ಕಲ್ಪತರು ಜಿಲ್ಲೆಯಲ್ಲಿ ಜಿಟಿಜಿಟಿ ಮಳೆ, ಶೀತಗಾಳಿ
ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಕಲ್ಪತರು ನಾಡಿನಲ್ಲೂ ಶೀತ ಸಹಿತ ಜಿಟಿಜಿಟಿ ಮಳೆಯಾಗುತ್ತಿದ್ದು, ಜನಸಾಮಾನ್ಯರು ಮೈಬಿಡದ ಚಳಿ, ಶೀತಗಾಳಿ, ಜಿಟಿಜಿಟಿ ಮಳೆಯಿಂದ ಹೈರಾಣಾಗಿದ್ದಾರೆ.
ತುಮಕೂರು (ಡಿ. 11): ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಕಲ್ಪತರು ನಾಡಿನಲ್ಲೂ ಶೀತ ಸಹಿತ ಜಿಟಿಜಿಟಿ ಮಳೆಯಾಗುತ್ತಿದ್ದು, ಜನಸಾಮಾನ್ಯರು ಮೈಬಿಡದ ಚಳಿ, ಶೀತಗಾಳಿ, ಜಿಟಿಜಿಟಿ ಮಳೆಯಿಂದ ಹೈರಾಣಾಗಿದ್ದಾರೆ.
ಮುಂಜಾನೆಯಿಂದಲೇ ಜಿಟಿಜಿಟಿ ಮಳೆ ಆಗುತ್ತಿರುವುದರಿಂದ ಎಂದಿನಂತೆ ಕೆಲಸ ಕಾರ್ಯಗಳಿಗೆ ತೆರಳಲು ಜನಸಾಮಾನ್ಯರು ಸಾಧ್ಯವಾಗದೆ ಮಳೆಯಿಂದ ಕಿರಿಕಿರಿ ಅನುಭವಿಸುವಂತಾಗಿದೆ. ಇಂದು ಶನಿವಾರ ಆಗಿರುವುದರಿಂದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸ್ವೆಟರ್, ಜರ್ಕಿನ್ ಮೊರೆ ಹೋಗಿದ್ದು, ಛತ್ರಿಗಳನ್ನು ಹಿಡಿದು ಶಾಲಾ-ಕಾಲೇಜುಗಳಿಗೆ ತೆರಳುತ್ತಿದ್ದ ದೃಶ್ಯಗಳು ಕಂಡು ಬಂದವು.
ಎರಡನೇ ಶನಿವಾರ ಆಗಿರುವುದರಿಂದ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳಿಗೆ ರಜೆ. ಹಾಗಾಗಿ ಸರ್ಕಾರಿ ನೌಕರರು ಇಂದಿನ ಶೀತ ಸಹಿತ ಮಳೆಯಿಂದ ಪಾರಾಗಿದ್ದಾರೆ. ಆದರೆ ಖಾಸಗಿ ಸಂಸ್ಥೆಗಳ ನೌಕರರು, ದಿನಗೂಲಿ ನೌಕರರು, ಕೂಲಿ ಕಾರ್ಮಿಕರು ಎಂದಿನಂತೆ ತಮ್ಮ ಕಚೇರಿಗಳಿಗೆ ಕೆಲಸ ಕಾರ್ಯಗಳಿಗೆ ಜಿಟಿಜಿಟಿ ಮಳೆಯಲ್ಲೆ ನೆನೆಯುತ್ತಾ ದ್ವಿಚಕ್ರ ವಾಹನಗಳಲ್ಲಿ ತೆರಳಿದರು.
ಮೈ ಬಿಡಲು ಸಾಧ್ಯವಾಗದ ಚಳಿಯನ್ನು ಸಹಿಸಿಕೊಂಡೇ ಜನರು ತಮ್ಮ ದಿನನಿತ್ಯದ ಕೆಲಸ ಕಾರ್ಯಗಳಲ್ಲಿ ತೊಡಗಿದ್ದರು. ವಯಸ್ಸಾದಂತಹವರು, ಮಕ್ಕಳು, ಮಹಿಳೆಯರು ಮಳೆ-ಚಳಿಯಿಂದಾಗಿ ಮನೆಯಿಂದ ಹೊರಗೆ ಬರಲಾಗದೆ ಮನೆಯಲ್ಲಿ ಹೊದಿಕೆಗಳ ಮೊರೆ ಹೋಗಿರುವುದು ಸಹ ಜಿಲ್ಲೆಯಾದ್ಯಂತ ಕಂಡು ಬಂದಿದೆ. ಇನ್ನು ಎರಡು-ಮೂರು ದಿನಗಳ ಕಾಲ ಶೀತ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಜನತೆ ಸ್ವೆಟರ್, ಜರ್ಕಿನ್‌ಗಳ ಮೊರೆ ಹೋಗಿದ್ದು, ಮಳೆಯಿಂದ ಸೇಫ್ಟಿಯಾಗಿರಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಸಾಮಾನ್ಯವಾಗಿದೆ.
ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದೊಂದಿಗೆ ಜಿಟಿಜಿಟಿ ಮಳೆ ಸುರಿಯುತ್ತಿರುವುದರಿಂದ ಬೀದಿ ಬದಿ ವ್ಯಾಪಾರಿಗಳು ಜನರಿಲ್ಲದೆ ಸಂಕಷ್ಟಅನುಭವಿಸುವಂತಾಗಿದೆ.
ಮ್ಯಾಂಡೌಸ್ ಎಫೆಕ್ಟ್
ಬೆಂಗಳೂರು : ಕರ್ನಾಟಕಕ್ಕೂ ಮ್ಯಾಂಡೌಸ್ ಎಫೆಕ್ಟ್ ತಟ್ಟಿದೆ. ಹೌದು, ಸಿಲಿಕಾನ್ ಸಿಟಿ ಬೆಂಗಳೂರು ಫುಲ್ ಕೂಲ್ ಕೂಲ್ ಆಗಿದೆ. ನಗರದಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು ಮುಂದಿನ ಎರಡು ದಿನ ನಗರದಲ್ಲಿ ಬೀಳುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಭೀತಿ ನಡುವೆ ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರದ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
Cyclone : ರಾಜ್ಯಕ್ಕೆ 'ಮ್ಯಾಂಡೌಸ್' ಚಂಡಮಾರುತ ಆಗಮನ: ಮುಂದಿನ 5 ದಿನ ಮಳೆ
ಮಳೆ ಜೊತೆ ಗಾಳಿಯ ವೇಗವು ಹೆಚ್ಚಾಗುವ ಸಾಧ್ಯತೆ ಇದ್ದು, ಕನಿಷ್ಠ ತಾಪಮಾನ ಕೂಡ ಇಳಿಕೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ನಾಳೆ, ನಾಡಿದ್ದು ಗುಡುಗು ಸಹಿತ ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕರಾವಳಿ, ಉತ್ತರ ಒಳನಾಡಿಗೆ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
5 ದಿಮ ರಾಜ್ಯದಲ್ಲಿ ಮಳೆ
ಬೆಂಗಳೂರು (ಡಿ.9) : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ 24ಗಂಟೆವರೆಗೆ 65- 75 ಕಿಮೀ ವೇಗದಲ್ಲಿ ಗಾಳಿ ಇರಲಿದ್ದು, ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ತಲಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಮ್ಯಾಂಡಸ್ ಚಂಡಮಾರುತ ಸೃಷ್ಟಿಯಾಗಿದ್ದು, ತಮಿಳುನಾಡು ಆಂಧ್ರಪ್ರದೇಶ ಸೇರಿದಂತೆ ಕರ್ನಾಟಕದ ಕರಾವಳಿ ಭಾಗದಲ್ಲೂ ಅಬ್ಬರದ ಅಲೆಗಳು ಏಳಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
Cyclone : ರಾಜ್ಯಕ್ಕೆ 'ಮ್ಯಾಂಡೌಸ್' ಚಂಡಮಾರುತ ಆಗಮನ: ಮುಂದಿನ 5 ದಿನ ಮಳೆ
ದಕ್ಷಿಣ ಒಳನಾಡು ಕೋಲಾರ, ರಾಮನಗರ ಚಿಕ್ಕಬಳ್ಳಾಪುರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯ ವಾತಾವರಣವಿದ್ದು ಮುಂಜಾನೆ ಮುಸುಕಿನ ವಾತಾವರಣದ ಜತೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು,. ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.