ಬೆಳಗಾವಿ [ಡಿ.29]: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರಕ್ಕೆ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಗ್ರ್ಯಾಂಡ್ ಎಂಟ್ರಿ ನೀಡಿದ್ದಾರೆ. 

ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾವಗೆ ಗ್ರಾಮದಲ್ಲಿ ನಡೆದ ಹಿಂದೂ ಕಾರ್ಯಕರ್ತರ ಸ್ನೇಹಭೋಜನ ಕೂಟದಲ್ಲಿ ಭಾಗವಹಿಸಿದ್ದಾರೆ. 

ಲಕ್ಷ್ಮೀ ಜಾರಕಿಹೊಳಿ ಕ್ಷೇತ್ರದಲ್ಲಿ ಇಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಹಲವು ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ. ಸವದತ್ತಿ ಶಾಸಕ ಆನಂದ ಮಾಮನಿ ಕೂಡ ಇಲ್ಲಿ ಉಪಸ್ಥಿತರಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಳೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ನಡೆದಿದ್ದು, ಕಾಂಗ್ರೆಸ್ ಜಾರಕಿಹೊಳಿ ಸಹೋದರ ಲಖನ್ ಸೋಲಿಸಿ ಜಯಗಳಿಸಿದ್ದರು. 

ಕಳೆದ ವಿಧಾನಸಭಾ ಚುನಾವಣೆಯಿಂದಲೂ ಬದ್ಧವೈರಿಗಳಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ವಿರೋಧಿಗಳಾಗಿದ್ದು, ಇದೀಗ ಲಕ್ಷ್ಮೀ ಕ್ಷೇತ್ರದಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಟಾಂಗ್ ನೀಡಿದ್ದಾರೆ.