಯನ್ನು ವಾಪಸ್ಸು ಪಡೆಯುವಂತೆ ಪ್ರತಿಭಟನೆ ವೇಳೆ ಆಗ್ರಹಿಸಿದರು.