ಬರ ಪರಿಹಾರಕ್ಕೆ ರೈತ ಸಂಪರ್ಕ ಕೇಂದ್ರದಲ್ಲಿ ನೊಂದಣಿ ಮಾಡಿಸಿ: ಯತೀಂದ್ರ ಸಿದ್ದರಾಮಯ್ಯ
ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ಬೆಳೆ ಪರಿಹಾರ ಘೋಷಣೆ ಮಾಡಿದ್ದು, ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೊಂದಣಿ ಮಾಡಿಸಿ ಬೆಳೆ ಪರಿಹಾರ ಪಡೆಯಬೇಕೆಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಮೈಸೂರು (ಡಿ.07): ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ಬೆಳೆ ಪರಿಹಾರ ಘೋಷಣೆ ಮಾಡಿದ್ದು, ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೊಂದಣಿ ಮಾಡಿಸಿ ಬೆಳೆ ಪರಿಹಾರ ಪಡೆಯಬೇಕೆಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ವರುಣ ಕ್ಷೇತ್ರದ ತುಂನೇರಳೆ ಗ್ರಾಪಂ ವ್ಯಾಪ್ತಿಯ ಮರಡಿಹುಂಡಿ, ನಂದಿಗುಂದ, ತುಂನೇರಳೆ, ನಂದಿಗುಂದಪುರ ಗ್ರಾಮಗಳಿಗೆ ಭೇಟಿ ನೀಡಿ ಕಂದಾಯ ಅದಾಲತ್ ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬರ ಇದ್ದರೂ ಸಹ ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವುದೇ ಬರ ಪರಿಹಾರ ಬಿಡುಗಡೆ ಮಾಡಿಲ್ಲದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಿ ರೈತರ ಪರ ನಾವಿದ್ದೇವೆ ಎಂಬುದನ್ನು ಸಾಬೀತು ಪಡಿಸಿದೆ ಎಂದರು. ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಎಸ್.ಸಿ. ಬಸವರಾಜು, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಕೆ.ಎನ್.ವಿಜಯ್, ಶಿವಸ್ವಾಮಿ, ಪ್ರದೀಪ್ ಕುಮಾರ್, ಗ್ರಾಪಂ ಅಧ್ಯಕ್ಷ ನಂದೀಶ್, ಸದಸ್ಯರಾದ ಮಹಾದೇವ, ಪುಟ್ಟಸ್ವಾಮಿ, ಜಿಪಂ ಮಾಜಿ ಉಪಾಧ್ಯಕ್ಷ ದಯಾನಂದ, ಕೆಂಪಣ್ಣ, ನಾಗೇಂದ್ರ, ರೂಪೇಶ್, ಮಹಾದೇವ, ಸಿದ್ದು, ಸಿಡಿಪಿಒ ಮಂಜುಳ, ಬಾಬು, ರಂಗಸ್ವಾಮಿ ಇದ್ದರು.
ಸತ್ಯವನ್ನು ಯಾರೂ ಮರೆಮಾಚಲು ಆಗಲ್ಲ: ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದೇನು?
ಸಂವಿಧಾನಾತ್ಮಕ ಶಕ್ತಿ ನೀಡಿ ಜ್ಞಾನದ ಬೆಳಕಾಗಿದ್ದಾರೆ: ಡಾ.ಬಿ.ಆರ್. ಅಂಬೇಡ್ಕರ್ ಅವರು ಶೋಷಿತ ಸಮುದಾಯಗಳಿಗೆ ಸಂವಿಧಾನಾತ್ಮಕ ಶಕ್ತಿಯನ್ನು ನೀಡಿ ಜ್ಞಾನದ ಬೆಳಕಾಗಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 67ನೇ ಪರಿನಿಬ್ಬಾಣ ದಿನದ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಡಾ.ಬಿ.ಆರ್. ಅಂಬೇಡ್ಕರ್ ಅವರು ಅಸ್ಪೃಶ್ಯತೆಯ ನೋವನ್ನು ಅನುಭವಿಸಿ ಜ್ಞಾನವನ್ನು ಸಂಪಾದಿಸಿ ಸಂವಿಧಾನ, ಪ್ರಜಾಪ್ರಭುತ್ವದ ಮೂಲಕ ಧ್ವನಿಯಿಲ್ಲದ ತಳ ಸಮುದಾಯಗಳಿಗೆ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲು ನೆರವಾಗಿದ್ದಾರೆ. ಅಂತಹ ಮಹಾಪುರುಷರ ಚಿಂತನೆಗಳನ್ನು ನಾವೆಲ್ಲ ಪಾಲಿಸುವ ಮೂಲಕ ಪರಸ್ಪರ ಪ್ರೀತಿ, ಸಹಬಾಳ್ವೆಯನ್ನು ನಡೆಸಿ ಒಂದೇ ಎಂದು ಜೀವಿಸಬೇಕು ಎಂದರು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಅವರು ಶೋಷಿತ ಸಮುದಾಯಗಳ ಸ್ವಾಭಿಮಾನದ ಸಂಕೇತವಾಗಿದ್ದರು. ಅವರ ತತ್ವ ಆದರ್ಶಗಳನ್ನು ಪಾಲಿಸುವ ಮೂಲಕ ಅವರು ಹಾಕಿಕೊಟ್ಟ ದಾರಿ, ಮಾರ್ಗದರ್ಶನದಲ್ಲಿ ಸಾಗೋಣ ಎಂದು ಕರೆ ನೀಡಿದರು.
ರಾಷ್ಟ್ರೀಯ ಹೆದ್ದಾರಿಯ 24 ಸ್ಥಳಗಳಲ್ಲಿ ಫುಟ್ ಓವರ್ ಬ್ರಿಡ್ಜ್ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ
ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಭೀಮರಾವ್ ವಡ್ಡಾರ್, ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ. ಶಂಕರ್, ರಂಗಸ್ವಾಮಿ, ದಸಂಸ ಸಂಚಾಲಕರಾದ ನಾರಾಯಣ, ಬೊಕ್ಕಹಳ್ಳಿಲಿಂಗಯ್ಯ, ಸುರೇಶ್ ಇದ್ದರು.