ರಾಮನಗರ : ಮ್ಯಾನ್‌ಹೋಲ್‌ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಡಿಸಿಎಂ

* ರಾಮನಗರದಲ್ಲಿ ಮ್ಯಾನ್‌ಹೋಲ್‌ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ 
* ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಹಿಂದುಳಿದ ವರ್ಗದ ಒಬ್ಬರ ಸಾವು
* ಕೂಡಲೇ ಪರಿಹಾರ ಘೋಷಿಸಿದ ಸರ್ಕಾರ

ramanagara manhole-tragedy dcm ashwath narayan announces compensation rbj

ಬೆಂಗಳೂರು/ರಾಮನಗರ, (ಜೂನ್.04): ರಾಮನಗರದಲ್ಲಿ ಮೂವರು ವ್ಯಕ್ತಿಗಳು ಮ್ಯಾನ್‌ಹೋಲ್‌ಗೆ ಇಳಿದು ಜೀವ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದ್ದು, ಸರಕಾರದ ವತಿಯಿಂದ ತಕ್ಷಣವೇ ಪರಿಹಾರ ಘೋಷಣೆ ಮಾಡಲಾಗಿದೆ.

ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಒಬ್ಬರು ಈ ದುರಂತದಲ್ಲಿ ಅಸುನೀಗಿದ್ದಾರೆ.

ಪರಿಶಿಷ್ಟ ಜಾತಿಯ ಸಂತ್ರಸ್ತರ ಕುಟುಂಬಗಳಿಗೆ ತಲಾ 18.5 ಲಕ್ಷ ರೂ. ಹಾಗೂ ಹಿಂದುಳಿದ ವರ್ಗದ ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ಸರಕಾರ ತಕ್ಷಣವೇ ಪ್ರಕಟಿಸಿದೆ. ಈ ಬಗ್ಗೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಪ್ರಕಟಿಸಿದ್ದಾರೆ. 

ಘಟನೆ ವಿಷಯ ತಿಳಿದ ಕೂಡಲೇ ಜಿಲ್ಲಾಧಿಕಾರಿ ರಾಕೇಶ್‌ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಡಿಸಿಎಂ, ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ತನಿಖೆ ನಡೆದಿದ್ದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಘಟನೆ
ramanagara manhole-tragedy dcm ashwath narayan announces compensation rbj

ನಿರ್ಮಾಣ ಹಂತದಲ್ಲಿದ್ದ ಮ್ಯಾನ್ ಹೋಲ್ ಗೆ ಇಳಿದು ಮೂವರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ನಗರದ ಐಜೂರಿನ ನೇತಾಜಿ ಪಾಪ್ಯುಲರ್ ಶಾಲೆ ಎದುರು ಶುಕ್ರವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಮಂಜುನಾಥ್ (29), ಮಂಜುನಾಥ್ (32) ಹಾಗೂ ರಾಜೇಶ್ (40) ಎಂದು ಗುರುತಿಸಲಾಗಿದ್ದು, ಮೃತರು ಬೆಂಗಳೂರಿನ ಕಮಲಾನಗರದ ನಿವಾಸಿಗಳು ಎಂದು ತಿಳಿದು ಬಂದಿದೆ.

ನಗರದ 30 ನೇ ವಾರ್ಡ್ ನಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿ‌ ಮುಕ್ತಾಯ ಹಂತದಲ್ಲಿದೆ. ಹೀಗಾಗಿ ಹೊಸ ಚರಂಡಿಗೆ ಹಾಕಲಾಗಿದ್ದ ಬ್ಲಾಕ್ ಅನ್ನು ತೆಗೆಯಲು ಈ ಕಾರ್ಮಿಕರು ಮ್ಯಾನ್ ಹೋಲ್ ಮೂಲಕ 15 ಅಡಿ ಆಳಕ್ಕೆ ಇಳಿದಿದ್ದರು.

ಮೊದಲು ರಾಜೇಶ್ ಎಂಬುವವರು ಕೆಳಗೆ‌ ಇಳಿದಿದ್ದು, ಆಯಾ ತಪ್ಪಿ ಬಿದ್ದಿದ್ದಾರೆ. ಪರಿಣಾಮ ಅವರ ತಲೆಗೆ ಪೆಟ್ಟಾಗಿತ್ತು. ಹಿಗಾಗಿ ಇವರನ್ನು ರಕ್ಷಿಸಲು ಉಳಿದಿಬ್ಬರೂ ಕೆಳಗೆ ಇಳಿದಿದ್ದು, ಉಸಿರುಗಟ್ಟಿ ಅಲ್ಲಿಯೇ ಮೃತಪಟ್ಟಿದ್ದಾರೆ.
 

Latest Videos
Follow Us:
Download App:
  • android
  • ios