ಹುಬ್ಬಳ್ಳಿ(ಜೂ.04): ಪ್ರಧಾನಿ ಮೋದಿ 2.0 ಸರ್ಕಾರ ಅಧಿಕೃತವಾಗಿ ಕಾರ್ಯಾರಂಭ ಮಾಡಿ ದಿನಗಳೇ ಉರುಳಿವೆ. ಎಲ್ಲಾ ಸಚಿವರು ತಮ್ಮ ತಮ್ಮ ಇಲಾಖೆಯ ಜವಾಬ್ದಾರಿ ಹೊತ್ತು ಕೆಲಸ ಆರಂಭಿಸಿದ್ದಾರೆ.

ಅದರಂತೆ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಕೂಡ ತಮ್ಮ ಇಲಾಖೆಯ ಕೆಲಸ ಕಾರ್ಯಗಳನ್ನು ಚುರುಕುಗೊಳಿಸಿದ್ದಾರೆ.

ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿದ್ದ ಸುರೇಶ್ ಅಂಗಡಿ, ರೈಲು ನಿಲ್ದಾಣದ ಕುಂದು ಕೊರತೆಗಳ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದಿದ್ದಾರೆ.

ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಸಾರ್ವಜನಿಕರ ಕುಂದುಕೊರತೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಅಲ್ಲದೇ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೊರಟಿದ್ದ ರಾಣಿ ಚೆನ್ನಮ್ಮ ಎಕ್ಸಪ್ರೆಸ್ ರೈಲಿನ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದ ಸುರೇಶ್ ಅಂಗಡಿ, ರೈಲಿನ ಮೂಲಭೂತ ಸೌಕರ್ಯಗಳ ಕುರಿತು ಪ್ರಯಾಣಿಕರಿಂದ ಮಾಹಿತಿ ಪಡೆದರು.