ರಾಮನಗರ : ಡಿ.ಕೆ.ಶಿವಕುಮಾರ್ ಬೆಂಬಲಿಗ ಜಿ.ಪಂ.ಅಧ್ಯಕ್ಷ ರಾಜೀನಾಮೆ
ಡಿ.ಕೆ.ಶಿವಕುಮಾರ್ ಬೆಂಬಲಿಗರಾದ ರಾಮನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ನಾಗರಾಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಮನಗರ [ಸೆ.01]: ರಾಮನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂ.ಎನ್ ನಾಗರಾಜ್ ರಾಜೀನಾಮೆ ಅಂಗೀಕರಿಸಲಾಗಿದೆ.
ದೊಡ್ಡ ಮಳವಾಡಿ ಕ್ಷೇತ್ರದ ಸದಸ್ಯರಾದ ನಾಗರಾಜ್ ಅವರಿಗೆ ರಾಜೀನಾಮೆ ವಾಪಸ್ ಪಡೆಯಲು ಸೆಪ್ಟೆಂಬರ್ 31ರವರೆಗೂ ಸಮಯಾವಕಾಶ ನೀಡಲಾಗಿತ್ತು. ಆದರೆ ಅವರು ತಮ್ಮ ರಾಜೀನಾಮೆ ಹಿಂಪಡೆಯದ ಕಾರಣ ರಾಜೀನಾಮೆ ಅಂಗೀಕರಿಸಲಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬೆಂಬಲಿಗರಾದ ನಾಗರಾಜ್ ಕಳೆದ ಆಗಸ್ಟ್ 16 ರಂದು ವೈಯಕ್ತಿಕ ಕಾರಣ ನೀಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದೀಗ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನ ತೊರೆದಿದ್ದು, ನಾಗರಾಜ್ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನ ತೆರವಾದಂತಾಗಿದೆ.