Asianet Suvarna News Asianet Suvarna News

Hubballi: ಮಂಗಳವಾರ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌

ನೈಋತ್ಯ ರೈಲ್ವೆ ವಲಯದ ಬಹು ಬೇಡಿಕೆಯ ಹುಬ್ಬಳ್ಳಿ-ಹಜರತ್ ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲು ನಾಳೆಯಿಂದ ಮತ್ತೆ  ಪ್ರಾರಂಭವಾಗಲಿದೆ. ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್‌ ಅಗಸ್ಟ್ 11ರಂದು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಲಿದ್ದಾರೆ.

Railway Minister Ashwini Vaishnaw Will Inaugurate The New Hubli Delhi Train On Tuesday gvd
Author
First Published Oct 10, 2022, 8:28 PM IST

ಹುಬ್ಬಳ್ಳಿ (ಅ.10): ನೈಋತ್ಯ ರೈಲ್ವೆ ವಲಯದ ಬಹು ಬೇಡಿಕೆಯ ಹುಬ್ಬಳ್ಳಿ-ಹಜರತ್ ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲು ನಾಳೆಯಿಂದ ಮತ್ತೆ  ಪ್ರಾರಂಭವಾಗಲಿದೆ. ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್‌ ಅಗಸ್ಟ್ 11ರಂದು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಲಿದ್ದಾರೆ. ಇದರೊಂದಿಗೆ ವಿಶ್ವದ ಅತಿದೊಡ್ಡ ರೈಲ್ವೆ ರೈಲ್ವೆ ನಿಲ್ದಾಣದ 3ನೇ ಪ್ರವೇಶ ದ್ವಾರ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಂಗಣದಲ್ಲಿ ಸಂಗೀತ ವಿದ್ವಾಂಸ ಸವಾಯಿ ಗಂಧರ್ವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದು, ಬಳಿಕ ಮಧ್ಯಾಹ್ನ 12.30ಕ್ಕೆ 20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ಧಾರವಾಡ ರೈಲ್ವೆ ನಿಲ್ದಾಣ, ಮಧ್ಯಾಹ್ನ 3ಗಂಟೆಗೆ 115 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಹುಬ್ಬಳ್ಳಿ ರೈಲ್ವೆ ನಿಲ್ದಾಣದ 3ನೇ ಪ್ರವೇಶ ದ್ವಾರ ಲೋಕಾರ್ಪಣೆಗೊಳಿಸಲಿದ್ದಾರೆ. ಆನಂತರ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಹುಬ್ಬಳ್ಳಿ-ನಿಜಾಮುದ್ದೀನ್‌ ಹೊಸ ರೈಲಿಗೆ ಅಶ್ವಿನಿ ವೈಷ್ಣವ್‌ ಹಸಿರು ನಿಶಾನೆ ತೋರಿಸಲಿದ್ದಾರೆ. ಈ ಹಿಂದೆ ಇದ್ದ ಹುಬ್ಬಳ್ಳಿ-ನಿಜಾಮುದ್ದೀನ್‌ ಲಿಂಕ್‌ ರೈಲನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿತ್ತು. ಇದನ್ನು ಅರಿತ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತೆ ರೈಲು ಓಡಿಸುವಂತೆ ಒತ್ತಾಯಿಸಿದ್ದರು. ಹೀಗಾಗಿ ಮಂಗಳವಾರ ರೈಲು ಸಂಚಾರ ಆರಂಭವಾಗಲಿದೆ.

Dharwad News: ಉದ್ಘಾಟನೆಗೆ ಮೊದಲೇ ಬಿರುಕು ಬಿಟ್ಟ ಶಾಲಾ ಕೊಠಡಿ!

ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದ 3ನೇ ಪ್ರವೇಶ ದ್ವಾರ ನಿರ್ಮಾಣ ಪೂರ್ಣಗೊಂಡಿದೆ. ಮಂಟೂರು ರಸ್ತೆಯಲ್ಲಿ ನಿರ್ಮಿಸಿರುವ ಈ ದ್ವಾರದಿಂದ ರೈಲ್ವೆ ನಿಲ್ದಾಣವನ್ನು ಮೂರು ದಿಕ್ಕಿನಿಂದಲೂ ಪ್ರಯಾಣಿಕರು ಪ್ರವೇಶಿಸಲು ಹಾಗೂ ನಿರ್ಗಮಿಸಲು ಅವಕಾಶ ಕಲ್ಪಿಸಿದಂತೆ ಆಗಿದೆ. ಇದು ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದ್ದು ಜನದಟ್ಟಣೆಯ ನಿಯಂತ್ರಣ ಸಹ ಮಾಡಬಹುದಾಗಿದೆ ಎಂದು ನೈರುತ್ಯ ರೈಲ್ವೆ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗ್ಡೆ ಅವರು ಮಾಹಿತಿ ನೀಡಿದ್ದಾರೆ.

ಧಾರವಾಡ ರೈಲ್ವೆ ನಿಲ್ದಾಣ: 20 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಧಾರವಾಡ ರೈಲ್ವೆ ನಿಲ್ದಾಣ ಆಧುನಿಕ ವಾಸ್ತುಶಿಲ್ಪ ಸಂಯೋಜನೆ ಒಳಗೊಂಡಿದೆ. 1936ರಲ್ಲಿ ಅಂದಿನ ಮದ್ರಾಸ್‌ ದಕ್ಷಿಣ ಮರಾಠಾ ರೈಲ್ವೆ ವತಿಯಿಂದ ನಿಲ್ದಾಣ ನಿರ್ಮಿಸಲಾಗಿತ್ತು. 2018ರಲ್ಲಿ ಈ ರೈಲ್ವೆ ನಿಲ್ದಾಣವನ್ನು .19.05 ಕೋಟಿ ವೆಚ್ಚದಲ್ಲಿ ನವೀಕರಿಸಲು ಚಾಲನೆ ನೀಡಲಾಗಿತ್ತು. ಈ ನಿಲ್ದಾಣಕ್ಕೆ ರವೀಂದ್ರನಾಥ ಟ್ಯಾಗೂರ್‌ ಭೇಟಿ ನೀಡಿದ ಸ್ಮರಣಾರ್ಥ ಪ್ಲಾಟ್‌ಫಾರಂ 1ರಲ್ಲಿ ‘ಟ್ಯಾಗೂರ್‌ ವಾಟಿಕಾ’ ಎಂದು ನಾಮಕರಣ ಮಾಡಿ ಪುತ್ಥಳಿ ಪ್ರತಿಷ್ಠಾಪಿಸಲಾಗಿದೆ.

ಹೊರಟ್ಟಿ ಅವರನ್ನು ಬಿಜೆಪಿ ಗೌರವಯುತವಾಗಿ ನಡೆಸಿಕೊಳ್ಳಲಿ: ಬೆಂಬಲಿಗರು ಆಕ್ರೋಶ

ಮೂರನೇ ಪ್ರವೇಶ ದ್ವಾರ: ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದ 3ನೇ ಪ್ರವೇಶ ದ್ವಾರ ನಿರ್ಮಾಣ ಪೂರ್ಣಗೊಂಡಿದೆ. ಮಂಟೂರು ರಸ್ತೆಯಲ್ಲಿ ನಿರ್ಮಿಸಿರುವ ಈ ದ್ವಾರದಿಂದ ರೈಲ್ವೆ ನಿಲ್ದಾಣವನ್ನು ಮೂರು ದಿಕ್ಕಿನಿಂದಲೂ ಪ್ರಯಾಣಿಕರು ಪ್ರವೇಶಿಸಲು ಹಾಗೂ ನಿರ್ಗಮಿಸಲು ಅವಕಾಶ ಕಲ್ಪಿಸಿದಂತೆ ಆಗಿದೆ. ಬೆಂಗಳೂರು ಹಾಗೂ ಯಶವಂತಪುರ ನಿಲ್ದಾಣ ಹೊರತುಪಡಿಸಿದರೆ 3ನೇ ಪ್ರವೇಶದ್ವಾರ ಹೊಂದಿರುವುದು ಹುಬ್ಬಳ್ಳಿಯಲ್ಲಿ ಮಾತ್ರ. ಈ ನಿಲ್ದಾಣದಲ್ಲಿ ಈ ಮೊದಲು 5 ಪ್ಲಾಟ್‌ ಫಾರಂಗಳಿದ್ದವು. ಇದೀಗ ಅವುಗಳ ಸಂಖ್ಯೆ 8ಕ್ಕೇರಿದೆ. 1505 ಮೀಟರ್‌ ಉದ್ದದ ಪ್ಲಾಟ್‌ ಫಾರ್‌ಂನಲ್ಲಿ ರೈಲು ಹತ್ತಲು ಪ್ರಯಾಣಿಕರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ 3ನೇ ಪ್ರವೇಶದ್ವಾರ ನಿರ್ಮಿಸಲಾಗಿದೆ. ನೂತನ ಪ್ರವೇಶ ದ್ವಾರವು 6,7 ಹಾಗೂ 8ನೇ ಪ್ಲಾಟ್‌ಫಾರಂಗೆ ಸಂಪರ್ಕ ಕಲ್ಪಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

Follow Us:
Download App:
  • android
  • ios