ಈ ಬಾರಿ ಚುನಾವಣೆಯಲ್ಲಿ KR Nagar ಕ್ಷೇತ್ರದಲ್ಲಿ ಡಿ. ರವಿಶಂಕರ್‌ ಗೆಲುವು ಖಚಿತ

ಕೆ.ಆರ್‌. ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ. ರವಿಶಂಕರ್‌ ಅವರು 2018ರ ಚುನಾವಣೆಯಲ್ಲಿ ಅಲ್ಪಮತಗಳಿಂದ ಸೋತಿದ್ದು, ಈ ಬಾರಿ ಗೆಲುವು ಸಾಧಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ್‌ ಹೇಳಿದರು

Ravishankar will in next Assembly Election in KR Nagar snr

 ಭೇರ್ಯ (ನ.01):  ಕೆ.ಆರ್‌. ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ. ರವಿಶಂಕರ್‌ ಅವರು 2018ರ ಚುನಾವಣೆಯಲ್ಲಿ ಅಲ್ಪಮತಗಳಿಂದ ಸೋತಿದ್ದು, ಈ ಬಾರಿ ಗೆಲುವು ಸಾಧಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ್‌ ಹೇಳಿದರು.

ಭೇರ್ಯ ಸಮೀಪದ ಅರಕೆರೆ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ (Temple)  ಕೆ.ಆರ್‌. ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ (Congress)  ಅಭ್ಯರ್ಥಿ ಡಿ. ರವಿಶಂಕರ್‌ 2023ರ ಚುನಾವಣಾ ಅಂಗವಾಗಿ ಜನಾಶೀರ್ವಾದ ಯಾತ್ರೆ ಚಾಲನೆ ನೀಡಿ ಅವರು ಮಾತನಾಡಿದರು.

ಐದು ವರ್ಷಗಳು ಯಶಸ್ವಿಯಾಗಿ ಆಡಳಿತ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರು, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೋಟ್ಯಾಂತರ ಅನುದಾನ ನೀಡಿದ್ದಾರೆ, ಸಿದ್ದರಾಮಯ್ಯನವರ ಆಡಳಿತದಲ್ಲಿ ರಾಜ್ಯದ ಜನತೆ ನೆಮ್ಮದಿಯಾಗಿ ಜೀವನ ನಡೆಸಿದರು, ಆದರೆ ಬಿಜೆಪಿ ಮತ್ತು ಜೆಡಿಎಸ್‌ ಸರ್ಕಾರದ ಆಡಳಿತದಲ್ಲಿ ರಾಜ್ಯದ ಜನತೆಗೆ ಯಾವುದೇ ಅನುಕೂಲವಾಗಿಲ್ಲ ಎಂದು ಟೀಕಿಸಿದರು.

ಕೆ.ಆರ್‌. ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ವಹಿಸಿರುವ ಕೆಪಿಸಿಸಿಯ ಡಾ. ರವೀಂದ್ರ ಮಾತನಾಡಿ, ಪ್ರತಿಯೊಂದು ಗ್ರಾಮಕ್ಕೂ ಜನಾಶೀರ್ವಾದ ಯಾತ್ರೆ ತಲುಪಲಿ, ನಮ್ಮ ಪಕ್ಷದ ಅಭ್ಯರ್ಥಿ ಡಿ. ರವಿಶಂಕರ್‌ ಮನೆ ಮನೆಗೂ ಬೇಟಿ ನೀಡುವ ಸಂದರ್ಭದಲ್ಲಿ ಕಾರ್ಯಕರ್ತರು ಆ ಗ್ರಾಮದ ಮುಖಂಡರಿಗೆ ಅವಕಾಶ ಕಲ್ಪಿಸಿ ಎಂದು ಮನವಿ ಮಾಡಿದರು.

ಯಾತ್ರೆಯು ಅರಕೆರೆ, ಉದಯಗಿರಿ, ಗುಳುವಿನ ಅತ್ತಿಗುಪ್ಪೆ, ಕಾವಲ… ಹೊಸೂರು, ಚಿಕ್ಕ ಭೇರ್ಯ ನಂತರ ಮುಂಜನಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಾಯಿತು.

ಕಾಂಗ್ರೆಸ್‌ ಮುಖಂಡ ಸಿ.ಪಿ. ರಮೇಶ್‌ ನೇತೃತ್ವ ವಹಿಸಿದ್ದರು. ತಾಪಂ ಮಾಜಿ ಅಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ಎಚ್‌.ಟಿ. ಮಂಜಪ್ಪ, ಚಂದ್ರಶೇಖರ್‌, ಮಲ್ಲಿಕಾರವಿ, ಮಾಜಿ ಸದಸ್ಯೆ ಶೋಭಾಕುಮಾರ್‌, ತಾಲೂಕು ಕುರುಬರ ಸಂಘದ ಅಧ್ಯಕ್ಷ ಶಿವಣ್ಣ, ಪುರಸಭೆ ಅಧ್ಯಕ್ಷ ಪ್ರಕಾಶ್‌, ಉಪಾಧ್ಯಕ್ಷೆ ಸೌಮ್ಯ ಲೋಕೇಶ್‌, ಮಾಜಿ ಅಧ್ಯಕ್ಷ ಕೆ.ಜಿ. ಸುಬ್ರಹ್ಮಣ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರ್‌, ಮುಖಂಡರು, ಕಾರ್ಯಕರ್ತರು ಇದ್ದರು.

ಟಿಕೆಟ್‌ಗಾಗಿ ಕಾಂಗ್ರೆಸ್‌ ಅರ್ಜಿ ಆಹ್ವಾನ

ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ರಾಜ್ಯ ಕಾಂಗ್ರೆಸ್‌ ಅಧಿಕೃತ ಚಾಲನೆ ನೀಡಿದ್ದು, ನ.5ರಿಂದ ನ.15ರವರೆಗೆ 224 ಕ್ಷೇತ್ರಗಳಿಂದಲೂ ಅರ್ಹ ಆಕಾಂಕ್ಷಿಗಳಿಂದ ಟಿಕೆಟ್‌ಗೆ ಅರ್ಜಿ ಆಹ್ವಾನಿಸಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.

ಪಕ್ಷದ ಕೆಲಸ ಮಾಡದವರಿಗೆ ಟಿಕೆಟಿಲ್ಲ: ಮತ್ತೊಮ್ಮೆ ಶಾಸಕರಿಗೆ ಎಚ್ಚರಿಕೆ ನೀಡಿದ ಡಿಕೆಶಿ

ಭಾನುವಾರ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಲ್ಲಿಕಾರ್ಜುನ ಖರ್ಗೆ ಅಭಿನಂದನಾ ಸಮಾರಂಭದ ಸಿದ್ಧತೆ ಕುರಿತು ಚರ್ಚಿಸಲು ಹಿರಿಯ ನಾಯಕರ ಸಭೆ ನಡೆಯಿತು. ಈ ವೇಳೆ ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸುವ ಬಗ್ಗೆ ಮಹತ್ವದ ಚರ್ಚೆ ನಡೆದಿದೆ.

ಕಳೆದ ಉಪ ಚುನಾವಣೆಯಲ್ಲಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸುವವರು ಪಕ್ಷದ ನಿಧಿಗೆ 1 ಲಕ್ಷ ರು. ನೀಡಬೇಕು ಎಂದು ನಿಯಮ ರೂಪಿಸಲಾಗಿತ್ತು. ಇದೀಗ ಮುಂದಿನ ಸಾರ್ವತ್ರಿಕ ಚುನಾವಣೆಗೆ ಎಷ್ಟುಶುಲ್ಕ ನಿಗದಿ ಮಾಡಬೇಕು. ಯಾವ್ಯಾವ ದಾಖಲೆಗಳನ್ನು ಒದಗಿಸಬೇಕು ಎಂಬಿತ್ಯಾದಿ ಅಂಶಗಳ ಕುರಿತು ಚರ್ಚಿಸಲು ಪ್ರತ್ಯೇಕ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ನ.4ರಿಂದ ಸುರ್ಜೇವಾಲಾ ಸರಣಿ ಸಭೆ:

ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿರುವ ಪರಿಸ್ಥಿತಿ ಹಾಗೂ ಯಾರಿಗೆ ಟಿಕೆಟ್‌ ನೀಡಿದರೆ ಉತ್ತಮ ಫಲಿತಾಂಶ ನಿರೀಕ್ಷಿಸಬಹುದು ಎಂಬ ಬಗ್ಗೆ ಚರ್ಚಿಸಲು ಜಿಲ್ಲಾ ಕಾಂಗ್ರೆಸ್‌ ಸಮಿತಿಗಳ ಪದಾಧಿಕಾರಿಗಳ ಜತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ನೇರ ಸಭೆ ಹಮ್ಮಿಕೊಂಡಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಸಮನ್ವಯ ಸಭೆ ಹೆಸರಿನಲ್ಲಿ ನ.4 ರಂದು ಶುಕ್ರವಾರ ಕೋಲಾರ, ವಿಜಯಪುರ, ಉತ್ತರ ಕನ್ನಡ, ನ.5 ರಂದು ಹಾಸನ, ದಕ್ಷಿಣ ಕನ್ನಡ, ಬೆಳಗಾವಿ ನಗರ ಮತ್ತು ಗ್ರಾಮೀಣ, ಚಿಕ್ಕೋಡಿ, ನ.8 ರಂದು ಬೆಂಗಳೂರು ನಗರ, ದಕ್ಷಿಣ, ಉತ್ತರ ಜಿಲ್ಲಾ ಕಾಂಗ್ರೆಸ್‌, ಬೆಂಗಳೂರು ಗ್ರಾಮಾಂತರ, ನ.9 ರಂದು ರಾಯಚೂರು, ತುಮಕೂರು ಜಿಲ್ಲಾ ಕಾಂಗ್ರೆಸ್‌ ಸಮಿತಿಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಬೆಂಗಳೂರು: ಭಾನುವಾರ ನಡೆದ ಕೆಪಿಸಿಸಿ ಸಭೆಯಲ್ಲಿ ರಾಜ್ಯದಲ್ಲಿ ನಡೆಯಬೇಕಿರುವ ಯಾತ್ರೆಗಳ ಬಗ್ಗೆಯೂ ಸುದೀರ್ಘ ಚರ್ಚೆ ನಡೆದಿದೆ. ಈ ವೇಳೆ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಹೈಕಮಾಂಡ್‌ ನೀಡಿರುವ ಟಾಸ್‌್ಕನಂತೆ ಉತ್ತರ ಕರ್ನಾಟಕ ಭಾಗದಲ್ಲಿ ಮೂರು ಪ್ರತ್ಯೇಕ ರಾರ‍ಯಲಿಗಳು ನಡೆಯಬೇಕು ಎಂದು ಸಭೆಗೆ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios