ಮಳೆ ಹಾನಿ: ದ.ಕ. ಜಿಲ್ಲಾಡಳಿತದಿಂದ ಅಗತ್ಯ ಪರಿಹಾರ ಕ್ರಮ

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ತೀವ್ರ ಮಳೆಯಿಂದ ಹಾನಿಗೊಳಗಾದ ನಾಗರಿಕರಿಗೆ ಜಿಲ್ಲಾಡಳಿತದಿಂದ ಸೂಕ್ತ ಪರಿಹಾರ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

Rain damage necessary remedial action by the DC rav

ಮಂಗಳೂರು (ಆ.2) : ಜಿಲ್ಲೆಯಲ್ಲಿ ಸುರಿಯುತ್ತಿರುವ ತೀವ್ರ ಮಳೆಯಿಂದ ಹಾನಿಗೊಳಗಾದ ನಾಗರಿಕರಿಗೆ ಜಿಲ್ಲಾಡಳಿತದಿಂದ ಸೂಕ್ತ ಪರಿಹಾರ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ(CM Basavaraj Bommai) ಅಧ್ಯಕ್ಷತೆಯಲ್ಲಿ ಮಂಗಳವಾರ ಮಳೆ ಪೀಡಿತ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವಿಡಿಯೋ ಕಾನ್‌ಫರೆನ್ಸ್ ನಲ್ಲಿ ಈ ಮಾಹಿತಿ ನೀಡಿದರು.

ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಲ್ಲಿ ಕಡಬ ಮತ್ತು ಸುಳ್ಯ(Sulya) ತಾಲೂಕಿನಲ್ಲಿ ತೀವ್ರ ಮಳೆಯಾಗಿದ್ದು, ಇದುವರೆಗೆ 30 ಮನೆಗಳಿಗೆ ಹಾನಿಯಾಗಿದೆ, 5 ಮನೆಗಳು ಸಂಪೂರ್ಣವಾಗಿ ಹಾನಿಯಾಗಿವೆ. ಕುಕ್ಕೆ ಸುಬ್ರಹ್ಮಣ್ಯ(Kukke subrahmanya)ದ ಪರ್ವತ ಮುಖಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ, ಅವರ ಕುಟುಂಬಕ್ಕೆ ಈಗಾಗಲೇ ಅವರಿಗೆ ಪರಿಹಾರವನ್ನು ಪಾವತಿಸಲಾಗಿದೆ. 3 ಪ್ರಾಣಿಗಳು ನೀರಿನಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ವರದಿಯಾಗಿದೆ. ಮಳೆಯಿಂದ ಸಂಕಷ್ಟಕ್ಕೊಳಗಾದ ನಾಗರಿಕರಿಗೆ ಸೂಕ್ತ ಪರಿಹಾರ ಒದಗಿಸಲಾಗಿದೆ. ಅತಂತ್ರಗೊಂಡವರನ್ನು ಕಾಳಜಿ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದರು.

Karnataka News Updates: ಮಳೆ ಆರ್ಭಟದ ನಡುವೆಯೂ ರಾಜ್ಯಾದ್ಯಂತ ಸಂಭ್ರಮದ ನಾಗರಪಂಚಮಿ

ಕೆಲವೆಡೆ ವಾಣಿಜ್ಯ ಸಂಕೀರ್ಣಗಳು ಹಾನಿಗೊಳಗಾಗಿವೆ. ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿ ತುಂಬಿ ಹರಿದಿದ್ದು, ಆದಿ ದೇಗುಲದ ಗರ್ಭಗುಡಿಯೊಳಗೂ ನೀರು ಹರಿದಿದೆ. ಸುಬ್ರಹ್ಮಣ್ಯಕ್ಕೆ ಹೊಂದಿಕೊಂಡಿರುವ ಬಾಳುಗೋಡು, ಕೊಲ್ಲಮೊಗ್ರ, ಕಲ್ಮಕಾರು ಹಾಗೂ ಇತರೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಎರಡು ತಾಲೂಕುಗಳಲ್ಲಿ ಒಟ್ಟು 23 ಕಡೆ ಹಾನಿಯಾಗಿದ್ದು ಅದನ್ನು ದುರಸ್ತಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಮಾತುಗಳನ್ನು ಆಲಿಸಿದ ಮುಖ್ಯಮಂತ್ರಿ, ಸೂಕ್ತ ಪರಿಹಾರ ಕೈಗೊಳ್ಳುವಂತೆ ಸೂಚಿಸಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆ ಎಸಿಎಸ್‌ ಐಎಸ್‌ಎನ್‌ ಪ್ರಸಾದ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೃಷ್ಣಾ ರೆಡ್ಡಿ, ಪ್ರಕೃತಿ ವಿಕೋಪ ನಿರ್ವಹಣಾ ಸೆಲ್‌ ಮುಖ್ಯಸ್ಥ ಮನೋಜ ಮತ್ತು ಇತರರು ಇದ್ದರು.

\ಇನ್ನೂ ನಾಲ್ಕು ದಿನ ಭಾರಿ ಮಳೆ; ರೆಡ್ ಅಲರ್ಟ್:

ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಶನಿವಾರದವರೆಗೆ (ಆ.6) ‘ರೆಡ್‌ ಅಲರ್ಚ್‌’ ಘೋಷಿಸಿದೆ. ಉಳಿದಂತೆ ಒಳನಾಡಿನ ಹಲವು ಜಿಲ್ಲೆಗಳಿಗೆ ‘ಆರೆಂಜ್‌’ ಮತ್ತು ‘ಯೆಲ್ಲೋ ಅಲರ್ಚ್‌’ ನೀಡಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಶನಿವಾರ ಬೆಳಗ್ಗೆ 8.30ರ ತನಕ ‘ರೆಡ್‌ ಅಲರ್ಚ್‌’ ಇರಲಿದೆ. ಈ ಅವಧಿಯಲ್ಲಿ ಸಮುದ್ರದಲ್ಲಿ 40 ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ಶುಕ್ರವಾರ ಬೆಳಗ್ಗೆ 8.30ರ ತನಕ ‘ರೆಡ್‌ ಅಲರ್ಚ್‌’ ಇರಲಿದೆ. ಶಿವಮೊಗ್ಗ ಜಿಲ್ಲೆಗೆ ಶುಕ್ರವಾರ ಮತ್ತು ಶನಿವಾರ ‘ರೆಡ್‌ ಅಲರ್ಚ್‌’ ನೀಡಲಾಗಿದೆ.

ದಕ್ಷಿಣ ಕನ್ನಡದಲ್ಲಿ ಮತ್ತೆ ಭಾರೀ ಮಳೆ

ಗುರುವಾರ ಬೆಳಗ್ಗೆ 8.30ರ ತನಕ ಶಿವಮೊಗ್ಗ ಜಿಲ್ಲೆಗೆ ‘ಆರೆಂಜ್‌ ಆಲರ್ಚ್‌’ ಇರಲಿದ್ದು ಉಳಿದಂತೆ ಮೈಸೂರು, ಹಾಸನ, ತುಮಕೂರು, ಹಾವೇರಿ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಬೀದರ್‌ ಜಿಲ್ಲೆಗೆ ‘ಯೆಲ್ಲೋ ಅಲರ್ಚ್‌’ ನೀಡಲಾಗಿದೆ.

 

Latest Videos
Follow Us:
Download App:
  • android
  • ios