Asianet Suvarna News Asianet Suvarna News

ಕೋಲಾರ ಜಿಲ್ಲೆಯ ಮೂವರು ಸಾಧಕರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ಕೋಲಾರ ಜಿಲ್ಲೆಯ ಮೂರು ಜನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ಸಾಹಿತ್ಯದಲ್ಲಿ ಲಕ್ಷ್ಮೀಪತಿ ಕೋಲಾರ, ಶಿಕ್ಷಣದಲ್ಲಿ ಕೆ. ಚಂದ್ರಶೇಖರ,ಕ್ರೀಡೆಯಲ್ಲಿ ಕು. ದಿವ್ಯ ಟಿ. ಎಸ್ ಪ್ರಶಸ್ತಿ ಪುರಸ್ಕೃತರು.

Rajyotsava Award Won to Three Achievers of Kolar District grg
Author
First Published Oct 31, 2023, 10:45 PM IST

ಕೋಲಾರ(ಅ.31):  68ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಕೋಲಾರ ಜಿಲ್ಲೆಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂರು ಜನ ಸಾಧಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಸಾಹಿತ್ಯ ಕ್ಷೇತ್ರದಲ್ಲಿ ಲಕ್ಷ್ಮೀಪತಿ ಕೋಲಾರ ಅವರು, ಶಿಕ್ಷಣ ಕ್ಷೇತ್ರದಲ್ಲಿ ಕೆ. ಚಂದ್ರಶೇಖರ  ಮತ್ತು ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟು ಕು. ದಿವ್ಯ ಟಿ. ಎಸ್ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರ 68 ನೇ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ರಾಜ್ಯದ ವಿವಿಧ ಜಿಲ್ಲೆಗಳ 68 ಜನ ಗಣ್ಯರಿಗೆ ಹಾಗೂ 10 ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದೆ. ಇದರಲ್ಲಿ ಕೋಲಾರ ಜಿಲ್ಲೆಯ 3 ಜನ ಸಾಧಕರೂ ಸೇರಿದ್ದಾರೆ.

ಕೋಲಾರ: ಕಾಂಗ್ರೆಸ್ ಮುಖಂಡನ ಕೊಲೆ ಖಂಡಿಸಿ ಶ್ರೀನಿವಾಸಪುರ ಪಟ್ಟಣ ಬಂದ್

ಪ್ರಶಸ್ತಿ ಪುರಸ್ಕೃತರಿಗೆ ನಾಳೆ(ಬುಧವಾರ) ಸಂಜೆ ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಫಲಕ, ಹಣ್ಣು, ಶಾಲು, ನೆನಪಿನ ಕಾಣಿಕೆ ನೀಡಿ ಗೌರವಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿಗಳು ಪಕಟಣೆಯಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios