ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ರಾಜೀನಾಮೆ ಸಲ್ಲಿಸಿದ್ದು, ತಕ್ಷಣ ಜಾರಿಗೆ ಬರುವಂತೆ ರಾಜೀನಾಮೆ ಅಂಗೀಕರಿಸುವಂತೆ ಕೋರಿದ ರಾಜಕುಮಾರ ಪಾಟೀಲ್ ತೇಲ್ಕೂರ

ಕಲಬುರಗಿ(ಮೇ.20): ಇಲ್ಲಿನ ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜಕುಮಾರ ಪಾಟೀಲ್ ತೇಲ್ಕೂರ ರಾಜೀನಾಮೆ ನೀಡಿದ್ದಾರೆ. 

ರಾಜಕುಮಾರ ಪಾಟೀಲ್ ತೇಲ್ಕೂರ ಅವರು ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ರಾಜೀನಾಮೆ ಸಲ್ಲಿಸಿದ್ದು, ತಕ್ಷಣ ಜಾರಿಗೆ ಬರುವಂತೆ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ.

ಬಿಜೆಪಿ ಜಾತಿ ಹೆಸರಲ್ಲಿ ಯೋಜನೆ ರೂಪಿಸಲ್ಲ: ತೇಲ್ಕೂರ್‌

ಇತ್ತೀಚೆಗೆ ನಡೆದ ಅಸೆಂಬ್ಲಿಯ ಚುನಾವಣೆಯಲ್ಲಿ ಇವರು ಬಿಜೆಪಿಯಿಂದ ಪುನರಾಯ್ಕೆ ಬಯಸಿ ಕಣದಲ್ಲಿದ್ದು ಪರಭಾವ ಗೊಂಡಿದ್ದರು. ಬದಲಾದ ರಾಜಕೀಯ ಸಮೀಕರಣದಲ್ಲಿ ರಾಜಕುಮಾರ ಪಾಟೀಲ್ ತೇಲ್ಕೂರ ಅವರೇ ಮುಂದಾಗಿ ರಾಜೀನಾಮೆ ಸಲ್ಲಿಸಿದ್ದಾರೆ.