Asianet Suvarna News Asianet Suvarna News

ಕಾಂಗ್ರೆಸ್‌ಗೆ ಜೆಡಿಎಸ್ ಮುಖಂಡ ರೇವಣ್ಣ ಸವಾಲ್

  • ಕಾಂಗ್ರೆಸ್‌ಗೆ ತಾಕತ್ತಿದ್ದರೆ ಮುಂದಿನ ಚುನಾವಣೆ ನಂತರ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಕೊಡುವುದಾಗಿ ಘೋಷಣೆ ಮಾಡಲಿ 
  • ಕಾಂಗ್ರೆಸ್ ಮುಖಂಡರಿಗೆ  ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸವಾಲು 
Revanna Challenge To Congress Leaders snr
Author
Bengaluru, First Published Oct 5, 2021, 8:31 AM IST

ಹಾಸನ (ಅ.05): ಕಾಂಗ್ರೆಸ್‌ಗೆ (congress) ತಾಕತ್ತಿದ್ದರೆ ಮುಂದಿನ ಚುನಾವಣೆ ನಂತರ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಕೊಡುವುದಾಗಿ ಘೋಷಣೆ ಮಾಡಲಿ ನೋಡೋಣ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಸವಾಲು ಹಾಕಿದರು. 

ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಹೀನಾಯ ಪರಿಸ್ಥಿತಿ ಎದುರಿಸುತ್ತಿದೆ. ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಬೇಕು ಎನ್ನುತ್ತಿದ್ದ ಕಾಂಗ್ರೆಸ್‌ ನಾಯಕರೇ ಈಗ ಬಿಜೆಪಿ (BJP) ಶಾಸಕರನ್ನು ಪಕ್ಷಕ್ಕೆ ಸೆಳೆಯುತ್ತಿದ್ದಾರೆ.

ಒಂದೇ ವೇದಿಕೆಯಲ್ಲಿ ನಿಖಿಲ್-ಪ್ರಜ್ವಲ್: ಪಕ್ಷ ಕಟ್ಟಲು ಪಣತೊಟ್ಟ ಸಹೋದರರು

ರೇವಣ್ಣ ಸಿಡಿಮಿಡಿ

ಇದರಿಂದಾಗಿ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಸಾಬೀತಾಗುತ್ತದೆ ಎಂದರು. ಇದೇ ವೇಳೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ(Assembly Election) ಹಾಸನ ಕ್ಷೇತ್ರದಿಂದ ಯಾರಿಗೆ ಟಿಕೆಟ್‌ ನೀಡುತ್ತಾರೆಂಬ ಪತ್ರಕರ್ತರ ಪ್ರಶ್ನೆಗೆ ಹಾಸನಾಂಬೆ, ಲಕ್ಷ್ಮೀನರಸಿಂಹ ಸೇರಿ ನಮ್ಮ ಮನೆ ದೇವರು ಯಾರಿಗೆ ಆಶೀರ್ವಾದ ನೀಡುತ್ತಾರೋ ಅವರಿಗೆ ಟಿಕೆಟ್‌ ಸಿಗಲಿದೆ ಎಂದು ರೇವಣ್ಣ ಒಗಟಿನ ಉತ್ತರ ನೀಡಿದರು.

ಜೆಡಿಎಸ್‌ ನಾಯಕರು ಒಬ್ಬರಿಂದೊಬ್ಬರಂತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಇದರಿಂದ ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ ಕೆರಳಿದ್ದು, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ಭಾಗದಲ್ಲಿ ದಳಪತಿಗಳಿಗೆ ಮತ್ತೊಂದು ಶಾಕ್: 2ನೇ ವಿಕೆಟ್ ಪತನ

ಹಾಸನದಲ್ಲಿ ಇಂದು (ಅ.01) ಮಾತನಾಡಿದ ರೇವಣ್ಣ, ಜೆಡಿಎಸ್‌ ನಾಯಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಯತ್ನವಾಗ್ತಿದೆ. ಕಾಂಗ್ರೆಸ್‌ಗೆ ಈ ಸ್ಥಿತಿ ಬಂತು ಎಂದು ನನಗೆ ವ್ಯಥೆ ಆಗುತ್ತೆ ಎಂದರು

ಅಣ್ಣತಮ್ಮರ ಜುಗಲ್ಬಂದಿ

 

ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್‌ ಮಿಷನ್‌ ​123 ಗುರಿಯನ್ನಿಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಕಾರ್ಯಗಳನ್ನು ಕೈಗೊಂಡಿದೆ.

ಈ ವೇದಿಕೆಯಲ್ಲಿ ಜೆಡಿ​ಎಸ್‌ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಒಟ್ಟಿಗೆ ಕಾಣಿಸಿಕೊಂಡರು. ಜೊತೆಯಾಗಿ ರಾಜ್ಯ ಪ್ರವಾಸ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡುವುದಾಗಿ ಸಂಕಲ್ಪ ಮಾಡಿದರು. ಈ ಮೂಲಕ ತಮ್ಮಿಬ್ಬರ ನಡುವೆ ಭಿನ್ನಮತ ಇದೆ ಎಂದು ಬಿಂಬಿಸಿದ್ದವರಿಗೆ ತಮ್ಮೊಳಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶ ರವಾ​ನಿ​ಸಿ​ದರು. 

ಜನರ ಮನೆಮನ ಮುಟ್ಟುವ ನಿಟ್ಟಿನಲ್ಲೇ ಈಗಾಗಲೇ ಎಲ್ಲ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧತೆ ಮಾಡಿಕೊಂಡಿದ್ದೇವೆ.  ಇದಕ್ಕೆ ಪೂರಕವಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಅವರಿಬ್ಬರೂ ಜೊತೆಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ ಎಂದು ಎಚ್‌ಡಿಕೆ ಹೇಳಿದ್ಧಾರೆ.ನಿಖಿಲ್- ಪ್ರಜ್ವಲ್ ಜುಗಲ್ಬಂಧಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. 

Follow Us:
Download App:
  • android
  • ios