Asianet Suvarna News Asianet Suvarna News

ಬಾಗಲಕೋಟೆ: ಐತಿಹಾಸಿಕ ಸ್ಮಾರಕ ಬಳಿಯ ಮನೆಗಳ ಸ್ಥಳಾಂತರ ಶೀಘ್ರ

ಐತಿಹಾಸಿಕ ಸ್ಮಾರಕ ಬಳಿಯ ಮನೆಗಳ ಸ್ಥಳಾಂತರ|ಪುನರ್ವಸತಿ ಮತ್ತು ಪುನರ್‌ನಿರ್ಮಾಣ ಯೋಜನೆಯ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಮಾಹಿತಿ|

Relocation of Houses near Historic Monument in Bagalkot District
Author
Bengaluru, First Published Mar 12, 2020, 2:22 PM IST

ಬಾಗಲಕೋಟೆ(ಮಾ.12): ಜಿಲ್ಲೆಯ ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆ ಪ್ರವಾಸಿ ತಾಣಗಳ ಸ್ಮಾರಕಗಳಿಗೆ ಹತ್ತಿರವಿರುವ ಮನೆಗಳನ್ನು ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗುತ್ತಿದ್ದು, ಅದಕ್ಕೆ ಶೀಘ್ರವೇ ಚಾಲನೆ ನೀಡಲಾಗುತ್ತಿದೆ ಎಂದು ಡಿಸಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಹೇಳಿದ್ದಾರೆ. 

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ವಿವಿಧ ಐತಿಹಾಸಿಕ ತಾಣಗಳಲ್ಲಿನ ಸ್ಮಾರಕಗಳ ಸಂರಕ್ಷಣೆ ಕುರಿತ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಯೋಜನೆಯ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾದಾಮಿ ಗುಹೆಯ ಹತ್ತಿರವಿರುವ 73 ಮತ್ತು 23 ಮನೆಗಳ ಕಟ್ಟಡಗಳ ಮೌಲ್ಯಮಾಪನ ಕಾರ್ಯವನ್ನು 15 ದಿನದೊಳಗಾಗಿ ಪೂರ್ಣಗೊಳಿಸುವಂತೆ ಬಾದಾಮಿ ಪುರಸಭೆ ಮುಖ್ಯಾಧಿಕಾರಿ ಗಿರೀಶ ಅವರಿಗೆ ಸೂಚಿಸಿದ್ದಾರೆ. ಈಗಾಗಲೇ 40 ಮನೆಗಳ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

ಸಕ್ಕರೆ ಕಾರ್ಖಾನೆ ಹತ್ತಿರ ಜಮೀನು ಖರೀದಿಸಲು ನಿರ್ಧರಿಸಲಾಗಿದ್ದು, ಉಪವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲು ಸೂಚಿಸಿದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಾದಾಮಿಯಲ್ಲಿ ಪಾರ್ಕಿಂಗ್ ಪ್ಲಾಜಾ ನಿರ್ಮಾಣಕ್ಕೆ ಬಾದಾಮಿ ಎಪಿಎಂಸಿ ವ್ಯಾಪ್ತಿಯ 17 ಎಕರೆ ಜಮೀನು ಲಭ್ಯವಿದ್ದು, ಈ ಬಗ್ಗೆ ಪ್ರವಾಸೋದ್ಯಮ ಸಚಿವರಿಗೆ ತಕ್ಷಣವೇ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. ಬಾದಾಮಿಗೆ ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ 5 ಕೋಟಿ ಅನುದಾನ ನೀಡಿದ್ದು, ತಕ್ಷಣವೇ ಡಿಪಿಆರ್ ತಯಾರಿಸುವಂತೆ ಪ್ರವಾಸೋ ದ್ಯಮ ಇಲಾಖೆ ಉಪನಿರ್ದೇಶಕರಿಗೆ ತಿಳಿಸಿದರು.

ಪಟ್ಟದಕಲ್ಲು ಗ್ರಾಮದಲ್ಲಿರುವ ಐತಿಹಾಸಿಕ ಸ್ಮಾರಕ ಗಳ ಸುತ್ತಮುತ್ತಲಿನ 920 ಮನೆಗಳ ಕಟ್ಟಡಗಳನ್ನು ಸ್ಥಳಾಂತರಿಸಲು ಬಾಚಿನಗುಡ್ಡದಿಂದ ಶಂಕರಲಿಂಗ ಗುಡಿಯ ಹತ್ತಿರ ಹೋಗುವ ಮಾರ್ಗದಲ್ಲಿ ಒಟ್ಟು 115 ಎಕರೆ ಜಮೀನನ್ನು ಗುರುತಿಸಲಾಗಿದ್ದು, ಸ್ಥಳಾಂತಗೊಳ್ಳುವ ಮನೆಗಳ ಮಾಲೀಕರು ಹಾಗೂ ಜಮೀನು ನೀಡುವ ಮಾಲೀಕರ ಸಮಾಲೋಚನಾ ಸಭೆಯನ್ನು ಮಾ.27 ರಂದು ನಡೆಸಲು ತೀರ್ಮಾನಿಸಲಾಗಿದೆ. 

ಈಗಾಗಲೇ ಪಟ್ಟದಕಲ್ಲು ಗ್ರಾಮದಲ್ಲಿರುವ ಶಾಲೆಯನ್ನು ಪುರಾತತ್ವ ಇಲಾಖೆಯನ್ನು ಸಂಪರ್ಕಿಸಿ ಮಾದರಿ ಶಾಲಾ ಕಟ್ಟಡ ನಿರ್ಮಿಸಲು ತಿಳಿಸಿದರು. ಐಹೊಳೆ ಪ್ರವಾಸಿ ತಾಣಗಳಲ್ಲಿರುವ ಮನೆಗಳನ್ನು ಸಂಪೂರ್ಣವಾಗಿ ಸ್ಥಳಾಂತರಿಸಲು ಐಹೊಳೆಯಿಂದ ಸೂಳೆಬಾವಿಗೆ ಕಡೆ ಹೋಗುವ ಮಧ್ಯ 173 ಎಕರೆ ಜಮೀನನ್ನು ಗುರುತಿಸಿ ಖರೀದಿಗಾಗಿ ಸರ್ಕಾರಕ್ಕೆ ಪ್ರಸ್ತಾ ವನೆ ಸಲ್ಲಿಸಲಾಗಿದ್ದು, ಅನುಮೋದನೆ,ಅನುದಾನ ಬಂದ ನಂತರ ಕ್ರಮಕೈಗೊಳ್ಳಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಗರಿ ಮಾಪನ್ವಾರ, ಉಪವಿಭಾ ಗಾಧಿಕಾರಿ ಎಂ.ಗಂಗಪ್ಪ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಮೆಹಬೂ ಬಿ, ಪುರಾತತ್ವ ಇಲಾಖೆಯ ಅಧೀಕ್ಷಕರ ಅನಿಲಕು ಮಾರ, ಪ್ರವಾ ಸೋದ್ಯಮ ಸಮಾಲೋಕಚ ಅನಿಲಕು ಮಾರ,ಬಾ ದಾಮಿ ತಹಸೀಲ್ದಾರ್ ಇಂಗಳೆ, ಹುನಗುಂದ ತಹಸೀಲ್ದಾರ್ ಬಸವರಾಜ ನಾಗರಾಳ ಇದ್ದರು.
 

Follow Us:
Download App:
  • android
  • ios