ತುಮಕೂರು: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ
ತುಮಕೂರಿನ ಪಾವಗಡ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 4 ಅಂಗನವಾಡಿ ಕಾರ್ಯಕರ್ತೆ ಹಾಗೂ 9 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಪಾವಗಡ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ತುಮಕೂರು(ಆ.09): ಪಾವಗಡ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 4 ಅಂಗನವಾಡಿ ಕಾರ್ಯಕರ್ತೆ ಹಾಗೂ 9 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕಿನ ಬಿ.ಅಚ್ಚಮ್ಮನಹಳ್ಳಿ-1, ಪಳವಳ್ಳಿ ತಾಂಡ ಕೇಂದ್ರಗಳಲ್ಲಿ ಪರಿಶಿಷ್ಟಜಾತಿ ಹಾಗೂ ಲಿಂಗದಹಳ್ಳಿ-1, ಕರೇಕ್ಯಾತನಹಳ್ಳಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರ ಹುದ್ದೆಗಳಿಗೆ ಸಾಮಾನ್ಯ ವರ್ಗದ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಅಂಚೆ ಇಲಾಖೆಯಲ್ಲಿ 2637 ಹುದ್ದೆ, ಅರ್ಜಿ ಹಾಕಿ
ಸಿ.ಎನ್.ಹಳ್ಳಿ(ಪರಿಶಿಷ್ಟಜಾತಿ), ಆರ್.ಹೊಸಕೋಟೆ-2, ಪಳವಳ್ಳಿ-1, ವದನಕಲ್ಲು-1, ದ್ಯಾವಯ್ಯನಪಾಳ್ಯ, ಜಾಜುರಾಯನಹಳ್ಳಿ-2, ಹನುಮಸಾಗರ, ವಡ್ರೇವು ಹಾಗೂ ಶೈಲಾಪುರ-1 ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗಳಿಗೆ ಸಾಮಾನ್ಯ ವರ್ಗದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಪಾವಗಡ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಆಟೋಮೊಬೈಲ್ ಕ್ಷೇತ್ರದಲ್ಲಿ 3.5 ಲಕ್ಷ ಉದ್ಯೋಗ ಕಟ್!