ಬೆಳಗಾವಿ(ಡಿ.25): ಶೀಘ್ರವೇ ಸಚಿವ ಸಂಪುಟ ವಿಸ್ತರಣೆಯಾಗಬಹುದು. ಯೋಗೇಶ್ವರ ಅಷ್ಟೆಯಲ್ಲ. ನಮ್ಮ ಜೊತೆಗೆ ಬಂದ ಎಲ್ಲರಿಗೂ ಮಂತ್ರಿ ಸ್ಥಾನ ಕೊಡಿಸಲು ನಾನು ಪ್ರಯತ್ನಿಸುತ್ತೇನೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. 

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಗೆ ಅವರು ಮಾತನಾಡಿ, ಎಂಟಿಬಿ ನಾಗರಾಜ ಸೇರಿದಂತೆ ನಿಮ್ಮೊಂದಿಗೆ ಬಂದ ಎಲ್ಲರಿಗೂ ಮಂತ್ರಿಸ್ಥಾನ ಸಿಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಊಹಾಪೋಹಗಳಿಗೆ ನಾನು ಉತ್ತರ ನೀಡುವುದಿಲ್ಲ. ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಪಕ್ಷದ ವರಿಷ್ಠರೇ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಯೋಗೇಶ್ವರ ಅಷ್ಟೇ ಅಲ್ಲ. ನಮ್ಮ ಜೊತೆಗೆ ಬಂದಿರುವ ಎಲ್ಲರಿಗೂ ಸಚಿವ ಸ್ಥಾನ ಕೊಡಿಸಲು ಪ್ರಯತ್ನಿಸುತ್ತೇನೆ ಎಂದರು.

ಲಂಡನ್‌ನಿಂದ ಬೆಳಗಾವಿಗೆ ಬಂದ ಮಹಿಳೆಯ ವರದಿ ಬಹಿರಂಗ

ಮಕ್ಕಳ ಶಿಕ್ಷಣ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಶಾಲೆಗಳನ್ನು ಪುನಾರಂಭಿಸುವುದು ಒಳ್ಳೆಯದು. ಆದರೆ, ಈ ವಿಚಾರದಲ್ಲಿ ಅಂತಿಮವಾಗಿ ಶಿಕ್ಷಣ ಸಚಿವರು, ಮುಖ್ಯಮಂತ್ರಿಗಳು, ತಜ್ಞರು ಈ ಬಗ್ಗೆ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.