ಗೋಕಾಕ್‌ (ಮೇ.09): ಕೊರೋನಾದಿಂದ ಗುಣಮುಖವಾದ ನಂತರ ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಇದೇ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಗೋಕಾಕ ತಾಲೂಕಿನ ಅಧಿಕಾರಿಗಳ ಸಭೆ ನಡೆಸಿ ಕೋವಿಡ್‌ಗೆ ಸಂಬಂಧಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಿ.ಡಿ.ಪ್ರಕರಣ, ಆ ಬಳಿಕ ಕೊರೋನಾ ಸೋಂಕಿಗೆ ತುತ್ತಾಗಿದ್ದ ರಮೇಶ್‌ ಜಾರಕಿಹೊಳಿ ಅವರು ಸಾರ್ವಜನಿಕವಾಗಿ ಬಹಿರಂಗವಾಗಿ ಕಾಣಿಸಿಕೊಂಡಿದ್ದು ಕಡಿಮೆ. ಕೋವಿಡ್‌ ಹಿನ್ನೆಲೆಯಲ್ಲಿ ಲೋಕಸಭಾ ಉಪ ಚುನಾವಣೆ ಪ್ರಚಾರದಿಂದಲೂ ಅವರು ದೂರವೇ ಉಳಿದಿದ್ದರು. ಇದೀಗ ಕೋವಿಡ್‌ ಹಿನ್ನೆಲೆಯಲ್ಲಿ ಶನಿವಾರ ಕೋವಿಡ್‌ಗೆ ಸಂಬಂಧಿಸಿದ ಟಾಸ್ಕಫೋರ್ಸ್‌ ಸಭೆ ಕರೆದು ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.

ಜಾರಕಿಹೊಳಿ ಪುತ್ರನ ಸ್ನೇಹಿತನ ವಿರುದ್ಧ ಪೊಲೀಸರ ಮೊರೆ ಹೋದ ಸೀಡಿ ಲೇಡಿ .

ತಾಲೂಕಿನಲ್ಲಿ ಸದ್ಯ ಬೆಡ್‌ಗಳ ಅಭಾವವಿಲ್ಲ. ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ಶೀಘ್ರದಲ್ಲಿ ಸೋಂಕಿತರಿಗೆ ಹೆಚ್ಚಿನ ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಗೋಕಾಕ್‌ನಲ್ಲಿ ಇಂಗ್ಲೆಂಡ್ ಮಾದರಿ ಕೊರೋನಾ ಚಿಕಿತ್ಸೆ! ...

ಬೆಳಗಾವಿಯಲ್ಲಿಯಲ್ಲಿಯೂ ಸೋಂಕಿನ ಪ್ರಮಾಣದ ಅತ್ಯಧಿಕ ಪ್ರಮಾಣದಲ್ಲಿ ಏರುತ್ತಿದ್ದು ಈ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಸೂಚಿಸಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona