Asianet Suvarna News Asianet Suvarna News

ದಾವಣಗೆರೆಗೆ ಸಿಗುತ್ತಾ ಸಚಿವ ಸ್ಥಾನ: ಬದಲಾಗ್ತಾರ ಉಸ್ತುವಾರಿ ಸಚಿವರು?

ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನಕ್ಕಾಗಿ ಮುಂಚಿನಿಂದಲೂ ಆಗ್ರಹ ಕೇಳಿಬರುತ್ತಿದ್ದು, ಈ ಬಗ್ಗೆ ಮತ್ತೊಮ್ಮೆ ಧ್ವನಿ ಎತ್ತಲಾಗಿದೆ. ಇನ್ನು ಉಸ್ತುವಾರಿ ಸಚಿವರು ಬದಲಾಗ್ತಾರಾ ಎನ್ನುವ ಪ್ರಶ್ನೆಗೂ ಉತ್ತರ ಸಿಕ್ಕಿದೆ.

Renukacharya Wants Minister Post For Davanagere
Author
Bengaluru, First Published Aug 24, 2020, 2:18 PM IST

ಹೊನ್ನಾಳಿ (ಆ.24): ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ ಅವರನ್ನು ಬದಲಾಯಿಸುವಂತೆ ಜಿಲ್ಲೆಯ ಯಾವೊಬ್ಬ ಶಾಸಕರು ಕೂಡ ಮಾತನಾಡಿಲ್ಲ. ಆದರೆ, ಜಿಲ್ಲೆಗೊಂದು ಸಚಿವ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದೇವೆ ಎಂದು ಸಿ.ಎಂ. ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಸ್ಪಷ್ಟಪಡಿಸಿದರು.

ಪಟ್ಟಣದ ಕೋರ್ಟ್‌ ರಸ್ತೆಯನ್ನು .1.70 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಮಾಡುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟಪರಿಶೀಲನೆ ನಡೆಸಿ, ಕಳಪೆ ಮಾಡದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಗಾಂಧಿಯೇತರರಿಗೆ 'ಕೈ' ಪಟ್ಟ: ಅಧ್ಯಕ್ಷ ರೇಸ್‌ನಲ್ಲಿ ಖರ್ಗೆ ಹೆಸರು ಮುಂಚೂಣಿಯಲ್ಲಿ!...

ಜಿಲ್ಲೆಯ ಉಸ್ತುವಾರಿ ಸಚಿವ ಬೈರತಿ ಬಸವರಾಜ್‌ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇಂತಹ ಉತ್ಸಾಹಿ ಸಚಿವರು ನಮ್ಮ ಜಿಲ್ಲೆಗೆ ಸಿಕ್ಕಿದ್ದು ನಮ್ಮ ಹೆಮ್ಮೆ. ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯ ಮಾಡಿದ್ದೇವೆಯೇ ವಿನಃ ಉಸ್ತುವಾರಿ ಸಚಿವರನ್ನು ಬದಲಾಯಿಸಿ ಎಂದು ಎಲ್ಲಿಯೂ ಕೇಳಿಲ್ಲ ಎಂದು ಹೇಳಿದರು.

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾದ್ಯಂತ ನೂರಾರು ಕೋಟಿ ವೆಚ್ಚದಲ್ಲಿ ಸಿ.ಸಿ. ರಸ್ತೆಗಳನ್ನು ನಿರ್ಮಿಸಲಾಗಿದೆ. ಬಾಕಿ ಉಳಿದಿರುವ ಹಳ್ಳಿಗಳಲ್ಲೂ ಮುಂದಿನ ದಿನಗಳಲ್ಲಿ ಸಿ.ಸಿ. ರಸ್ತೆ ಮಾಡಿಸುವ ಮೂಲಕ ಅವಳಿ ತಾಲೂಕುಗಳನ್ನು ಧೂಳುಮುಕ್ತ ತಾಲೂಕುಗಳನ್ನಾಗಿ ಮಾಡುತ್ತೇನೆ ಎಂದು ರೇಣುಕಾಚಾರ್ಯ ಹೇಳಿದರು.

ಕಾಂಗ್ರೆಸ್ ಪಕ್ಷ ವಿಸರ್ಜನೆ ಆದರೆ ಒಳ್ಳೆಯದು: ಡಿಸಿಎಂ ಅಶ್ವಥ್ ನಾರಾಯಣ್.

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ್ದು, ವರ್ಷದ ಒಳಗೆ ಹೊನ್ನಾಳಿ- ನ್ಯಾಮತಿ ಅವಳಿ ತಾಲೂಕಿನಲ್ಲಿ ನೂರಾರು ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆಗಳನ್ನು ಮಾಡಲಾಗಿದೆ. ಹೊನ್ನಾಳಿ- ನ್ಯಾಮತಿ ಅವಳಿ ತಾಲೂಕುಗಳು ನನ್ನ ಎರಡು ಕಣ್ಣುಗಳು. ಹಾಗಾಗಿ, ಅವಳಿ ತಾಲೂಕನ್ನು ಅಭಿವೃದ್ಧಿ ಮಾಡಬೇಕಾಗಿದ್ದು ನನ್ನ ಕರ್ತವ್ಯ. ಈ ನಿಟ್ಟಿನಲ್ಲಿ ಈಗಾಗಲೇ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲೂ ಸಿಸಿ ರಸ್ತೆ ಮಾಡುವ ಮೂಲಕ ಧೂಳುಮುಕ್ತ ತಾಲೂಕುಗಳಾಗಿ ಮಾಡುತ್ತೇನೆ ಎಂದರು.

ನ್ಯಾಮತಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಎಸ್‌.ಪಿ. ರವಿಕುಮಾರ್‌, ಬಿಜೆಪಿ ಮುಖಂಡರಾದ ಅಜಯ್‌ಕುಮಾರ್‌, ರವಿಕುಮಾರ್‌ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿದ್ದರು.
 

Follow Us:
Download App:
  • android
  • ios