ಕಲಬುರಗಿ ಜಿಲ್ಲಾದ್ಯಂತ ಮುಂದಿನ ಒಂದು ವಾರ ಮಳೆ

ನದಿ ದಂಡೆಗೆ ಜಾನುವಾರುಗಳನ್ನು ಬಿಡಬಾರದು. ದಡದ ಬಳಿ ಬಟ್ಟೆ ಸ್ವಚ್ಛಗೊಳಿಸುವುದು, ಈಜಾಡುವುದನ್ನು ಮಾಡಬಾರದು. ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸಬಾರದು ಎಂದು ತಿಳಿಸಿರುವ ಅವರು ನದಿ ದಂಡೆಯಲ್ಲಿ ಬರುವ ದೇವಸ್ಥಾನ, ಮಸೀದಿ, ಪ್ರಾರ್ಥನಾ ಮಂದಿರದಲ್ಲಿ ಪೂಜೆ ಸಲ್ಲಿಸುವವರನ್ನು ನದಿ ದಂಡೆಗೆ ಹೋಗದಂತೆ ಮನವಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪ್ರವಾಹ ಕುರಿತು ಡಂಗುರ ಸಾರಿಸಿ ಸಾರ್ವಜನಿಕರಲ್ಲಿ ಪ್ರಚೂರಪಡಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್‌

Rain in Kalaburagi District for the Next One Week grg

ಕಲಬುರಗಿ(ಜು.23):  ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸತತ ಮಳೆ ಸುರಿಯುತ್ತಿದೆ. ಮುಂದಿನ ಒಂದು ವಾರ ನಿರಂತರ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಜಿಲ್ಲೆಯ ನದಿ, ಹಳ್ಳ, ಕೆರೆ ದಂಡೆಗೆ ಸಾರ್ವಜನಿಕರು ಹೋಗದಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್‌ ಅವರು ಮನವಿ ಮಾಡಿದ್ದಾರೆ.

ಇನ್ನು ನದಿ ದಂಡೆಗೆ ಜಾನುವಾರುಗಳನ್ನು ಬಿಡಬಾರದು. ದಡದ ಬಳಿ ಬಟ್ಟೆ ಸ್ವಚ್ಛಗೊಳಿಸುವುದು, ಈಜಾಡುವುದನ್ನು ಮಾಡಬಾರದು. ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸಬಾರದು ಎಂದು ತಿಳಿಸಿರುವ ಅವರು ನದಿ ದಂಡೆಯಲ್ಲಿ ಬರುವ ದೇವಸ್ಥಾನ, ಮಸೀದಿ, ಪ್ರಾರ್ಥನಾ ಮಂದಿರದಲ್ಲಿ ಪೂಜೆ ಸಲ್ಲಿಸುವವರನ್ನು ನದಿ ದಂಡೆಗೆ ಹೋಗದಂತೆ ಮನವಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪ್ರವಾಹ ಕುರಿತು ಡಂಗುರ ಸಾರಿಸಿ ಸಾರ್ವಜನಿಕರಲ್ಲಿ ಪ್ರಚೂರಪಡಿಸುವಂತೆ ಅವರು ತಿಳಿಸಿದ್ದಾರೆ.

ಕಲಬುರ್ಗಿ- ಮಂಗಳೂರು ವಿಮಾನ ಸಂಚಾರ ನಿತ್ಯ ಪ್ರಾರಂಭಿಸಲು ಒತ್ತಾಯ

ಭಾರಿ ಮಳೆಯಿಂದ ಉಂಟಾಗುವ ನೆರೆ ಪರಿಸ್ಥಿತಿಯನ್ನು ನಿಯಂತ್ರಣ ಮತ್ತು ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನಚ್ಚರಿಕೆಯನ್ನು ವಹಿಸಬೇಕಿದ್ದು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಮತ್ತು ಪ್ರತಿದಿನ ದಿನದ ನೆರೆ ಹಾನಿ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ನಗರ ಮತ್ತು ಗ್ರಾಮೀಣ ಪ್ರದೇಶದ ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಗುರುತಿಸಿ ಸುರಕ್ಷಿತ ಸ್ಥಳಗಳಗೆ ಸ್ಥಳಾಂತರಿಸುವುದು, ಅವಶ್ಯಕವೆನಿಸಿದರೆ ಮಾತ್ರ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಜಿಲ್ಲಾಧಿಕಾರಿಗಳು, ಮಳೆಯಿಂದ ಅಪಾಯವಿರುವ ಮನೆ, ಶಾಲೆ ಹಾಗೂ ಇತರೆ ಕಟ್ಟಡಗಳ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸುರಕ್ಷಾ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.

ಕಲಬುರಗಿ: ಬಾರದಿದ್ದ ಮಳೆ ಬಂತು, ನೋವು-ನಲಿವು ತಂತು

ವಿಪತ್ತು ಕಾರ್ಯ ನಿರ್ಲಕ್ಷಿಸುವಂತಿಲ್ಲ:

ಪ್ರವಾಹ, ನೆರೆ ಹಾವಳಿ ಸಂದರ್ಭದಲ್ಲಿ ವಿಪತ್ತು ಕಾರ್ಯ ತುರ್ತಾಗಿ ಕೈಗೊಳ್ಳಬೇಕು. ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದಿರುವ ಜಿಲ್ಲಾ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆಯಾಗಿರುವ ಡಿ.ಸಿ. ಬಿ.ಫೌಜಿಯಾ ತರನ್ನುಮ್‌ ಅವರು, ನಿರ್ಲಕ್ಷ್ಯ ವಹಿಸುವಂತಹ ಅಧಿಕಾರಿ-ಸಿಬ್ಬಂದಿಗಳ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ-2005ರಂತೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸೆಲ್ಫಿ, ಪೋಟೋ ಶೂಟ್‌ ಬೇಡ:

ಮಳೆಯಿಂದ ಸಹಜವಾಗಿ ನದಿ, ಕೆರೆ, ಹಳ…‘ಗಳು ತುಂಬಿ ರಮಣೀಯ ದೃಶ್ಯ ನೋಡುಗರನ್ನು ಸೆಳೆಯುತ್ತದೆ. ಆದರೆ ಮಳೆ ನಿರಂತರ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ತಾಣಗಳಲ್ಲಿ ಸೆಲ್ಫಿ, ಫೋಟೊಶೂಟ್‌ ಮಾಡಬಾರದೆಂದು ಅವರು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios