Asianet Suvarna News Asianet Suvarna News

Republic Day: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ: ಧ್ವಾಜಾರೋಹಣಕ್ಕೆ ಭಾರಿ ಬಿಗಿ ಭದ್ರತೆ

ರಾಜ್ಯ ಸರ್ಕಾರ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಮೈದಾನದ ಸುತ್ತಲೂ 50 ಸಿಸಿ ಕ್ಯಾಮೆರಾ ಮತ್ತು ಬ್ಯಾರಿಕೇಡ್‌ ಅಳವಡಿಸಲಾಗಿದ್ದು, ಭಾರಿ ಬಿಗಿ ಭದ್ರತೆ ಒದಗಿಸಲಾಗಿದೆ.

Republic Day celebration in Chamarajpet Eidgah maidana Tight security for flag hosting sat
Author
First Published Jan 25, 2023, 10:55 AM IST

ಬೆಂಗಳೂರು (ಜ.25): ಚಾಮರಾಜಪೇಟೆ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ, ವಿವಿಧ ಕನ್ನಡಪರ ಮತ್ತು ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಮೈದಾನದ ಸುತ್ತಲೂ 50 ಸಿಸಿ ಕ್ಯಾಮೆರಾ ಮತ್ತು ಬ್ಯಾರಿಕೇಡ್‌ ಅಳವಡಿಸಲಾಗಿದ್ದು, ಭಾರಿ ಬಿಗಿ ಭದ್ರತೆ ಒದಗಿಸಲಾಗಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ದಿನದಂದು  ರಾಷ್ಟ್ರ ಧ್ವಜಾರೋಹಣಕ್ಕೆ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ನಾಳೆ ನಡೆಯಲ್ಲಿರೋ 74ನೇ ಗಣರಾಜ್ಯೋತ್ಸವ ಅಚರಣೆಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಾಟ ಮಾಡಲಿದೆ. ಇದೇ ಮೊದಲ ಬಾರಿಗೆ ಗಣ ರಾಜ್ಯೋತ್ಸವ ಕಾರ್ಯಕ್ರಮ ಈದ್ಗಾ ಮೈದಾನದಲ್ಲಿ ನಡೆಯಲಿದೆ. ಇನ್ನು ಈ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡುವಂತೆ ಚಾಮರಾಜಪೇಟೆ ನಾಗರಿಕ ಒಕ್ಕೂಟ ವೇದಿಕೆ ಹೋರಾಟದ ಮನವಿ ಮಾಡಿತ್ತು. ವಿವಿಧ ಸಂಘಟನೆಗಳು ಕೂಡ ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದವು.

Eidgah maidana: ಸರ್ಕಾರದ ವತಿಯಿಂದಲೇ ಗಣರಾಜ್ಯೋತ್ಸವ ಆಚರಣೆ; ಸಂಸದ ಪಿ.ಸಿ.ಮೋಹನ್

50ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಅಳವಡಿಕೆ: ಗಣ ರಾಜ್ಯೋತ್ಸವದ ಧ್ವಜಾರೋಹಣದ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ. ಹೆಚ್ಚುವರಿ ಪೊಲೀಸ್ ನೀಯೋಜನೆಗೆ ಜಿಲ್ಲಾಡಳಿತ ಮನವಿ ಮಾಡಿದ್ದು, ಮೈದಾನದ ಸುತ್ತ ಪೊಲೀಸ್ ಕಣ್ಗಾವಲು ಇರಿಸಲಾಗಿದೆ. ಮೈದಾನದ ಸುತ್ತಲೂ 50ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಜೊತೆಗೆ, ಬೃಹತ್ ಕಟ್ಟಡಗಳ ಮೇಲಿನಿಂದ "ಐ ವಾಚ್" ಮೂಲಕ ನಿಗಾವಹಿಸಲಾಗುತ್ತಿದೆ. ಯಾವುದೇ ಅನುಮಾನಾಸ್ಪದ ವ್ಯಕ್ತಿ ಅಥವಾ ಘಟನೆ ನಡೆಯುವ ಮುನ್ಸೂಚನೆ ಕಂಡುಬಂದಲ್ಲಿ ತಕ್ಷಣವೇ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತದೆ.

ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ: ಕಂದಾಯ ಇಲಾಖೆಯಿಂದ ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣಕ್ಕೆ ಇಂದು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಮೈದಾನವನ್ನು ಸ್ವಚ್ಚ ಮಾಡಿ ಬ್ಯಾರಕೇಡ್‌ ಅಳವಡಿಸಲಾಗಿದೆ. ಕಂದಾಯ ಇಲಾಖೆಯ ಶಿಪ ವಿಭಾಗಾಧಿಕಾರಿ ಶಿವಣ್ಣ ಅವರಿಂದ ಧ್ವಜಾರೋಹಣ ನೆರವೇರಿಸಲಾಗುತ್ತದೆ. ಆದರೆ, ಈ ಮೈದಾನ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯದಂತೆ ಪೊಲೀಸ್‌ ಇಲಾಖೆ ನಿಗಾ ವಹಿಸಲಾಗಿದೆ. ಜೊತೆಗೆ, ಇಲ್ಲಿ ಧ್ವಜಾರೋಹಣ ಮಾತ್ರ ಸರ್ಕಾರ ಅನುಮತಿ ನೀಡಿದ್ದು, ಯಾವುದೇ ಸಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಂತೆ ಸೂಚನೆಯನ್ನು ನೀಡಿದೆ.

ಬೆಂಗ್ಳೂರಲ್ಲಿ ಗಣರಾಜ್ಯೋತ್ಸವ: ಮಾಣಿಕ್ ಷಾ ಗ್ರೌಂಡ್‌ನಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಶಾಲೆಯ ಮಕ್ಕಳನ್ನು ಕರೆಸಿ ಧ್ವಜಾರೋಹಣ: ವಿವಾದಿತ ಮೈದಾನದಲ್ಲಿ ನಾಳೆ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸರ್ಕಾರಿ ಹಾಗೂ ಕೆಲವು ಖಾಸಗಿ ಶಾಲೆ ಮಕ್ಕಳು ಆಗಮಿಸಲಿಕ್ಕೆ ಅವಕಾಶ ನೀಡಿದೆ. ಜೊತೆಗೆ ಸ್ಥಳೀಯ ಶಾಸಕ ಜಮೀರ್‌ ಅಹಮದ್‌, ಸಂಸದ ಪಿ.ಸಿ. ಮೋಹನ್‌ ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆಯ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ. ಜನವರಿ 26ರಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.

ಬೆಂ. ನಗರ ಡಿಸಿ ದಯಾನಂದ ಭೇಟಿ: ಈ ಬಾರಿ ಬಿಗಿ ಪೊಲೀಸ್ ಭದ್ರತೆಯಲ್ಲಿ ನಡೆಯಲಿದೆ ಗಣ ರಾಜ್ಯೋತ್ಸವ ನಡೆಯಲಿದೆ. ಈಗಾಗಲೇ ಭದ್ರತೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸಿದ್ದತೆ ಹಿನ್ನೆಲೆಯಲ್ಲಿ ಇಂದು ಚಾಮರಾಜಪೇಟೆ ಆಟದ ಮೈದಾನಕ್ಕೆ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಬಾರಿ ಗಣರಾಜ್ಯೋತ್ಸವ ಆಚರಣೆಗೆ ಸಾರ್ವಜನಿಕರಿಗೂ ಸ್ಥಳೀಯ ಮುಂಖಡರುಗಳಿಗೆ ಅವಕಾಶ ನೀಡುವಂತೆ ಸಂಘ ಸಂಸ್ಥೆಗಳ ಮನವಿ ಮಾಡಿದ್ದವು. ಈ ಮನವಿಯನ್ನು ಪುರಸ್ಕರಿಸುವ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಕಳೆದ ಬಾರಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಸೂಕ್ಷ್ಮ ಪರಿಸ್ಥಿತಿ ಹಿನ್ನೆಲೆ ಸಾರ್ವಜನಿಕರಕಗೆ ಅವಕಾಶ ನೀಡದೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಗಿತ್ತು. 

Follow Us:
Download App:
  • android
  • ios